23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ “ಬಹುಮಾನ ವಿತರಣಾ ದಿನ”

ಉಜಿರೆ: ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯ ಶಾಲಾ ವಾರ್ಷಿಕೋತ್ಸವದ ಅಂಗವಾಗಿ ಉಜಿರೆ ಎಸ್.ಡಿ.ಎಮ್ ಪದವಿ ಕಾಲೇಜಿನ ಇಂದ್ರಪ್ರಸ್ಥ ಸಭಾಂಗಣದಲ್ಲಿ “ಬಹುಮಾನ ವಿತರಣಾ” ಕಾರ್ಯಕ್ರಮ ಆಯೋಜಿಸಲಾಗಿತ್ತು. ಪ್ರಾಥಮಿಕ ಹಾಗೂ ಪ್ರೌಢಶಾಲೆ ವಿದ್ಯಾರ್ಥಿಗಳಿಗೆ ಶಾಲಾ ವಾರ್ಷಿಕೋತ್ಸವದ ಅಂಗವಾಗಿ ನಡೆಸಿದ್ದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.

ಶಾಲೆಯ ಹಿರಿಯ ವಿದ್ಯಾರ್ಥಿಗಳಾದ ಹಾಗೂ ಅಭ್ಯಾಸ್ ಪದವಿಪೂರ್ವ ಕಾಲೇಜಿನ ಅಧ್ಯಕ್ಷ ಕಾರ್ತಿಕೇಯ, ಮಂಗಳೂರಿನ ತತ್ವಸಿದ್ಧ ಕಾನೂನು ಸಂಸ್ಥೆಯ ವಕೀಲೆ ಶ್ರೀಮತಿ ಶ್ರದ್ಧಾ ಶೆಟ್ಟಿ, ಅಗ್ರಿಲೀಫ್ ಎಕ್ಸ್ಪೋರ್ಟ್ ಪ್ರೈವೇಟ್ ಲಿಮಿಟೆಡ್ ಸಹ ಸಂಸ್ಥಾಪಕ ಶ್ರೀ ಅತಿಷಯ ಜೈನ್, ಸುದ್ದಿ ಬಿಡುಗಡೆ ಸಂಪಾದಕೀಯ ಸಲಹೆಗಾರ ರಾಘವ ಶರ್ಮ, BOSCH Automotive Electronics ವ್ಯವಸ್ಥಾಪಕ ವಿವೇಕ್ ಮರಾಟೆ ಮುಖ್ಯ ಅತಿಥಿಗಳಾಗಿ ಆಗಮಿಸಿ ಬಹುಮಾನ ವಿತರಿಸಿ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.

ಕಾರ್ಯಕ್ರಮದಲ್ಲಿ ಶಾಲಾ ವಿದ್ಯಾರ್ಥಿಗಳಿಂದ ಗುಂಪು ಗಾಯನ, ಕೊಳಲು, ತಬಲ ಹಾಗೂ ವೀಣಾ ವಾದನ ಆಯೋಜಿಸಲಾಗಿತ್ತು.

ಶಾಲಾ ಪ್ರಾಂಶುಪಾಲರಾದ ಮನಮೋಹನ್ ನಾಯ್ಕ್ ಕೆ.ಜಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು.

ವಿದ್ಯಾರ್ಥಿಗಳಾದ ಕ್ರಿಷ್ಟಿ ಹಾಗೂ ಶಶಾಂಕ್ ಪ್ರಭು ಕಾರ್ಯಕ್ರಮ ನಿರೂಪಿಸಿದರು.

Related posts

ಮರೋಡಿ: ಉಮಾಮಹೇಶ್ವರ ಯಂಗ್ ಸ್ಟಾರ್ ಫ್ರೆಂಡ್ಸ್ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಹರೀಶ್ ಪೂಂಜ ಗೆಲುವು: ಬೆಳಾಲಿನಲ್ಲಿ ಕಾರ್ಯಕರ್ತರಿಂದ ಸಂಭ್ರಮಾಚರಣೆ

Suddi Udaya

ಬಳಂಜ: ಅಸೌಖ್ಯದಿಂದ ಮಹಿಳೆ ಸಾವು

Suddi Udaya

ಎಸ್.ಡಿ.ಎಂ ಕಾಲೇಜಿನ ಸ್ಥಾಪಕ ಪ್ರಾಂಶುಪಾಲರು, ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ಉಪಾಧ್ಯಕ್ಷ ಪ್ರೊ.ಎಸ್ ಪ್ರಭಾಕರ್ ವಿಧಿವಶ

Suddi Udaya

ಮನೋಜ್ ಕಟ್ಟೆಮಾರ್‌ರವರ ಹುಟ್ಟುಹಬ್ಬದ ಪ್ರಯುಕ್ತ ತಾಲೂಕು ಆಸ್ಪತ್ರೆಯ ಬಡ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ

Suddi Udaya

ಉಜಿರೆ ಶಾಂತಿವನದಲ್ಲಿ “ಅತಿಸ್ಥೂಲ ನಿರ್ವಹಣೆಗೆ ಯೋಗ ಮತ್ತು ನೈಸರ್ಗಿಕ ಚಿಕಿತ್ಸೆ ಕಾರ್ಯಾಗಾರ ಸಂಪನ್ನ

Suddi Udaya
error: Content is protected !!