March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ತಾಲೂಕು ಆದಿದ್ರಾವಿಡ ಸಮಾಜ ಸೇವಾ ಸಂಘದ ವತಿಯಿಂದ ದಿ| ಅಮ್ಮುಕುಮಾರ್ ರವರಿಗೆ ನುಡಿನಮನ

ಬೆಳ್ತಂಗಡಿ : ಕರ್ನಾಟಕ ರಾಜ್ಯ ಆದಿದ್ರಾವಿಡ ಸಮಾಜ ಸೇವಾ ಸಂಘ ತಾಲೂಕು ಘಟಕ ಬೆಳ್ತಂಗಡಿ, ಇದರ ಗೌರವ ಸಲಹೆಗಾರರು ಅಮ್ಮು ಕುಮಾರ್ ಅಳದಂಗಡಿ ಇವರು ಇತ್ತೀಚೆಗೆ ನಿಧನರಾಗಿದ್ದು ತಾಲೂಕು ಘಟಕದ ವತಿಯಿಂದ ನುಡಿನಮನ ಕಾರ್ಯಕ್ರಮವು ಬೆಳ್ತಂಗಡಿಯ ಡಾ|| ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಡಿ.14 ರಂದು ನಡೆಯಿತು.

ಕರ್ನಾಟಕ ರಾಜ್ಯ ಆದಿದ್ರಾವಿಡ ಸಮಾಜ ಸೇವಾ ಸಂಘದ ನಿಕಟಪೂರ್ವ ಗೌರವಾಧ್ಯಕ್ಷ ಶೀನ ಮಾಸ್ತಿಕಟ್ಟೆರವರು ದೀಪ ಬೆಳಗಿ, ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ, ಸಂಘಟನೆಗೆ ಮತ್ತು ಸಮುದಾಯಕ್ಕೆ ಅವರು ನೀಡಿದ ಕೊಡುಗೆಗಳನ್ನು ವಿವರಿಸುವುದರ ಮೂಲಕ ನುಡಿನಮನ ಸಲ್ಲಿಸಿದರು.

ಆದಿದ್ರಾವಿಡ ಸಮುದಾಯದ ಮತ್ತು ಸಂಘಟನೆಯ ಪ್ರಮುಖರಾದ ವೆಂಕಪ್ಪ ಪಿ.ಎಸ್, ಶೀಮತಿ ಯಮುನ ನಾರಾವಿ, ಗೋಪಾಲಕೃಷ್ಣ ಕುಕ್ಕಳ, ರಾಘವ ಕಲ್ಮಂಜ, ದಿನೇಶ್ ಕೆ, ಕೊಕ್ಕಡ, ಶೇಖರ್ ವಿ. ಧರ್ಮಸ್ಥಳ, ಶರತ್ ಕೊಕ್ಕಡ, ಇವರುಗಳು ದಿ| ಅಮ್ಮುಕುಮಾರ್ ಇವರ ಬಾಲ್ಯದ ಕಷ್ಟಕರ ಜೀವನ, ಕಲಿಕೆ ಮತ್ತು ಉದ್ಯೋಗವನ್ನು ಪಡೆದುಕೊಳ್ಳುವಲ್ಲಿನ ಆಸಕ್ತಿ, ವ್ಯಕ್ತಿತ್ವ, ಅವರ ಸಂತೃಪ್ತ ಸಾಂಸಾರಿಕ ಜೀವನ, ಹಾಗೂ ಸಾಮಾಜಿಕವಾಗಿ, ಸಂಘಟನಾತ್ಮಕವಾಗಿ ಸಮುದಾಯಕ್ಕೆ ಓರ್ವ ವ್ಯಕಿಯಾಗಿ ಮತ್ತು ಶಕ್ತಿಯಾಗಿ ನೀಡಿದ ಕೊಡುಗೆಗಳನ್ನು ಮನನ ಮಾಡಿಕೊಳ್ಳುವುದರ ಮೂಲಕ ಅವರಿಗೆ ನುಡಿನಮನ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ತಾಲೂಕು ಮತ್ತು ಗ್ರಾಮ ಸಮಿತಿಯ ಪದಾಧಿಕಾರಿಗಳು, ಆದಿದ್ರಾವಿಡ ಸಮುದಾಯದ ಪ್ರಮುಖರು ಉಪಸ್ಥಿತರಿದ್ದರು.
ಕಾರ್ಯಕ್ರವನ್ನು ತಾಲೂಕು ಘಟಕದ ಪ್ರಧಾನ ಕಾರ್ಯದರ್ಶಿಯಾದ ಶೇಖರ್ ವಿ. ಧರ್ಮಸ್ಥಳ ಸ್ವಾಗತಿಸಿ, ಧನ್ಯವಾದ ನೀಡಿದರು.

Related posts

ನೀರಚಿಲುಮೆ-ನಾರ್ಯ ಸಂಪರ್ಕಿಸುವ ರಸ್ತೆಯಲ್ಲಿ ನೀರು ಹರಿಯಲು ಚರಂಡಿ ವ್ಯವಸ್ಥೆಯಿಲ್ಲದೆ ಧರೆ ಕುಸಿತ, ಶೀಘ್ರ ದುರಸ್ಥಿಗೆ ಆಗ್ರಹ

Suddi Udaya

ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನದ ವತಿಯಿಂದ ಸಾಂಸ್ಕೃತಿಕ ವೈಭವ

Suddi Udaya

ಬೆಳ್ತಂಗಡಿ ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘದ ಸಮಾಜಮುಖಿ ಚಿಂತನೆಗೆ ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರಸ್ತುತ ಸಂಘದ ಅಧ್ಯಕ್ಷ ಜಯವಿಕ್ರಮ್ ಕಲ್ಲಾಪು ಮತ್ತು ಆಡಳಿತ ಮಂಡಳಿಯ ಸದಸ್ಯರಿಂದ ನಾಳೆ ಪ್ರಶಸ್ತಿ ಸ್ವೀಕಾರ

Suddi Udaya

ಪೆರೋಡಿತ್ತಾಯಕಟ್ಟೆ ಸರಕಾರಿ ಪ್ರಾಥಮಿಕ ಶಾಲೆಗೆ ಹಳೆ ವಿದ್ಯಾರ್ಥಿ ಸಂಘದಿಂದ ಉಚಿತ ಪುಸ್ತಕ ವಿತರಣೆ

Suddi Udaya

ಪರಸ್ಪರ ಯುವಕ ಮಂಡಲ ಈದು-ನಾರಾವಿ ನೇತೃತ್ವದಲ್ಲಿ ನಡೆಯುವ ಮಹಾಚಂಡಿಕಾ ಯಾಗದ ಪೋಸ್ಟರ್ ಬಿಡುಗಡೆ

Suddi Udaya

ಉಪ್ಪಾರಪಳಿಕೆ ಸರಕಾರಿ ಉ. ಹಿ.ಪ್ರಾ. ಶಾಲೆಯಲ್ಲಿ 400 ಅಡಿಕೆ ಗಿಡ ನೆಡುವ ಕಾರ್ಯಕ್ರಮ

Suddi Udaya
error: Content is protected !!