25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಿಡ್ಲೆ ಸರ್ಕಾರಿ ಪ್ರೌಢಶಾಲೆಯಲ್ಲಿ ಪ್ರತಿಭಾ ದಿನಾಚರಣೆ : ಯಕ್ಷ ಶಿಕ್ಷಣ ವಿದ್ಯಾರ್ಥಿಗಳಿಂದ ಯಕ್ಷಗಾನ ಪ್ರದರ್ಶನ

ನಿಡ್ಲೆ ಸರ್ಕಾರಿ ಪ್ರೌಢಶಾಲೆಯಲ್ಲಿನ ಪ್ರತಿಭಾ ದಿನಾಚರಣೆಯ ಸಂದರ್ಭದಲ್ಲಿ ಯಕ್ಷ ಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ನ ಯಕ್ಷ ಶಿಕ್ಷಣ ವಿದ್ಯಾರ್ಥಿಗಳಿಂದ ಪೂರ್ವರಂಗ ಮತ್ತು ಯಕ್ಷಗಾನ ಮೇದಿನಿ ನಿರ್ಮಾಣ ಪ್ರದರ್ಶನಗೊಂಡಿತು. ಒಟ್ಟು 30 ವಿದ್ಯಾರ್ಥಿಗಳು ಪ್ರದರ್ಶನದಲ್ಲಿ ಪಾಲ್ಗೊಂಡಿದ್ದರು. ಟ್ರಸ್ಟ್ ನ ಸಂಚಾಲಕರಾದ ವಾಸುದೇವ ಐತಾಳ್ ಇವರು ಪಟ್ಲ ಫೌಂಡೇಶನ್ ನಿಂದ ಶಾಲೆಗಳಲ್ಲಿ ನಡೆಯುವ ಯಕ್ಷ ಶಿಕ್ಷಣ ಕಾರ್ಯಕ್ರಮ ಬಗ್ಗೆ ತಿಳಿಸುತ್ತಾ ನಿಡ್ಲೆ ಶಾಲೆಯಲ್ಲಿ ಮೂರು ವರ್ಷದಿಂದ ಈ ಕಾರ್ಯಕ್ರಮ ನಡೆಯುತ್ತಿದ್ದು ಮಕ್ಕಳು ಭಾಗವಹಿಸುವಂತೆ ಪೋಷಕರು ಕೂಡ ಪ್ರೇರೇಪಿಸಬೇಕು ಎಂಬ ಕಿವಿ ಮಾತು ಹೇಳಿದರು.

ಈ ಕಾರ್ಯಕ್ರಮಕ್ಕೆ ಫೌಂಡೇಶನ್ ವತಿಯಿಂದ ರೂ. 15000 ನ ಚೆಕ್ ನೀಡಿದರು. ಬೆಳ್ತಂಗಡಿ ಘಟಕದ ಅಧ್ಯಕ್ಷ ಸುರೇಶ್ ಶೆಟ್ಟಿ ಉಪಸ್ಥಿತರಿದ್ದರು. ಯಕ್ಷ ಶಿಕ್ಷಕರಾದ ಈಶ್ವರ ಪ್ರಸಾದ್, ಶಾಲಾ ಮುಖ್ಯ ಶಿಕ್ಷಕರು, ಸಹ ಶಿಕ್ಷಕರು ಎಸ್ ಡಿ ಎಮ್ ಸಿ ಅಧ್ಯಕ್ಷರು ಮತ್ತು ಸದಸ್ಯರು, ಪೋಷಕರು ಮತ್ತು ವಿದ್ಯಾರ್ಥಿಗಳು ಹಾಜರಿದ್ದರು. ಈ ಸಂದರ್ಭದಲ್ಲಿ ಯಕ್ಷ ಗುರುಗಳಾದ ಈಶ್ವರ ಪ್ರಸಾದ್ ಇವರನ್ನು ಗೌರವಿಸಲಾಯಿತು. ಒಟ್ಟಿನಲ್ಲಿ ಕಾರ್ಯಕ್ರಮ ಉತ್ತಮವಾಗಿ ಮೂಡಿಬಂದಿತು.

Related posts

ಧರ್ಮಸ್ಥಳ : ಮುಳಿಕ್ಕಾರು ನಿವಾಸಿ ವಿನುತ ನೇಣುಬಿಗಿದು ಆತ್ಮಹತ್ಯೆ

Suddi Udaya

ಅಕ್ಷಯ ತೃತೀಯದ ಚಿನ್ನದ ಖರೀದಿ- ಧರ್ಮ ಪರಂಪರೆ – ಮುಳಿಯ ಗೋಲ್ಡ್ & ಡೈಮಂಡ್ಸ್ ನಲ್ಲಿ ವಿಚಾರ ಸಂಕಿರಣ

Suddi Udaya

ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯಿಂದ ಶ್ರೀ ಗುರು ಪೂಜೋತ್ಸವ: ಸರ್ವೇಶ್ವರೀ ದೇವಿಯ ಪೂಜೆಯಲ್ಲಿ ನೂರಾರು ಮಹಿಳಾ ವೃತಧಾರಿಗಳು ಭಾಗಿ, ಸಾಧಕರಿಗೆ ಸನ್ಮಾನ,

Suddi Udaya

ವಿಶೇಷ ಚೇತನರ ಬಾಳಿಗೆ ಬೆಳಕಾದ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜನಮಂಗಲ ಕಾರ್ಯಕ್ರಮ: 8,768 ವಿವಿಧ ಉಚಿತ ಸಲಕರಣೆ ವಿತರಣೆ

Suddi Udaya

ಕೊಕ್ಕಡ ಪ್ರಾ.ಕೃ.ಪ.ಸ. ಸಂಘಕ್ಕೆ ದ‌.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಪ್ರೋತ್ಸಾಹಕ ಪ್ರಶಸ್ತಿ

Suddi Udaya

ಕಳೆಂಜ : ಶಾಸಕ ಹರೀಶ್ ಪೂಂಜರ ಅನುದಾನದಲ್ಲಿ ಕಾಯರ್ತಡ್ಕ ಕುಲಾಡಿ ಸಂಪರ್ಕ ರಸ್ತೆಯ ಕಾಂಕ್ರಿಟೀಕರಣ ಕಾಮಗಾರಿ ಪೂರ್ಣ

Suddi Udaya
error: Content is protected !!