September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪುಂಜಾಲಕಟ್ಟೆಕರ್ನಾಟಕ ಪಬ್ಲಿಕ್ ಸ್ಕೂಲ್ ನಲ್ಲಿ ಮಾಸಿಕ ಆರೋಗ್ಯ ಜಾಗೃತಿ

ಪುಂಜಾಲಕಟ್ಟೆ: ಸ್ನಾತಕೋತ್ತರ ಸಮಾಜ ಕಾರ್ಯ ವಿಭಾಗ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜು (ಸ್ವಾಯತ್ತ ) , ಉಜಿರೆ ಮತ್ತು ಗ್ರಾಮ ಪಂಚಾಯತ್ ಮಡಂತ್ಯಾರು ಇದರ ಸಹಯೋಗದೊಂದಿಗೆ ಮಾಸಿಕ ಆರೋಗ್ಯ ಜಾಗೃತಿ ಕಾರ್ಯಕ್ರಮ ಕರ್ನಾಟಕ ಪಬ್ಲಿಕ್ ಸ್ಕೂಲ್ ಪುಂಜಾಲಕಟ್ಟೆಯಲ್ಲಿ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶಾಲಾ ಮುಖ್ಯೋಪಾಧ್ಯಾಯನಿ ಶ್ರೀಮತಿ ಅನಿತಾ ಬರೆಟ್ಟೋ ಮಾತನಾಡಿ, ಹೆಣ್ಣು ಮಕ್ಕಳು ಪ್ರೌಢಾವಸ್ಥೆಯ‌ ಸಮಯದಲ್ಲಿ ದೈಹಿಕವಾಗಿ ಹಾಗೂ ಮಾನಸಿಕವಾಗಿ ತಮ್ಮಲ್ಲಿ ಬದಲಾವಣೆಯಾದಾಗ ವಿಚಲಿತ ರಾಗದೆ ತಮ್ಮ ಆರೋಗ್ಯದ ಬಗ್ಗೆ ಗಮನ ಹರಿಸುವುದು ಉತ್ತಮ ಎಂದರು.

ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ್ದ ಡಾ . ಭಾಷಿಣಿ (BNYS) ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನ ಮಹಾವಿದ್ಯಾಲಯ ಉಜಿರೆ, ಇವರು ಮಾತನಾಡಿ ಮುಟ್ಟಿನ ಸಮಯದಲ್ಲಿ ಆರೋಗ್ಯದ ಸ್ವಚ್ಛತೆಯನ್ನು ಕಾಪಾಡಿಕೊಳ್ಳುವುದು ಬಹಳ ಮುಖ್ಯ ಇದು ನೈಸರ್ಗಿಕವಾಗಿ ಹೆಣ್ಣು ಮಕ್ಕಳಲ್ಲಿ ಆಗುವ ಪ್ರಕ್ರಿಯೆ ನಾಚಿಕೆ ಪಡುವ ವಿಷಯವಲ್ಲ ಇದರ ಬಗ್ಗೆ ಮುಕ್ತವಾಗಿ ಮಾತನಾಡಬಹುದು ಎಂದು ಇಂದು ಅಭಿಪ್ರಾಯ ಪಟ್ಟರು.
ಹಾಗೂ ಪೌಷ್ಟಿಕ ಆಹಾರ ಸೇವನೆ, ಯೋಗ ಇತ್ಯಾದಿಗಳನ್ನು ಮಾಡುವುದರಿಂದ ತೀವ್ರ ಹೊಟ್ಟೆ ನೋವನ್ನು ತಡೆಗಟ್ಟಬಹುದು ಎಂದು ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸಿದರು.

ಕಾರ್ಯಕ್ರಮದಲ್ಲಿ ಡಾ. ಭಾಷಿಣಿ ಅವರಿಗೆ ಕಿರು ನೆನಪಿನ ಕಾಣಿಕೆ ನೀಡಿ ಗೌರವಿಸಲಾಯಿತು.

ಸಮಾಜ ಕಾರ್ಯ ವಿಭಾಗದ ವಿದ್ಯಾರ್ಥಿಗಳಾದ ಸೌಮ್ಯ ಸ್ವಾಗತಿಸಿದರು, ಚರಿಷ್ಮಾ ವಂದಿಸಿದರು. ಉಷಾ ಕಾರ್ಯಕ್ರಮ ನಿರೂಪಿಸಿದರು.

Related posts

ಗುರುವಾಯನಕೆರೆ ವಿದ್ವತ್ ಪಿಯು ಕಾಲೇಜಿನಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಉಜಿರೆ: ಜೀನಿಯಸ್ ಕೋಚಿಂಗ್ ಸೆಂಟರ್ ಸ್ಥಳಾಂತರಗೊಂಡು ಶುಭಾರಂಭ

Suddi Udaya

ಮಾ.10: ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರೆ: ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಯುವ ಸಂಸತ್ತು ಸ್ಪರ್ಧೆ: ಇಳ೦ತಿಲ ನಿವಾಸಿ ಅರ್ಪಿತಾ ಎ. ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ಮತದಾರರ ಪಟ್ಟಿಯಲ್ಲಿ ಎಡವಟ್ಟು: ಮುಂಡಾಜೆಯ ಅಶ್ವಿನಿ ಎ. ಹೆಬ್ಬಾರ್ ಬಂಟ್ವಾಳ ಆಡಳಿತ ಸೌಧದಲ್ಲಿ ಮತದಾನ

Suddi Udaya

ಎಕ್ಸೆಲ್ ಪದವಿ ಪೂರ್ವ ಕಾಲೇಜಿಗೆ ಮರು ಮೌಲ್ಯ ಮಾಪನದಲ್ಲಿ ಹೆಚ್ಚಿದ ರ್‍ಯಾಂಕ್ ಗಳು

Suddi Udaya
error: Content is protected !!