23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಎಸ್.ಡಿ.ಎಂ ಪ.ಪೂರ್ವ ಕಾಲೇಜು : ಶೈಕ್ಷಣಿಕ ಸಾಧಕರಿಗೆ ಪ್ರಶಸ್ತಿ ಪ್ರಧಾನ ಸಮಾರಂಭ – ‘ ಪುರಸ್ಕಾರ್ – 2025: ಸಾಂಸ್ಕೃತಿಕ ಹಾಗೂ ಕ್ರೀಡಾ ಸಾಧಕರಿಗೆ ಪುರಸ್ಕಾರ-ಸಾಧಕ ಶಿಕ್ಷಕರಿಗೆ ಸನ್ಮಾನ

ಉಜಿರೆ : ಧನಾತ್ಮಕ ಚಿಂತನೆಗಳು ನಮ್ಮೊಳಗೆ‌ ಹೊಸ ಬದಲಾವಣೆಗಳನ್ನು ಮೂಡಿಸುತ್ತಿದೆ. ಅವಕಾಶಗಳನ್ನು ಸಕ್ರೀಯವಾಗಿ ಬಳಸಿಕೊಂಡಾಗ ನಮ್ಮ ಪ್ರಯತ್ನ ಮತ್ತು ಕನಸುಗಳು ಫಲದಾಯಕವಾಗುತ್ತದೆ. ಶಿಕ್ಷಣ ಸಂಸ್ಥೆಗಳು ಸೇರಿದಂತೆ ವಿದ್ಯಾರ್ಥಿಗಳ ಯಶಸ್ಸಿಗೆ‌ ಮೂಲ ಅಡಿಪಾಯ ಶಿಸ್ತು ಮತ್ತು ಶ್ರದ್ಧೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಪದವಿ ಪೂರ್ವ ಪ್ರಾಂಶುಪಾಲರ ಸಂಘದ ಅಧ್ಯಕ್ಷರು ಹಾಗು ಮಂಗಳೂರಿನ ನಂತೂರು ಎನ್.ಎಸ್.ಎ.ಎಮ್ ಕಾಲೇಜಿನ ಪ್ರಾಂಶುಪಾಲ ಡಾ. ನವೀನ್ ಶೆಟ್ಟಿ ಕೆ. ಅಭಿಪ್ರಾಯ ಪಟ್ಟರು.

ಇವರು ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಪೂರ್ವ ಕಾಲೇಜಿನ ವತಿಯಿಂದ ಕಾಲೇಜಿನ ಇಂದ್ರಪ್ರಸ್ಥ ಸಭಾಂಗಣದಲ್ಲಿ ಆಯೋಜಿಸಿದ್ದ ಪ್ರಸಕ್ತ ಸಾಲಿನ ‘ಪುರಸ್ಕಾರ್ – 2025’ ಶೈಕ್ಷಣಿಕ ಸಾಧಕರ ಪ್ರಶಸ್ತಿ ಪ್ರಧಾನ ಸಮಾರಂಭ ದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದರು .

ಎಸ್.ಡಿ.ಎಂ ಪದವಿ (ಸ್ವಾಯತ್ತ) ಕಾಲೇಜಿನ ಪ್ರಾಂಶುಪಾಲ ಪ್ರೊ. ವಿಶ್ವನಾಥ್ ಪಿ ಮಾತನಾಡಿ ಎಸ್.ಡಿ.ಎಂ ಶಿಕ್ಷಣಗಳು , ಪಠ್ಯದ ಜೊತೆಗೆ ಜೀವನ ಶಿಕ್ಷಣವನ್ನು ಕಲಿಸಿಕೊಡುವ ನಿರಂತರ ಕಾರ್ಯ ನಡೆಯುತ್ತಿದೆ. ವಿದ್ಯಾರ್ಥಿಗಳು ತಮ್ಮ ಜೀವನದ ಗುರಿಯನ್ನು ಸ್ಪಷ್ಟ ಪಡಿಸಿಕೊಂಡು, ಅದಕ್ಕನುಗುಣವಾಗಿ ನಿರಂತರ ಪ್ರಯತ್ನ ಮತ್ತು ಆತ್ಮವಿಶ್ವಾಸದಿಂದ ಹೆಜ್ಜೆ ಹಾಕಬೇಕು. ನಕಾರಾತ್ಮಕ ಆಕರ್ಷಣೆಗಳಿಗೆ ಒಳಗಾಗದೆ ನಮ್ಮ ಗುರಿಯನ್ನು ಬೆನ್ನತ್ತುವ ಮೂಲಕ ಯಶಸ್ಸಿನ ತುದಿಯನ್ನು ತಲುಪುವುದು ನಮ್ಮೆಲ್ಲರ ಧ್ಯೇಯವಾಗಬೇಕು ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಎಸ್.ಡಿ.ಎಂ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಪ್ರಮೋದ್ ಕುಮಾರ್ ಮಾತನಾಡಿ, ಕಾಲೇಜಿನಲ್ಲಿ ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳು ನಿರಂತರವಾಗಿ ನಡೆಯುತ್ತಾ ಇರುತ್ತದೆ. ಇದು ವಿದ್ಯಾರ್ಥಿಗಳಿಗೆ ಪ್ರಶಸ್ತಿಯನ್ನು ಪಡೆದುಕೊಳ್ಳುವುದರ ಜೊತೆಗೆ ವಿದ್ಯಾರ್ಥಿಯ ಸರ್ವಾಂಗೀಣ ಅಭಿವೃದ್ಧಿಗೂ ಪೂರಕವಾಗಿದೆ. ವಿದ್ಯಾರ್ಥಿಗಳ ಪ್ರತಿಭೆ ಹಾಗು ಕೌಶಲ್ಯವನ್ನು ಬೆಳೆಸಿ ಪ್ರೋತ್ಸಾಹಿಸುವ ಎಲ್ಲಾ ವ್ಯವಹಾರಗಳನ್ನು ಎಸ್.ಡಿ.ಎಂ ಸಂಸ್ಥೆ ಮಾಡುತ್ತಾ ಬಂದಿದೆ. ವಿದ್ಯಾರ್ಥಿಗಳ ಸಾಧನೆ ಬದುಕಿನುದ್ದಕ್ಕೂ ನಿರಂತರವಾಗಿರಬೇಕು ಎಂದರು

.ಕಾಲೇಜಿನ ವಿದ್ಯಾರ್ಥಿಗಳ ಸಾಂಸ್ಕೃತಿಕ ಕಾರ್ಯಕ್ರಮದ ಮೂಲಕ ಶೈಕ್ಷಣಿಕ ಸಾಧಕರ ಪ್ರಶಸ್ತಿ ಪ್ರಧಾನ ಸಮಾರಂಭಕ್ಕೆ ಚಾಲನೆ ನೀಡಲಾಯಿತು. ಬಳಿಕ ಶೈಕ್ಷಣಿಕ ಸಾಲಿನಲ್ಲಿ ಸಾಂಸ್ಕೃತಿಕ ಹಾಗೂ ಕ್ರೀಡಾ ಚಟುವಟಿಕೆಗಳಲ್ಲಿ ಜಿಲ್ಲಾ ಹಾಗು ರಾಜ್ಯ ಮಟ್ಟದಲ್ಲಿ ಭಾಗವಹಿಸಿ ಸಾಧನೆಗೈದ ಮತ್ತು ಕಾಲೇಜಿನಲ್ಲಿ ಏರ್ಪಡಿಸಿದ್ದ ವಿವಿಧ ಸ್ಪರ್ಧೆಗಳಲ್ಲಿ ಬಹುಮಾನ ವಿಜೇತರಿಗೆ ಪ್ರಶಸ್ತಿ ಪ್ರದಾನ ಸಮಾರಂಭ ಕಾರ್ಯಕ್ರಮ ನಡೆಯಿತು. ಪ್ರಶಸ್ತಿಯನ್ನು ಅತಿಥಿಗಳಾದ ಡಾ. ನವೀನ್ ಶೆಟ್ಟಿ ಕೆ , ಪ್ರೊ. ವಿಶ್ವನಾಥ್ ಪಿ ಸೇರಿದಂತೆ ಕಾಲೇಜಿನ ಪ್ರಾಂಶುಪಾಲರು, ಉಪ ಪ್ರಾಂಶುಪಾಲರು ಹಸ್ತಾಂತರಿಸಿದರು.

ಇದೇ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಪದವಿಪೂರ್ವ ಶಿಕ್ಷಕರ ಸಂಘದ ವಿವಿಧ ವಿಭಾಗಳ ಸದಸ್ಯತ್ವಕ್ಕೆ ಆಯ್ಕೆಯಾಗಿರುವ ಸಾಧಕ ಉಪನ್ಯಾಸಕರಾದ ಡಾ. ಪ್ರಸನ್ನ ಕುಮಾರ್ ಐತಾಳ್, ರಾಜು ಎ ಎ, ಅಂಕಿತಾ ಎಂ.ಕೆ , ಲಕ್ಷೀಶ್ ಭಟ್ ರವರಿಗೆ ಅತಿಥಿಗಳಾದ ಡಾ. ನವೀನ್ ಶೆಟ್ಟಿ ಕೆ. ಅಭಿನಂದಿಸಿದರು. ಬಳಿಕ ಎಸ್.ಡಿ.ಎಂ ಶಿಕ್ಷಣ ಸಂಸ್ಥೆ ಹಾಗು ಎಸ್.ಡಿ.ಎಂ ಪದವಿಪೂರ್ವ ಕಾಲೇಜಿನ ವತಿಯಿಂದ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿದ್ದ, ಡಾ. ನವೀನ್ ಶೆಟ್ಟಿಯವರನ್ನು ಗೌರವಿಸಿ ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಪದವಿಪೂರ್ವ ಕಾಲೇಜಿನ ಪ್ರಾಚಾರ್ಯರಾದ ಪ್ರಮೋದ್ ಕುಮಾರ್, ಪದವಿ ಕಾಲೇಜಿನ ಪ್ರಾಚಾರ್ಯರಾದ ಪ್ರೊ. ವಿಶ್ವನಾಥ್ ಪಿ, ಡಾ. ರಾಜೇಶ್ ಬಿ ಸೇರಿದಂತೆ ಇತರೆ ಪ್ರಮುಖರು ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಸೇರಿದಂತೆ ಉಪನ್ಯಾಸಕರು ಭಾಗಿಯಾಗಿದ್ದರು. ಕಾರ್ಯಕ್ರಮವನ್ನು ಕಾಲೇಜಿನ ಉಪನ್ಯಾಸಕ ಡಾ. ಮಹಾವೀರ ಜೈನ್ ಸ್ವಾಗತಿಸಿದರು. ಕಾಲೇಜು ವಿದ್ಯಾರ್ಥಿನಿಯರು ಪ್ರಾರ್ಥನೆ ಹಾಡಿದರು. ಕಾರ್ಯಕ್ರಮವನ್ನು ಕುಮಾರಿ ನಿಜ ಕುಲಾಲ್ ಹಾಗೂ ಕುಮಾರಿ ಮೌಲ್ಯ ನಿರೂಪಿಸಿ, ಉಪನ್ಯಾಸಕಿ ನಿಹಾರಿಕ ಜಿ. ಎನ್ ವಂದಿಸಿದರು.

Related posts

ಬೆಳ್ತಂಗಡಿ: ಜ್ಞಾನವಿಕಾಸ ಸಮನ್ವಯಾಧಿಕಾರಿಗಳ ಸಾಮರ್ಥ್ಯ ಅಭಿವೃದ್ಧಿ ತರಬೇತಿ

Suddi Udaya

ಉಜಿರೆ ಶ್ರೀ ಜನಾರ್ಧನ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ಭೇಟಿ

Suddi Udaya

ಬೆಳ್ತಂಗಡಿ ಸ.ಪ್ರ.ದರ್ಜೆ ಕಾಲೇಜಿನಲ್ಲಿ ” ಹದಿಹರೆಯ ಮತ್ತು ಆರೋಗ್ಯ” ಕಾರ್ಯಕ್ರಮ

Suddi Udaya

ಎಸ್.ಎಸ್.ಎಲ್.ಸಿ ಮರು ಮೌಲ್ಯ ಮಾಪನ: ಲಾಯಿಲ ವಿದ್ಯಾರ್ಥಿನಿ ತನ್ವಿ ಭಟ್ ಎಂ ಅವರಿಗೆ 624 ಅಂಕ, ರಾಜ್ಯಕ್ಕೆ 2 ನೇ ಸ್ಥಾನ, ಬೆಳ್ತಂಗಡಿ ತಾಲೂಕಿಗೆ ಪ್ರಥಮ

Suddi Udaya

ತಾಲೂಕು ಮಟ್ಟದ ಪ್ರತಿಭಾ ಕಾರಂಜಿ: ಧರ್ಮಸ್ಥಳ ಶ್ರೀ ಮಂ.ಸ್ವಾ.ಅ.ಹಿ.ಪ್ರಾ. ಶಾಲೆಯ ವಿದ್ಯಾರ್ಥಿ ಅನ್ವಿತ್ ಪ್ರಥಮ ಸ್ಥಾನ ಪಡೆದು ಜಿಲ್ಲಾಮಟ್ಟಕ್ಕೆ ಆಯ್ಕೆ

Suddi Udaya

ತೆಲುಗು ನಟ ಶ್ರೀಕಾಂತ್ ಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನಕ್ಕೆ ಭೇಟಿ

Suddi Udaya
error: Content is protected !!