September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಶಾಸಕ ಹರೀಶ್ ಪೂಂಜರ ಜನಸ್ಪಂದನಾ ಕಾರ್ಯಕ್ರಮದಲ್ಲಿ ಪ್ರಸ್ತಾಪವಾದ ಸಮಸ್ಯೆಗೆ ಸ್ಪಂದಿಸಿದ ಅರಣ್ಯ ಇಲಾಖೆ ಅಧಿಕಾರಿಗಳು

ಇಂದಬೆಟ್ಟು : ಇಂದಬೆಟ್ಟು ಚರ್ಚ್ ಹಾಲ್ ಸಭಾಂಗಣದಲ್ಲಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ರವರ ಅಧ್ಯಕ್ಷತೆಯಲ್ಲಿ ಇಂದಬೆಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯ ಜನಸ್ಪಂದನ ಕಾರ್ಯಕ್ರಮದಲ್ಲಿ ಲಿಂಗಾಂತ್ಯಾರು, ಬೆದ್ರಪಲ್ಕೆ, ಎರ್ಮಲ ಭಾಗದ ಜನರು ತಿಳಿಸಿದ ಬೇಡಿಕೆಯಾದ ಗ್ರಾಮದ ಗಡಿ ಭಾಗದ ಕುಟುಂಬಗಳಿಗೆ ಹಕ್ಕು ಪತ್ರ ಸಿಗದ ಕಾರಣ ಶಾಸಕ ಹರೀಶ್ ಪೂಂಜಾ ರವರ ಸೂಚನೆ ಮೇರೆಗೆ ಅರಣ್ಯಾ ಇಲಾಖೆ ಅಧಿಕಾರಿಗಳಾದ ವಲಯ ಅರಣ್ಯ ಅಧಿಕಾರಿಯಾದ ತ್ಯಾಗರಾಜ್ ಟಿ.ಎನ್, ಉಪ್ಪಿನಂಗಡಿ ಉಪ ವಲಯ ಅರಣ್ಯ ಅಧಿಕಾರಿ ರಾಘವೇಂದ್ರ. ಕೆ, ಹಾಗೂ ಗಸ್ತು ಅರಣ್ಯಪಾಲಕರಾದ ಪ್ರತಾಪ್ ಸ್ಥಳಕ್ಕೆ ಡಿ.11 ರಂದು ಆಗಮಿಸಿ ವಾಸ್ತವ ಸ್ಥಿತಿಯನ್ನು ಅವಲೋಕಿಸಿದರು ಮುಂದಿನ ದಿನಗಳಲ್ಲಿ ಕಾನೂನಾತ್ಮಕವಾಗಿ ಶಾಶ್ವತ ಪರಿಹಾರ ಕಂಡುಕೊಳ್ಳಲು ಕ್ರಮ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳು ತಿಳಿಸಿದರು.

ಈ ಸಂದರ್ಭದಲ್ಲಿ ಪಂಚಾಯತ್ ಸದಸ್ಯರಾದ ಶ್ರೀಕಾಂತ್ ಎಸ್ ಇಂದಬೆಟ್ಟು, ಗ್ರಾಮಸ್ಥರಾದ ವಿ.ಜೆ ದೇವಸಿ ಎರ್ಮಲ, ರಾಮ ಮೊಯಿಲಿ ಬಂಗಾಡಿ ಹಾಗೂ ಸ್ಥಳೀಯರು ಉಪಸ್ಥಿತರಿದ್ದರು.

Related posts

ಬಹರೈನ್, ದುಬೈಯಲ್ಲಿ ನಡೆದ ಬ್ರಹ್ಮಶ್ರೀ ನಾರಾಯಣ ಗುರುಗಳ 169 ನೇ ಜಯಂತಿಯಲ್ಲಿ ಬ್ರಹ್ಮಾನಂದ ಶ್ರೀಗಳಿಂದ ಆಶೀರ್ವಚನ

Suddi Udaya

ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಪುನಃ ಪ್ರತಿಷ್ಠಾ ವರ್ಧಂತಿ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಪಡಂಗಡಿ ಸರಕಾರಿ ಪ್ರೌಢಶಾಲೆಯಲ್ಲಿ ಸಂವಿಧಾನ ದಿನಾಚರಣೆ

Suddi Udaya

ವಿ.ಹಿಂ.ಪ. ಬಜರಂಗದಳ‌ ಮಾತೃಶಕ್ತಿ ದುರ್ಗಾವಾಹಿನಿ ಬೆಳ್ತಂಗಡಿ ಪ್ರಖಂಡದ ಆಶ್ರಯದಲ್ಲಿ ನಡೆಯುವ ಅಖಂಡ ಭಾರತ ಸಂಕಲ್ಪ ದಿನದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬೆಳ್ತಂಗಡಿ ತುಳುನಾಡು ಕೋಳಿ ಒಕ್ಕೂಟ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಕೇಂದ್ರ ಸಮಿತಿ ರಚನೆ: ಅಧ್ಯಕ್ಷರಾಗಿ ನಾರಾಯಣ ಪೂಜಾರಿ ಉಚ್ಚೂರು, ಪ್ರ.ಕಾರ್ಯದರ್ಶಿಯಾಗಿ ಅಶ್ವಿನ್ ಕುಮಾರ್ ಬಳಂಜ, ಕೋಶಾಧಿಕಾರಿಯಾಗಿ ಕೇಶವ ಕೊಯ್ಯೂರು

Suddi Udaya

ಬೆಳ್ತಂಗಡಿ: ಪೌರ ಕಾರ್ಮಿಕರ ದ.ಕ ಜಿಲ್ಲಾ ಮಟ್ಟದ ಜಂಟಿ ಸಮಾವೇಶ

Suddi Udaya
error: Content is protected !!