26.5 C
ಪುತ್ತೂರು, ಬೆಳ್ತಂಗಡಿ
September 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮರೋಡಿ: ಅಡುಗೆ ಮಾಡುವ ವೇಳೆ ಆಕಸ್ಮಿಕವಾಗಿ ಒಲೆಯ ಮೇಲೆ ಬಿದ್ದ ಮಹಿಳೆ: ಚಿಕಿತ್ಸೆ ಫಲಕಾರಿಯಾಗದೆ ಸಾವು

ಮರೋಡಿ: ಇಲ್ಲಿಯ ಅಟ್ಲಕಜೆ ನಿವಾಸಿ ಸುಬ್ಬಿ ರವರು ಅಡುಗೆ ಮಾಡುವ ಸಂದರ್ಭ ಆಕಸ್ಮಿಕವಾಗಿ ಒಲೆಯ ಮೇಲೆ ಬಿದ್ದು ಸುಟ್ಟ ಗಾಯಗಳಾಗಿದ್ದು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಿದ್ದರು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದ ಘಟನೆ ಡಿ. 11ರಂದು ನಡೆದಿದೆ. ಈ ಬಗ್ಗೆ ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಘಟನೆ ವಿವರ: ತೋಮಸ್ ರವರ ತಾಯಿ ಶ್ರೀಮತಿ ಸುಬ್ಬಿ (65 ವರ್ಷ) ರವರು ಸುಮಾರು 2 ತಿಂಗಳ ಹಿಂದೆ ಪಾರ್ಶ್ವ ವಾಯು ಕಾಯಿಲೆಗೆ ತುತ್ತಾಗಿ ಗುಣಮುಖವಾಗಿದ್ದವರು ಡಿ.02 ರಂದು ಮರೋಡಿ ಅಟ್ಲಕಜೆ ಮನೆಯಲ್ಲಿ ಅಡುಗೆ ಕೆಲಸದಲ್ಲಿರುವಾಗ ಆಕಸ್ಮಿಕವಾಗಿ ಒಲೆಯ ಮೇಲೆ ಬಿದ್ದು ಸುಟ್ಟ ಗಾಯಗಳಿಂದ ಅಸ್ವಸ್ಥಗೊಂಡವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಿದ್ದು ಹೆಚ್ಚಿನ ಚಿಕಿತ್ಸೆ ಗಾಗಿ ಮಂಗಳೂರು ವೆನ್ಲಾಕ್‌ ಆಸ್ಪತ್ರೆಗೆ ದಾಖಲಿಸಲಾಗಿತ್ತು. ತೀವ್ರ ಸುಟ್ಟ ಗಾಯಗಳಾಗಿ ಚಿಕಿತ್ಸೆಯಲ್ಲಿದವರು ಚಿಕಿತ್ಸೆ ಫಲಕಾರಿಯಾಗದೆ ಡಿ. 11 ರಂದು ಮೃತಪಟ್ಟಿದ್ದಾರೆ.

Related posts

ಬೆಳ್ತಂಗಡಿ ಮುಳಿಯ ಜ್ಯುವೆಲ್ಸ್ ನಲ್ಲಿ ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಬಂದಂತಹ ಗ್ರಾಹಕರಿಗೆ ಗಿಡಗಳನ್ನು ನೀಡುವ ಮೂಲಕ ವಿಶ್ವ ಪರಿಸರ ದಿನ ಆಚರಣೆ

Suddi Udaya

ಉಜಿರೆ: ಇಂಟರಾಕ್ಟ್ ಕ್ಲಬ್ ನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ

Suddi Udaya

ವೇಣೂರು ಯುವ ಸೇವಾ ಸಂಗಮ ಸೇವಾ ಟ್ರಸ್ಟ್ ನ ಆಮಂತ್ರಣ ಬಿಡುಗಡೆ

Suddi Udaya

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಗ್ರಾಮೀಣ ಬ್ಲಾಕ್ ಗೆ ಜಿಲ್ಲಾ ಅಲ್ಪಸಂಖ್ಯಾತ ಘಟಕದಿಂದ ಚುನಾವಣಾ ಉಸ್ತುವಾರಿಯಾಗಿ ಮಹಮ್ಮದ್ ಹನೀಫ್ ಉಜಿರೆ ನೇಮಕ

Suddi Udaya

ಗ್ರಾಮೀಣ ಸರಕಾರಿ ಪ್ರೌಢಶಾಲೆಯಲ್ಲಿ ಹೀಗೊಂದು ವಿನೂತನ ಶೌಚಾಲಯ

Suddi Udaya

ಮಂಗಳೂರು ಸಿಸಿಆರ್ ಬಿ ಘಟಕದಲ್ಲಿ ಸೇವೆ ಸಲ್ಲಿಸುತ್ತಿದ್ದ ಭೋಜಾರ ಪುರಂದರ ಗೌಡರವರು ಪೊಲೀಸ್ ಸಬ್ ಇನ್ಸ್ಪೆಕ್ಟರ್ ಆಗಿ ಪದೋನ್ನತಿ

Suddi Udaya
error: Content is protected !!