22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಧರ್ಮಸ್ಥಳ ಎಸ್.ಡಿ.ಎಂ ಅನುದಾನಿತ ಪ್ರೌಢಶಾಲೆಯಲ್ಲಿ ವಾರ್ಷಿಕ ಪ್ರತಿಭಾ ದಿನಾಚರಣೆ

ಧರ್ಮಸ್ಥಳ: ಧರ್ಮಸ್ಥಳದ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಪ್ರೌಢಶಾಲೆಯ ವಾರ್ಷಿಕ ಪ್ರತಿಭಾ ದಿನಾಚರಣೆಯು ಧರ್ಮಸ್ಥಳದ ಅಮೃತವರ್ಷಿಣಿ ಸಭಾಂಗಣದಲ್ಲಿ ಭವ್ಯವಾಗಿ ಮೂಡಿಬಂದಿತು.

ಸಮಾರಂಭವನ್ನು ಎಸ್.ಡಿ.ಎಂ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿ ಕ್ಷೇಮ ಪಾಲನಾಧಿಕಾರಿ ಧನ್ಯ ಕುಮಾರ್ ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು.

ಬಳಿಕ ಮಾತನಾಡಿ, ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗಾಗಿ ಶಾಲೆಗಳಲ್ಲಿ ಶೈಕ್ಷಣಿಕ, ಸಾಂಸ್ಕೃತಿಕ ಹಾಗು ಕ್ರೀಡೆ ಸೇರಿದಂತೆ ವಿವಿಧ ಕಾರ್ಯಕ್ರಮಗಳು ಮತ್ತು ಸ್ಪರ್ಧೆಗಳನ್ನು ಆಯೋಜಿಸಲಾಗುತ್ತದೆ. ಇದು ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ ಹೆಚ್ಚಿಸುವುದರ ಜೊತೆಗೆ ಭವಿಷ್ಯದಲ್ಲಿ ಪ್ರತಿಭಾವಂತರಾಗಿ ರೂಪಿಸುತ್ತದೆ. ಗುರು ಹಿರಿಯರು ಹಾಗೂ ಪೋಷಕರ ಪ್ರೋತ್ಸಾಹ ಮತ್ತು ಮಾರ್ಗದರ್ಶನವನ್ನು ಸಕರಾತ್ಮಕವಾಗಿ ಅಳವಡಿಸಿಕೊಂಡರೆ ಈ ದಿನದ ಪ್ರತಿಭೆಗಳು ಇನ್ನಷ್ಟು ಉನ್ನತ ಮಟ್ಟದಲ್ಲಿ ಬೆಳಗಬಹುದು ಎಂದು ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.

ಕಾರ್ಯಕ್ರಮದಲ್ಲಿ ಕಳೆದ ಸಾಲಿನ ವಾರ್ಷಿಕ ಎಸ್. ಎಸ್.ಎಲ್.ಸಿ ಪರೀಕ್ಷೆಯಲ್ಲಿ ಉತ್ತಮ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಸಭಾ ಕಾರ್ಯಕ್ರಮದ ಬಳಿಕ ವಿದ್ಯಾರ್ಥಿಗಳಿಂದ ಕುಣಿತ ಜಾನಪದ ಗೀತೆ, ನೃತ್ಯ, ಕುಣಿತ ಭಜನೆ, ಹುಲಿ ಕುಣಿತ, ಯಕ್ಷಗಾನ ಸೇರಿದಂತೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು. ಕಾರ್ಯಕ್ರಮವನ್ನು ಧರ್ಮಸ್ಥಳದ ಹೇಮಾವತಿ ವಿ. ಹೆಗ್ಗಡೆ ವೀಕ್ಷಿಸಿ ವಿದ್ಯಾರ್ಥಿಗಳಿಗೆ ಮೆಚ್ಚುಗೆ ವ್ಯಕ್ತಪಡಿಸಿದರು.

ವೇದಿಕೆಯಲ್ಲಿ ಶಾಲೆಯ ಸಂಚಾಲಕರಾದ ಅನಂತ ಪದ್ಮನಾಭ ಭಟ್, ಮುಖ್ಯ ಶಿಕ್ಷಕಿ ಜಯ ಶ್ರೀ ಜೈನ್ ಸೇರಿದಂತೆ ಇತರೆ ಪ್ರಮುಖರು ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು, ಪೋಷಕರು, ಸೇರಿದಂತೆ ಶಿಕ್ಷಕರು ಭಾಗಿಯಾಗಿದ್ದರು. ಕಾರ್ಯಕ್ರಮವನ್ನು ಅಧ್ಯಾಪಕರಾದ ಯುವರಾಜ್ ನಿರೂಪಿಸಿ , ವಂದಿಸಿದರು.

‘ಮಂಜುಳಾ’ ಹಸ್ತಪ್ರತಿ ಬಿಡುಗಡೆ, ಸನ್ಮಾನ :
ಸಮಾರಂಭದಲ್ಲಿ ವಾರ್ಷಿಕ ಶೈಕ್ಷಣಿಕ ಚಟುವಟಿಕೆಗಳ ವರದಿ ಸೇರಿದಂತೆ ವಿದ್ಯಾರ್ಥಿಗಳಿಂದ ವಿರಚಿತವಾದ ಕಥೆ,ಕವನ, ಚಿತ್ರ ಕಥೆ, ಲೇಖನಗಳಿಂದ ವಿಶೇಷವಾಗಿ ತಯಾರಿಸಿದ ಮಂಜುಳಾ ಹಸ್ತ ಪ್ರತಿಯನ್ನು ಡಾ. ಹೇಮಾವತಿ ವಿ. ಹೆಗ್ಗಡೆಯವರು ಬಿಡುಗಡೆಗೊಳಿಸಿದರು. ಇದೇ ಸಂದರ್ಭದಲ್ಲಿ ಶಾಲೆಯ ಬೆಸ್ಟ್ ಔಟ್ ಗೋಯಿಂಗ್ ವಿದ್ಯಾರ್ಥಿನಿ ಪಂಚಮಿ ಯವರಿಗೆ ಪ್ರಶಸ್ತಿ ಪ್ರಧಾನ ಮಾಡಿ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ವಿದ್ಯಾರ್ಥಿ ಕ್ಷೇಮ ಪಾಲನ ಅಧಿಕಾರಿ ಧನ್ಯ ಕುಮಾರ್, ಶಾಲೆಯ ಮುಖ್ಯಸ್ಥೆ ಜಯ ಶ್ರೀ ಜೈನ್ ಸೇರಿದಂತೆ ಇತರೆ ಅಧ್ಯಾಪಕರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ಅಶಕ್ತರಿಗೆ ಆರ್ಥಿಕ ಸಹಕಾರ, 500 ಗಿಡಗಳ ವಿತರಣೆಯೊಂದಿಗೆ ವಿಶಿಷ್ಟ ರೀತಿಯಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಸಾವ್ಯ ಶುಭೋದಯ ಹಿಂದೂ ಸೇವಾ ಟ್ರಸ್ಟ್ ಆಶ್ರಯದಲ್ಲಿ ಬಿಡ್ಡಿಂಗ್ ಮಾದರಿಯ ವಾಲಿಬಾಲ್ ಪಂದ್ಯಾಟ

Suddi Udaya

ಬೆಳ್ತಂಗಡಿ ಎಸ್‌.ಐ.ಟಿ ಕಚೇರಿಗೆ ಹಾಜರಾದ ಜಯಂತ್.ಟಿ

Suddi Udaya

ತೆಂಕಕಾರಂದೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಶ್ರೀ ರಾಮ ದೇವರು ರಾಮ ತಾರಕ ಹೋಮ ಪೂರ್ಣಹುತಿ ಕಾಲದಲ್ಲಿ ಅಗ್ನಿ ಮುಖದಲ್ಲಿ ಕಂಡು ಬಂದ ದೃಶ್ಯ

Suddi Udaya

ಕೇಂದ್ರ ಕಾನೂನು ಮತ್ತು ನ್ಯಾಯ ಸಚಿವರು ಹಾಗೂ ಸಂಸದೀಯ ವ್ಯವಹಾರಗಳ ರಾಜ್ಯ ಸಚಿವ ಅರ್ಜುನ್ ರಾಮ್ ಮೇಘವಾಲ್ ಧರ್ಮಸ್ಥಳ ಹಾಗೂ ಶಾಂತಿವನ ಭೇಟಿ

Suddi Udaya

ಪುಂಜಾಲಕಟ್ಟೆ : ದಾಖಲೆ ಇಲ್ಲದೆ ಎಟಿಎಂ ವಾಹನದಲ್ಲಿ ಸಾಗಿಸುತ್ತಿದ್ದ ರೂ.10 ಲಕ್ಷ ಹಣ ವಶ

Suddi Udaya
error: Content is protected !!