September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಡಿ.ಕೆ.ಆರ್.ಡಿ.ಎಸ್ ಬೆಳ್ತಂಗಡಿ ಹಾಗೂ ಕ್ರಾಸ್ ಸಂಸ್ಥೆ ಬೆಂಗಳೂರು ನೇತೃತ್ವದಲ್ಲಿ ಒಕ್ಕೂಟ ಬಲವರ್ಧನೆ ಬಗ್ಗೆ ತರಬೇತಿ ಕಾರ್ಯಾಗಾರ

ಬೆಳ್ತಂಗಡಿ: ಮಿಸೇರಿಯೋರ್ ಪ್ರಾಯೋಜಕತ್ವದಲ್ಲಿ ಕ್ರಾಸ್ ಸಂಸ್ಥೆ ಬೆಂಗಳೂರು ಹಾಗೂ ಡಿ.ಕೆ.ಆರ್.ಡಿ.ಎಸ್ ಬೆಳ್ತಂಗಡಿ ಇದರ ನೇತೃತ್ವದಲ್ಲಿ ಸಿ.ಒ.ಡಿ.ಪಿ ಮಂಗಳೂರು, ಕಿಡ್ಸ್ ಪುತ್ತೂರು, ಸಂಪದ ಉಡುಪಿ ಹಾಗೂ ಕೆ.ಡಿ.ಡಿ.ಸಿ ಕಾರವಾರ ಸಹಕಾರದಿಂದ ಜೋನಲ್ ಮಟ್ಟದ ಒಕ್ಕೂಟ ಬಲವರ್ಧನೆ ಮತ್ತು ಸುಸ್ಥಿರತೆ ಬಗ್ಗೆ ತರಬೇತಿ ಕಾರ್ಯಕ್ರಮವನ್ನು ಡಿ.09 ರಂದು ಜ್ಞಾನನಿಲಯ ಬೆಳ್ತಂಗಡಿಯಲ್ಲಿ ಆಯೋಜಿಸಿಲಾಗಿತ್ತು.

ಕಾರ್ಯ ಕ್ರಮದ ಅಧ್ಯಕ್ಷತೆಯನ್ನು ಸ್ನೇಹಜ್ಯೋತಿ ಮಹಿಳಾ ತಾಲೂಕು ಒಕ್ಕೂಟ ಹಾಗೂ ಮಾನಿನಿ ರಾಜ್ಯ ಮಹಿಳಾ ಒಕ್ಕೂಟ ಅಧ್ಯಕ್ಷೆ ಶ್ರೀಮತಿ ಮಂಜುಳಾ ಜೋನ್ ವಹಿಸಿದ್ದರು. ಉದ್ಘಾಟನೆಯನ್ನು ಕ್ರಾಸ್ ಸಂಸ್ಥೆ ಬೆಂಗಳೂರು ಇಲ್ಲಿನ ಮಹಿಳಾ ಸಬಲೀಕರಣ ಯೋಜನೆಯ ರಾಜ್ಯ ಸಂಯೋಜಕರಾದ ವಂ. ಸಿ| ನ್ಯಾನ್ಸಿ ಲೋಬೊ ನೆರವೇರಿಸಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.

ಡಿ.ಕೆ.ಆರ್.ಡಿ.ಎಸ್ ಸಂಸ್ಥೆಯ ನಿರ್ದೇಶಕರಾದ ವಂದನೀಯ ಫಾ. ಬಿನೋಯಿ ಎ.ಜೆ ರವರು ಪ್ರಾಸ್ತಾವಿಕವಾಗಿ ಮಾತನಾಡಿದರು. ಸಂಪನ್ಮೂಲ ವ್ಯಕ್ತಿಯಾಗಿ ಎಸ್.ಎಮ್.ಎಸ್.ಎಸ್ ಸಂಸ್ಥೆ ಶಿವಮೊಗ್ಗ ಇಲ್ಲಿನ ಯೋಜನಾ ಸಂಯೋಜಕ ಜಗದೀಶ್ ರವರು ಒಕ್ಕೂಟಗಳ ಬಲವರ್ಧನೆ ಮತ್ತು ಸುಸ್ಥಿರತೆ ಬಗ್ಗೆ ತರಬೇತಿ ನೀಡಿದರು.

ಸೀಮಾ ಮಥಾಯಸ್, ಸಿ.ಒ.ಡಿ.ಪಿ ಮಂಗಳೂರು, ಮರೀನಾ ಲುವಿಸ್, ಸಂಪದ ಉಡುಪಿ, ಸರಸ್ವತಿ, ಕಿಡ್ಸ್ ಪುತ್ತೂರು, ಹಾಗೂ ಶ್ರೀಮತಿ ರಾಜೇಶ್ವರಿ, ಕೆ.ಡಿ.ಡಿ.ಎಸ್ ಕಾರವಾರ ಇಲ್ಲಿನ ಒಕ್ಕೂಟ ಪ್ರತಿನಿಧಿಗಳು ಉಪಸ್ಥಿತರಿದ್ದರು. ಸಿ.ಒ.ಡಿ.ಪಿ ಸಂಸ್ಥೆಯ ಸಿಬ್ಬಂದಿಗಳು ಪ್ರಾರ್ಥನೆ ಗೀತೆ ಹಾಡಿದರು. ಡಿ.ಕೆ.ಆರ್.ಡಿ.ಎಸ್ ಕಾರ್ಯಕರ್ತ ಮಾರ್ಕ್ ಡಿ ಸೋಜ ಸ್ವಾಗತಿಸಿದರು. ಶ್ರೀಮತಿ ಮಂಜುಳಾ ವಂದಿಸಿದರು. ಸಂಯೋಜಕಿ ಶ್ರೀಮತಿ ಸಿಸಿಲ್ಯಾ ತಾವ್ರೊ ಕಾರ್ಯಕ್ರಮ ನಿರೂಪಿಸಿದರು.

Related posts

ಕಣಿಯೂರು ಗ್ರಾಮ ಪಂಚಾಯತ್ ನಲ್ಲಿ ವಿಕಲ ಚೇತನ ವಿಶೇಷ ಗ್ರಾಮ ಸಭೆ

Suddi Udaya

ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪ: ಮೇ 3ರಂದು ನಡೆದ ನೀಟ್-ಯುಜಿ ಪರೀಕ್ಷೆ ರದ್ದು

Suddi Udaya

ಯುವವಾಹಿನಿ ಬೆಳ್ತಂಗಡಿ ಘಟಕದ ನೂತನ ಪದಾಧಿಕಾರಿಗಳಿಗೆ “ಹೆಜ್ಜೆಗೊಂದು ಸ್ಫೂರ್ತಿ” ವ್ಯಕ್ತಿತ್ವ ವಿಕಸನ ತರಬೇತಿ ಕಾರ್ಯಕ್ರಮ

Suddi Udaya

ಜೆಸಿಐ ಬೆಳ್ತಂಗಡಿಯಿಂದ ಪ್ರವರ್ತಿತಗೊಂಡು ಜೆಸಿಐ ಉಜಿರೆ ಸಿಟಿ ಘಟಕದ ಮರು ಸ್ಥಾಪನೆ: ಯುವ ಉದ್ಯಮಿ ಮಹಮ್ಮದ್ ಮಿರ್ಷಾದ್ ಅಧ್ಯಕ್ಷರಾಗಿ ಪದ ಸ್ವೀಕಾರ.

Suddi Udaya

ಕಣಿಯೂರು ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷರಾಗಿ ಯತೀಶ್ ಶೆಟ್ಟಿ ಪಣೆಕ್ಕರ ಆಯ್ಕೆ

Suddi Udaya

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ನೀರುಮಾರ್ಗ ಶಾಖೆಯ ಚತುರ್ಥ ವಾರ್ಷಿಕೋತ್ಸವದ ಪ್ರಯುಕ್ತ ಉಚಿತ ವೈದ್ಯಕೀಯ, ನೇತ್ರ ತಪಾಸಣೆ ಹಾಗೂ ದಂತ ಚಿಕಿತ್ಸಾ ಶಿಬಿರ

Suddi Udaya
error: Content is protected !!