38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಣ್ತಪ್ಪಿನಿಂದ ಇನ್ನೊಬ್ಬರ ಖಾತೆಗೆ ಹಣ ವರ್ಗಾವಣೆ: ಮರುಪಾವತಿಸಲು ನಿರಾಕರಣೆ ; ದೂರು ದಾಖಲು

ಬೆಳ್ತಂಗಡಿ: ಕಣ್ತಪ್ಪಿನಿಂದ ಹಣ ಬೇರೆಯವರ ಖಾತೆಗೆ ವರ್ಗಾವಣೆಯಾಗಿದ್ದು, ಮರುಪಾವತಿಸಲು ನಿರಾಕರಿಸಿದ ಪ್ರಕರಣ ಸಂಬಂಧ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಆಸ್ಪತ್ರೆಯಲ್ಲಿ ಚಿಕಿತ್ಸೆಯಲ್ಲಿರುವ ತನ್ನ ಸಂಬಂಧಿಕರಿಗೆ ತುರ್ತು ಅಗತ್ಯದ ನೆಲೆಯಲ್ಲಿ ಪೋನ್ ಪೇ ಮೂಲಕ ಕಳುಹಿಸಲಾದ ಹಣ ಕಣ್ಣಪ್ಪಿನಿಂದಾಗಿ ಇನ್ನೊಬ್ಬರ ಖಾತೆಗೆ ಹೋದ ಪ್ರಕರಣದಲ್ಲಿ ಹಣ ಮರುಪಾವತಿಸಲು ನಿರಾಕರಿಸಿದ ಉಜಿರೆಯ ಉದ್ಯಮಿ ವಿರುದ್ಧ ಪ್ರಕರಣ ದಾಖಲಾಗಿದೆ.

ಉಪ್ಪಿನಂಗಡಿಯ ಮಠ ಎಂಬಲ್ಲಿ ಗ್ರಾನೈಟ್ ಉದ್ಯಮ ನಡೆಸಿಕೊಂಡಿರುವ ಹರಿರಾವ್ ಎಂಬವರು ನೀಡಿದ ದೂರಿನಂತೆ ತನ್ನ ರಾಜಸ್ಥಾನದಲ್ಲಿನ ಸಂಬಂಧಿಕ ಲಕ್ಷ್ಮೀಚಂದ್ ಎಂಬವರಿಗೆ ಕಳುಹಿಸಬೇಕಾದ 19,000 ರೂ. ಕಣ್ಣಪ್ಪಿನಿಂದಾಗಿ ಉಜಿರೆಯ ಉದ್ಯಮಿಯೋರ್ವರ ಖಾತೆಗೆ ವರ್ಗಾವಣೆಗೊಂಡಿದ್ದು, ಈ ಮೊತ್ತದಲ್ಲಿ 10,000 ರೂ. ವನ್ನು ಹಿಂದಿರುಗಿಸಿ ಉಳಿದ ಮೊತ್ತವನ್ನು ಹಿಂದಿರುಗಿಸದೆ ಸತಾಯಿಸುತ್ತಿದ್ದಾರೆಂದು ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಲಾಗಿದೆ. ಉಪ್ಪಿನಂಗಡಿ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.

Related posts

ಉರುವಾಲು ಪದವು ಶ್ರೀ ಮಹಮ್ಮಾಯಿ ದೇವಿಯ ವಾರ್ಷಿಕ ಗೊಂದೋಳು ಪೂಜೆ

Suddi Udaya

ಮುಂಡಾಜೆ ಗ್ರಾ.ಪಂ. ನಲ್ಲಿ ಬುಡಕಟ್ಟು ಸಮುದಾಯಗಳಿಗೆ ಸರ್ಕಾರದ ಮೂಲಭೂತ ದಾಖಲೆಗಳ ನೋಂದಣಿ ಮಹಾ ಅಭಿಯಾನ

Suddi Udaya

ಉಜಿರೆ: ಶ್ರೀ ಧ.ಮಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಭಿತ್ತಿ ಪತ್ರಿಕೆ ಅನಾವರಣ

Suddi Udaya

ಲಾಯಿಲ: ಕಂಪ್ಯೂಟರ್ ತರಬೇತಿಯ ಸಮಾರೋಪ ಕಾರ್ಯಕ್ರಮ

Suddi Udaya

ಮಡಂತ್ಯಾರು ಗ್ರಾ.ಪಂ. ವತಿಯಿಂದ ಅರ್ಹ ಫಲನುಭವಿಗಳಿಗೆ ಉಜ್ವಲ ಗ್ಯಾಸ್‌ ವಿತರಣೆ

Suddi Udaya

ಹುಣ್ಸೆಕಟ್ಟೆ: ಶ್ರೀ ಕ್ಷೇ.ಧ.ಗ್ರಾ. ಯೋಜನೆ ವತಿಯಿಂದ 26ನೇ ಸಾಮೂಹಿಕ ಸತ್ಯನಾರಾಯಣ ಪೂಜೆ

Suddi Udaya
error: Content is protected !!