22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ ರಬ್ಬರ್ ಬೆಳೆಗಾರರ ಮಾರಾಟ ಮತ್ತು ಸಂಸ್ಕರಣ ಸಹಕಾರಿ ಸಂಘದ ಕೊಕ್ಕಡ ಶಾಖೆಯು ಸ್ಥಳಾಂತರಗೊಂಡು ಉದ್ಘಾಟನೆ

ಕೊಕ್ಕಡ: ಬೆಳ್ತಂಗಡಿ ತಾಲೂಕು ರಬ್ಬರ್ ಬೆಳೆಗಾರರ ಮಾರಾಟ ಮತ್ತು ಸಂಸ್ಕರಣ ಸಹಕಾರಿ ಸಂಘ, ಉಜಿರೆ ಇದರ ಕೊಕ್ಕಡ ಶಾಖೆಯು ಶ್ರೀದೇವಿ ಕಾಂಪ್ಲೆಕ್ಸ್ ಗೆ ಸ್ಥಳಾಂತರಗೊಂಡು ಕಾರ್ಯನಿರ್ವಹಣೆ ಪ್ರಾರಂಭಿಸಿದೆ.

ಹೊಸ ಕಟ್ಟಡದಲ್ಲಿ ಶಾಖೆ ಉದ್ಘಾಟನೆಯನ್ನು ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಬ್ಯಾಂಕ್ ಇದರ ನಿರ್ದೇಶಕರು ಮತ್ತು ಕೊಕ್ಕಡ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಪಿ. ಕುಶಾಲಪ್ಪ ಗೌಡ ದೀಪ ಬೆಳಗಿಸಿ ನೆರವೇರಿಸಿ ಮಾತನಾಡಿ ರಬ್ಬರ್ ಬೆಳೆಗಾರರ ಹಿತಾಸಕ್ತಿಗಾಗಿ ಕಾರ್ಯನಿರ್ವಹಿಸುತ್ತಿರುವಂತಹ ಸಂಸ್ಥೆಯ ಶಾಖೆಯು ಉತ್ತಮವಾಗಿ ಕಾರ್ಯನಿರ್ವಹಿಸಿ ಯಶಸ್ವಿಯಾಗಲಿ ಎಂದು ಶುಭ ಹಾರೈಸಿದರು.

ಕಾರ್ಯಕ್ರಮದಲ್ಲಿ ಕಟ್ಟಡದ ಮಾಲಿಕರಾದ ವಸಂತ ರಾವ್ ಇವರನ್ನು ಗೌರವಿಸಲಾಯಿತು. ರಬ್ಬರ್ ಸೊಸೈಟಿ ಅಧ್ಯಕ್ಷ ಶ್ರೀಧರ್ ಜಿ. ಭಿಡೆ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಉಪಾಧ್ಯಕ್ಷ ಅನಂತ ಭಟ್ ಎಂ ಇವರು ಅತಿಥಿಗಳನ್ನು ಸ್ವಾಗತಿಸಿದರು ಹಾಗೂ ಸಂಘದ ನಿರ್ದೇಶಕರುಗಳಾದ ಗ್ರೇಶಿಯನ್ ವೇಗಸ್, ಕೆ. ಬಾಲಕೃಷ್ಣ ಗೌಡ, ಹೆಚ್ ಪದ್ಮಗೌಡ, ಕೆ. ಜೆ. ಆಗಸ್ಟಿನ್, ಶ್ರೀ ರಾಮ ನಾಯ್ಕ್ , ಭೈರಪ್ಪ, ಹರೀಶ್ ರಾವ್, ಭರತ್ ಕುಮಾರ್ ಹೆಚ್. ಹಾಗೂ ಶಾಜಿ ಪಿ. ಎ. ಉಪಸ್ಥಿತರಿದ್ದರು.

ಶಾಖೆಯ ಪ್ರಬಂಧಕ ಸಂದೇಶ್ ಸಹಕರಿಸಿ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಜು ಶೆಟ್ಟಿಯವರು ಧನ್ಯವಾದ ಸಮರ್ಪಿಸಿದರು.

Related posts

ಬೆಳ್ತಂಗಡಿ : ಶಾಸಕ ಹರೀಶ್ ಪೂಂಜ ತಾಲೂಕು ಆಡಳಿತ ಕಚೇರಿಗೆ ಭೇಟಿ

Suddi Udaya

ಗುರುವಾಯನಕೆರೆ ವಿದ್ವತ್ ಪಿಯು ಕಾಲೇಜಿನಲ್ಲಿ ಕಿಚನೋಮಿಕ್ಸ್ ಕಲರವ

Suddi Udaya

ಕರಾಟೆ ಚಾಂಪಿಯನ್ ಶಿಪ್: ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳಿಗೆ ಹಲವು ಪ್ರಶಸ್ತಿ

Suddi Udaya

ಬೆಳ್ತಂಗಡಿ: ನೇಣು ಬಿಗಿದು ಮಹಿಳೆ ಆತ್ಮಹತ್ಯೆ

Suddi Udaya

ಬೆಳ್ತಂಗಡಿ ಹೋಲಿ ರಿಡೀಮರ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮಕ್ಕಳ ದಿನಾಚರಣೆ

Suddi Udaya

ಹದಗೆಟ್ಟಿರುವ ಮಲ್ಲೊಟ್ಟು – ಹರ್ಪಳ ರಸ್ತೆ: ದುರಸ್ತಿಗೊಳಿಸುವಂತೆ ಗ್ರಾಮಸ್ಥರ ಒತ್ತಾಯ

Suddi Udaya
error: Content is protected !!