September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಎಲ್ ಸಿ ಆರ್ ಇಂಡಿಯನ್ ವಿದ್ಯಾ ಸಂಸ್ಥೆಯ ಪ್ರೌಢ ವಿಭಾಗದ ಹತ್ತನೇ ತರಗತಿಯ ವಿದ್ಯಾರ್ಥಿಗಳಿಗೆ ಮಾಹಿತಿ ಕಾರ್ಯಗಾರ


ಕಕ್ಯಪದವು: ಪಾದೆಗುತ್ತು ಲಿಂಗಪ್ಪ ಮಾಸ್ಟರ್ ಮೆಮೋರಿಯಲ್ ಎಜುಕೇಶನ್ ಟ್ರಸ್ಟ್ (ರಿ) ನಿಂದ ನಡೆಸಲ್ಪಡುವ ಎಲ್ ಸಿ ಆರ್ ಇಂಡಿಯನ್ ವಿದ್ಯಾ ಸಂಸ್ಥೆಯ ಪ್ರೌಢ ವಿಭಾಗದ 10ನೇ ತರಗತಿಯ ವಿದ್ಯಾರ್ಥಿಗಳಿಗೆ “ವೃತ್ತಿ ಶಿಕ್ಷಣ; ಮಾರ್ಗದರ್ಶನ” ಎಂಬ ವಿಷಯದ ಮೇಲೆ ಮಾಹಿತಿ ಕಾರ್ಯಗಾರವನ್ನು ಡಿಸೆಂಬರ್ 13ರಂದು ಆಯೋಜಿಸಲಾಯಿತು. ಭವಿಷ್ಯದ ವೃತ್ತಿ ಆಯ್ಕೆ, ಉನ್ನತ ಶಿಕ್ಷಣದ ಅವಕಾಶಗಳು, ಕೌಶಲ್ಯ ಅಭಿವೃದ್ಧಿ ಮತ್ತು ವೈಯಕ್ತಿಕ ಆಸಕ್ತಿ ಸಾಮರ್ಥ್ಯವನ್ನು ಗುರುತಿಸುವ ಬಗ್ಗೆ ಅರಿವು ನೀಡುವುದು ಈ ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿತ್ತು.

ಕಾರ್ಯಕ್ರಮದ ಆರಂಭದಲ್ಲಿ ಪ್ರೌಢ ವಿಭಾಗದ ಸಹಶಿಕ್ಷಕಿ ಶ್ರೀಮತಿ ದಿವ್ಯಶ್ರೀ ವಿದ್ಯಾರ್ಥಿಗಳಿಗೆ ಸಂಪನ್ಮೂಲ ವ್ಯಕ್ತಿ ನಾದ ಮಣಿನಾಲ್ಕೂರು ಅವರ ಪರಿಚಯವನ್ನು ತಿಳಿಸಿದರು.

10 ವರ್ಷಗಳಿಂದ “ಕತ್ತಲ ಹಾಡು” ಮೂಲಕ ರಾಜ್ಯಾದ್ಯಂತ ಪ್ರಸಿದ್ಧರಾಗಿರುವ ಇವರು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಇಂದಿನ ಯುಗದಲ್ಲಿ ವೃತ್ತಿ ಅವಕಾಶಗಳ ವೈವಿಧ್ಯತೆ, ಕೌಶಲ್ಯಾಧಾರಿತ ಶಿಕ್ಷಣದ ಅಗತ್ಯತೆ ಮತ್ತು ವಿದ್ಯಾರ್ಥಿಗಳು ತಮ್ಮ ಆಸಕ್ತಿ ಸಾಮರ್ಥ್ಯಕ್ಕೆ ತಕ್ಕಂತೆ ಕ್ಷೇತ್ರವನ್ನು ಆಯ್ಕೆ ಮಾಡುವ ಮಹತ್ವವನ್ನು ಚಟುವಟಿಕೆಯ ಮೂಲಕ ವಿವರಿಸಿದರು.

ಕಾರ್ಯಕ್ರಮದಲ್ಲಿ ಸಂಸ್ಥೆಯ ಪ್ರಾಂಶುಪಾಲರಾದ ಜೋಸ್ಟನ್ ಲೋಬೋ, ಮುಖ್ಯ ಶಿಕ್ಷಕಿ ಶ್ರೀಮತಿ ವಿಜಯ ಕೆ ಸಂಯೋಜಕರಾದ ಯಶವಂತ ಜಿ ನಾಯಕ್ ಹಾಗೂ ಶಿಕ್ಷಕ-ಶಿಕ್ಷಕೇತರ ವೃಂದದವರು ಉಪಸ್ಥಿತರಿದ್ದರು. ಪ್ರೌಢ ವಿಭಾಗದ ಸಹ ಶಿಕ್ಷಕಿ ಶ್ರೀಮತಿ ಸಂಗೀತ ಕಾರ್ಯಕ್ರಮ ನಿರೂಪಿಸಿದರು.

Related posts

ಕಾಜೂರು ರಹ್ಮಾನಿಯ್ಯ ಜುಮ್ಮಾ ಮಸೀದಿಯಲ್ಲಿ ಈದುಲ್ ಫಿತರ್

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಾಲಾ ಸಂಸತ್ತಿನ ಚುನಾವಣೆ

Suddi Udaya

ಬಳಂಜ ತಾಲೂಕು ಮಟ್ಟದ ಪ್ರಾಥಮಿಕ, ಪ್ರೌಢಶಾಲಾ ಕ್ರೀಡಾ ಕೂಟ: ದೈಹಿಕ ಮತ್ತು ಮಾನಸಿಕ ಆರೋಗ್ಯಕ್ಕೆ ಕ್ರೀಡೆ ಸಹಕಾರಿ: ಮೋಹನ್ ಕುಮಾರ್

Suddi Udaya

ಎ.18: ಮುಂಡಾಜೆಯಲ್ಲಿ ಹೊನಲು ಬೆಳಕಿನ ಪುರುಷರ ವಾಲಿಬಾಲ್ ಮತ್ತು ಶಟಲ್ ಬ್ಯಾಡ್‌ಮಿಂಟನ್ ಹಾಗೂ ಮಹಿಳೆಯರ ಹಗ್ಗಜಗ್ಗಾಟ ಮತ್ತು ತ್ರೋಬಾಲ್ ಪಂದ್ಯಾಟ ಕ್ರೈಸ್ಟ್‌ ಟ್ರೋಫಿ 2026

Suddi Udaya

ರಬ್ಬರ್ ಟ್ಯಾಪಿಂಗ್ ಕಾರ್ಮಿಕ ಸ್ವತಃ ಮೈಮೇಲೆ ವಿದ್ಯುತ್ ಹರಿಸಿ ಆತ್ಮಹತ್ಯೆ

Suddi Udaya

ಫೆ. 3-4: ರಾಜ್ಯಮಟ್ಟದ ಜಿನಭಜನಾ ಸ್ಪರ್ಧೆ: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರಿಂದ ಆಮಂತ್ರಣ ಪತ್ರ ಬಿಡುಗಡೆ

Suddi Udaya
error: Content is protected !!