23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉರುವಾಲು ಶ್ರೀ ಭಾರತೀ ವಿದ್ಯಾಸಂಸ್ಥೆಯಲ್ಲಿ ಶಾಲಾ ವಾರ್ಷಿಕೋತ್ಸವ

ಉರುವಾಲು ಶ್ರೀ ಭಾರತೀ ವಿದ್ಯಾಸಂಸ್ಥೆ ಇಲ್ಲಿ ಶಾಲಾ ವಾರ್ಷಿಕೋತ್ಸವ( ಮಕ್ಕಳ ಹಬ್ಬ ) ನಡೆಯಿತು. ಕಾರ್ಯಕ್ರಮದಲ್ಲಿ ಶಾಲಾ ಸೇವಾಸಮಿತಿ ಅಧ್ಯಕ್ಷೆ ಶ್ರೀಮತಿ ಚಂದ್ರಿಕಾ ಭಟ್ ಇವರು ಅಧ್ಯಕ್ಷ ಸ್ಥಾನವನ್ನು ವಹಿಸಿದ್ದರು.

ಮುಖ್ಯ ಅತಿಥಿಯಾಗಿ ಅರವಿಂದ ದರ್ಬೆ ಅಧ್ಯಕ್ಷರು, ಉಪ್ಪಿನಂಗಡಿ ಮಂಡಲ ದೀಪ ಉಜ್ವಲಿಸಿ, ಉದ್ಘಾಟನೆಯನ್ನು ಮಾಡಿದರು. ಹಾಗೂ ಕಣಿಯೂರು ಗ್ರಾಮ ಪಂಚಾಯತ್ ಸದಸ್ಯರಾದ ಕೃಷ್ಣಪ್ರಸಾದ್, ಶ್ರೀಮತಿ ಜಲಜಾ, ಸ್ಥಳೀಯ ವ್ಯಾಪಾರಸ್ಥರಾದ ಕೆ. ವಿ. ಅಬ್ದುಲ್ ಹಮೀದ್ ಉಪಸ್ಥಿತರಿದ್ದರು.

ಸಮಾರೋಪ ಸಮಾರಂಭದ ಅಧ್ಯಕ್ಷ ಸ್ಥಾನವನ್ನು ಸೇವಾಸಮಿತಿಯ ದಿಗ್ದರ್ಶಕರಾದ ಮಾಯಿಲ್ತೋಡಿ ಈಶ್ವರ್ ಭಟ್ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಹಾರಕೆರೆ ನಾರಾಯಣ ಭಟ್, ರವಿರಾಜ್ ಉರುವಾಲು,ರಾಜಮಂದಿರ , ಹೆಚ್. ಕೃಷ್ಣ ಭಟ್ ಹತ್ತೊಕ್ಕಲು ಉಪಸ್ಥಿತರಿದ್ದರು. ಮಹಮ್ಮದ್ ಪೀರ್ಯ, ಸೇವಾ ಸಮಿತಿಯ ಸದಸ್ಯರು, ರಕ್ಷಕ- ಶಿಕ್ಷಕ ಸಂಘದ ಸದಸ್ಯರು ಗೌರವ ಉಪಸ್ಥಿತ ರಿದ್ದರು. ವಾರ್ಷಿಕೋತ್ಸವಕ್ಕೆ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕ ಹರೀಶ್ ಪೂಂಜಾ ಭೇಟಿ ನೀಡಿ ಶುಭಾಶಯಗೈದರು.

ಸಭಾಕಾರ್ಯಕ್ರಮದ ಬಳಿಕ ಶಾಲಾ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನು ಶಾಲಾ ಸಹ ಶಿಕ್ಷಕರಾದ ಮಂಜುಗಣೇಶ್ ಮತ್ತು ಶ್ರೀಮತಿ ಪೂರ್ಣಿಮಾ ನಿರೂಪಿಸಿದರು. ಶಾಲಾ ಮುಖ್ಯ ಶಿಕ್ಷಕಿಯಾದ ಶ್ರೀಮತಿ ಶೋಭಿತಾ ಇವರು ಸ್ವಾಗತಿಸಿದರು. ಮಂಜುಗಣೇಶ್ ವಂದಿಸಿದರು. ಸಮಾರೋಪ ಸಮಾರಂಭದ ಬಳಿಕ ಶಾಲಾ ವಿದ್ಯಾರ್ಥಿಗಳಿಂದ “ಸೀತಾ ಕಲ್ಯಾಣ” ಯಕ್ಷಗಾನ ಪ್ರದರ್ಶನದ ಮೂಲಕ ಕಾರ್ಯಕ್ರಮ ಸಂಪನ್ನಗೊಂಡಿತು.

Related posts

ಭಾರತ್ ಬೀಡಿ ಕಂಪೆನಿ ಉಳಿಸಿ ಭಾರತ್ ಬೀಡಿ ಕಂಪೆನಿ ಎದುರು ಸಿಐಟಿಯು ನೇತೃತ್ವದಲ್ಲಿ ಧರಣಿ ಸತ್ಯಾಗ್ರಹ

Suddi Udaya

ಗುರುವಾಯನಕೆರೆ: ಶಕ್ತಿನಗರ ನಿವಾಸಿ ರಮೇಶ ಶೆಟ್ಟಿ ಹೃದಯಾಘಾತದಿಂದ ನಿಧನ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ ‘ಅಷ್ಟೋತ್ತರ ಸಹಸ್ರನಾಳಿಕೇರ ಶ್ರೀ ಮಹಾಗಣಪತಿ ಹೋಮ, ತಾಯಂದಿರ ಹಾಲುಣಿಸುವ ಕೊಠಡಿ ಲೋಕಾರ್ಪಣೆ ಹಾಗೂ ಕ್ಷೇತ್ರ ಪರಿಚಯ ಪುಸ್ತಕ ಬಿಡುಗಡೆ

Suddi Udaya

ಕಲ್ಮಂಜ: ಪರಾರಿ ಸಿದ್ದಬೈಲು ದ.ಕ.ಜಿ.ಪಂ. ಹಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ

Suddi Udaya

ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸಂಶೋಧನಾ ವಿಧಿ ವಿಧಾನಗಳ ಬಗ್ಗೆ ಕಾರ್ಯಾಗಾರ

Suddi Udaya

ಅರಸಿನಮಕ್ಕಿ: ಎರಡನೇ ಬಾರಿಗೆ ಚುನಾಯಿತರಾಗಿರುವ ಶಾಸಕ ಹರೀಶ್ ಪೂಂಜರವರಿಗೆ ಕಾರ್ಯಕರ್ತರಿಂದ ಅಭಿನಂದನೆ ಮತ್ತು ಚುನಾವಣಾ ಅವಲೋಕನ ಸಭೆ

Suddi Udaya
error: Content is protected !!