September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಪದವಿಪೂರ್ವ ಕಾಲೇಜುಗಳ ವಿಭಾಗ ಮಟ್ಟದ ಸಾಂಸ್ಕೃತಿಕ ಸ್ಪರ್ಧೆ : ಉಜಿರೆ ಎಸ್ ಡಿ ಎಮ್ ಪದವಿ ಪೂರ್ವ ಕಾಲೇಜಿನ ಮೂರು ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ ಆಯ್ಕೆ

ಉಜಿರೆ: ಸಾರ್ವಜನಿಕ ಶಿಕ್ಷಣ ಇಲಾಖೆ (ಪದವಿ ಪೂರ್ವ) ಇವರು ಉಡುಪಿಯ ಪೂರ್ಣಪ್ರಜ್ಞಾ ಪದವಿ ಪೂರ್ವ ಕಾಲೇಜಿನ ಆಶ್ರಯದಲ್ಲಿ ನಡೆಸಿದ ಮೈಸೂರು ವಿಭಾಗ ಮಟ್ಟದ ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಪೂರ್ವ ಕಾಲೇಜಿನ ಮೂವರು ವಿದ್ಯಾರ್ಥಿಗಳು ಬಹುಮಾನ ಪಡೆದು ರಾಜ್ಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.
ಪ್ರಥಮ ಪಿಯುಸಿ ವಿಭಾಗದ ಪೆನ್ಸಿಲ್ ಸ್ಕೆಚ್ ಸ್ಪರ್ಧೆಯಲ್ಲಿ ಸಾತ್ವಿಕ್ ಭಟ್ ಪ್ರಥಮ ಸ್ಥಾನ, ದ್ವಿತೀಯ ಪಿಯುಸಿ ವಿಭಾಗದ ಪೆನ್ಸಿಲ್ ಸ್ಕೆಚ್ ಸ್ಪರ್ಧೆಯಲ್ಲಿ ಪ್ರೀತಮ್ ಶೆಟ್ಟಿಗಾರ್ ತೃತೀಯ ಸ್ಥಾನ,ಏಕ ಪಾತ್ರಾಭಿನಯ ಸ್ಪರ್ಧೆಯಲ್ಲಿ ಹಂಸಿನಿ ಭಿಡೆ ತೃತೀಯ ಸ್ಥಾನ ಪಡೆದು ತುಮಕೂರಿನಲ್ಲಿ ನಡೆಯುವ ರಾಜ್ಯ ಮಟ್ಟದ ಸ್ಪರ್ಧೆಗೆ ಆಯ್ಕಯಾಗಿದ್ದಾರೆ.

ವಿದ್ಯಾರ್ಥಿಗಳ ಸಾಧನೆಯನ್ನು ಸಂಸ್ಥೆಯ ಕಾರ್ಯದರ್ಶಿಗಳಾದ ಡಾ.ಸತೀಶ್ಚಂದ್ರ ಎಸ್, ಪ್ರಾಂಶುಪಾಲರಾದ ಪ್ರಮೋದ್ ಕುಮಾರ್ ಬಿ, ಉಪ ಪ್ರಾಂಶುಪಾಲರಾದ ರಾಜೇಶ್ ಬಿ, ಸಾಂಸ್ಕೃತಿಕ ಸಮಿತಿಯ ಸಂಯೋಜಕರಾದ ನಾಗರಾಜ್ ಬಿ. ಅಭಿನಂದಿಸಿದ್ದಾರೆ. ಉಪನ್ಯಾಸಕಿಯರಾದ ಶ್ರೀಮತಿ ಅಮೃತಾ ಎನ್, ಶ್ರೀಮತಿ ಸುಚೇತಾ, ಶ್ರೀಮತಿ ಅಂಬಿಕಾ ಹಾಗು ಸಾಂಸ್ಕೃತಿಕ ಸಮಿತಿಯ ಉಪನ್ಯಾಸಕರು ವಿದ್ಯಾರ್ಥಿಗಳಿಗೆ ತರಭೇತಿ ನೀಡಿದ್ದರು.

Related posts

ಗೇರುಕಟ್ಟೆ ಶ್ರೀ ಕೃಷ್ಣ ಭಜನಾ ಮಂದಿರಕ್ಕೆ ಪರಿಷತ್ ರಾಜ್ಯಾಧ್ಯಕ್ಷರು ಮತ್ತು ತಾಲೂಕು ಪದಾಧಿಕಾರಿಗಳು ಭೇಟಿ

Suddi Udaya

ಪುದುವೆಟ್ಟು ಪಂ. ಉಪಚುನಾವಣೆ: ಬಿಜೆಪಿ ಬೆಂಬಲಿತ ಅಭ್ಯರ್ಥಿ ಜಯಲಕ್ಷ್ಮೀ ಯವರಿಂದ ನಾಮಪತ್ರ ಸಲ್ಲಿಕೆ

Suddi Udaya

ಇ-ಸ್ವತ್ತು ತಂತ್ರಾಂಶದಲ್ಲಿ ಸರ್ವೆ ನಂಬರ್ ಮತ್ತು ಮಾಲೀಕರ ವಿವರ ತಿದ್ದುಪಡಿಗೆ ಪಂಚಾಯತಿ ಅಭಿವೃದ್ಧಿ ಅಧಿಕಾರಿಗೆ ಅವಕಾಶ ಕಲ್ಪಿಸುವಂತೆ ಪಂಚಾಯತ್ ರಾಜ್ ಸಚಿವರಿಗೆ ರಕ್ಷಿತ್ ಶಿವರಾಂ ಮನವಿ

Suddi Udaya

ಉರುವಾಲು: ಶ್ರೀ ಭಾರತೀ ಆಂ.ಮಾ. ಪ್ರೌಢ ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಲಾಯಿಲ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಎಸ್.ಡಿ.ಎಂ. ಇಂಜಿನಿಯರಿಂಗ್ ಕಾಲೇಜಿನಲ್ಲಿ ಶಿಕ್ಷಣ, ಸಂಶೋಧನೆ, ಮತ್ತು ಉದ್ಯಮಶೀಲತೆ ಕಾರ್ಯಾಗಾರ

Suddi Udaya
error: Content is protected !!