ಅಪರಾಧ ಸುದ್ದಿಗ್ರಾಮಾಂತರ ಸುದ್ದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿವರದಿ

ಪುಂಜಾಲಕಟ್ಟೆ: ಅಕ್ರಮ ಗೋಸಾಗಾಟ ಪ್ರಕರಣ ದಾಖಲು:ಜಾನುವಾರು ನೀಡಿದ ಮಾಲೀಕನ ಮನೆ ಮತ್ತು ಕೊಟ್ಟಿಗೆ ಒಪ್ತಿ

ಬೆಳ್ತಂಗಡಿ: ಬಂಟ್ವಾಳ ಉಳಿ ಗ್ರಾಮದ ಮಣಿನಾಲ್ಕೂರು- ತೆಕ್ಕಾರು ರಸ್ತೆಯಲ್ಲಿ ಗೂಡ್ಸ್ ಅಟೋದಲ್ಲಿ ಯಾವುದೇ ಪರವಾನಿಗೆ ಇಲ್ಲದೇ ಅಕ್ರಮವಾಗಿ ಜಾನುವಾರನ್ನು ಸಾಗಾಟ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಬಂದ ಮೇರೆಗೆ ಡಿ.13 ರಂದು ಪುಂಜಾಲಕಟ್ಟೆ ಪೊಲೀಸ್ ಠಾಣೆಯ ಪೊಲೀಸ್ ಉಪ ನಿರೀಕ್ಷಕ ರಾಜೇಶ್ ಮತ್ತು ಸಿಬ್ಬಂದಿಗಳು KA-70-8686 ನೇ ನೊಂದಣಿಯ ಗೂಡ್ಸ್ ಅಟೋವನ್ನು ತಡೆದು ಪರಿಶೀಲಿಸಿದಾಗ ಅದರಲ್ಲಿ ಒಂದು ಜಾನುವಾರನ್ನು ಹಗ್ಗದಿಂದ ಹಿಂಸಾತ್ಮಕವಾಗಿ ಕಟ್ಟಿ ಹಾಕಿರುವುದು ಪತ್ತೆ ಹಚ್ಚಿದ್ದಾರೆ.

ಜಾನುವಾರು ಸಾಗಿಸುತ್ತಿದ್ದ ವಾಹನ ಚಾಲಕ ಬಂಟ್ವಾಳ ಮಣಿನಾಲ್ಕೂರು ಗ್ರಾಮದ ನಿವಾಸಿ ಶ್ರೀಧರ ಪೂಜಾರಿ(56) ಎಂಬುದಾಗಿ ತಿಳಿದುಬಂದಿದ್ದು. ಈ ಜಾನುವಾರನ್ನು ಬಂಟ್ವಾಳ ಸರಪ್ಪಾಡಿ ಎಂಬಲ್ಲಿ ಭೋಜ ಮೂಲ್ಯ ಎಂಬವರ ಮನೆಯಿಂದ ಯಾವುದೇ ದಾಖಲಾತಿ ಪರವಾನಿಗೆ ಇಲ್ಲದೇ ಗೋಹತ್ಯೆ ಮಾಡಿ ಮಾಂಸ ಮಾಡುವ ಉದ್ದೇಶದಿಂದ ಜಾನುವಾರನ್ನು ಹಿಂಸಾತ್ಮಕ ರೀತಿಯಲ್ಲಿ ಸಾಗಾಟ ಮಾಡಿರುವುದು ಕಂಡುಬಂದಿರುತ್ತದೆ.

ಪತ್ತೆ ಹಚ್ಚಿದ ಒಂದು ಜಾನುವಾರು, ಅಟೋ ಹಾಗು ಒಂದು ಮೊಬೈಲ್ ಫೋನ್ ನನ್ನು ವಶಕ್ಕೆ ಪಡೆದು ಆರೋಪಿಗಳ ವಿರುದ್ಧ ಪುಂಜಾಲಕಟ್ಟೆ ಠಾಣೆಯಲ್ಲಿ ಕಲಂ: 5, 7, 12 ಕರ್ನಾಟಕ ಗೋಹತ್ಯೆ ನಿಷೇಧ ಕಾಯಿದೆ ಮತ್ತು ಜಾನುವಾರು ಸಂರಕ್ಷಣಾ ಕಾಯಿದೆ 2020 ಮತ್ತು ಕಲಂ: 11(1)(ಡಿ) ಪ್ರಾಣಿ ಹಿಂಸೆ ತಡೆ ಕಾಯಿದೆಯಡಿ ಪ್ರಕರಣ ದಾಖಲಿಸಲಾಗಿದೆ.ಮುಂದುವರಿದಂತೆ ತನಿಖೆ ಭಾಗವಾಗಿ ಜಾನುವಾರು ನೀಡಿದ ಆರೋಪಿ ಬಂಟ್ವಾಳ ಗ್ರಾಮದ ಸರಪ್ಪಾಡಿ ನಿವಾಸಿ ಭೋಜ ಮೂಲ್ಯರವರ ಮನೆ ಹಾಗೂ ಜಾನುವಾರು ಕೊಟ್ಟಿಗೆ ಸೇರಿದಂತೆ ಆವರಣವನ್ನು ಪುಂಜಾಲಕಟ್ಟೆ ಪೊಲೀಸರು ಡಿ.14 ರಂದು ಕಾನೂನು ಪ್ರಕ್ರಿಯೆಯಂತೆ ಜಪ್ತಿ ಮಾಡಿದ್ದಾರೆ.

Related posts

ಅನಾರು ದೇವಸ್ಥಾನ ವರ್ಷಾವಧಿ ಜಾತ್ರಾ ಮಹೋತ್ಸವ: ತೋರಣ ಮುಹೂರ್ತ, ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ, ಕ್ಯಾಲೆಂಡರ್ ಬಿಡುಗಡೆ

Suddi Udaya

ಆರೋಗ್ಯ ಸಮಸ್ಯೆಯಿಂದ ಬಳಲಿ ಗುಣಮುಖರಾಗುತ್ತಿರುವ ಗಿಂಡಾಡಿ ಗುರುರಾಜ್ ಹೆಗ್ಡೆಯವರಿಗೆ ಅಳದಂಗಡಿ ಪ್ರಾ.ಕೃ.ಪ.ಸ. ಸಂಘದಿಂದ ರೂ. 50 ಸಾವಿರ ವೈದ್ಯಕೀಯ ನೆರವು ಹಸ್ತಾಂತರ

Suddi Udaya

ಎಸ್‌ಡಿಪಿಐ ಬೆಳ್ತಂಗಡಿ ವತಿಯಿಂದ ಕಾರ್ಯಕರ್ತರ ಸಮಾವೇಶ

Suddi Udaya

ಪಡಂಗಡಿ : ಪೊಯ್ಯೆಗುಡ್ಡೆ ನಿವಾಸಿ ಶ್ರೀಮತಿ ಕಮಲ ನಿಧನ

Suddi Udaya

ಮರೋಡಿ: ದೇರಾಜೆ ಬೆಟ್ಟ ಎಂಬಲ್ಲಿಗೆ ಹೋಗುವ ಸಂಪರ್ಕ ರಸ್ತೆ ಕುಸಿತ

Suddi Udaya

ಮೇ 13-21: ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ

Suddi Udaya
error: Content is protected !!