September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಿಕ್ಷಣ ಸಂಸ್ಥೆ

ವೇಣೂರು ಐಟಿಐಯಲ್ಲಿ ವಾರ್ಷಿಕ ಕ್ರೀಡೋತ್ಸವ

ವೇಣೂರು: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕೈಗಾರಿಕಾ ತರಬೇತಿ ಸಂಸ್ಥೆ ಇಲ್ಲಿನ ವಾರ್ಷಿಕ ಕ್ರೀಡಾಕೂಟವು ಕುಕ್ಕೇಡಿ ಇಂದಿರಾಗಾಂಧಿ ಕ್ರೀಡಾಂಗಣದಲ್ಲಿ ಇತ್ತೀಚೆಗೆ ನಡೆಯಿತು.

ಮುಖ್ಯ ಅತಿಥಿಯಾಗಿ ವೇಣೂರು ಆರಕ್ಷಕ ಉಪನೀರೀಕ್ಷಕರಾದ ಅಕ್ಷಯ್ ಡಿ., ಅವರು ಭಾಗವಹಿಸಿ ಧ್ವಜಾರೋಹಣಗೈದು ಕ್ರೀಡಾ ಕೂಟವನ್ನು ಉದ್ಘಾಟಿಸಿ, ವಿದ್ಯಾರ್ಥಿಗಳ ಪಥಸಂಚಲನದಲ್ಲಿ ಗೌರವ ರಕ್ಷೆ ಸ್ವೀಕರಿಸಿ ಮಾತನಾಡಿ ವಿದ್ಯಾರ್ಥಿಗಳಿಗೆ ಶಿಸ್ತು, ದೈಹಿಕ ಆರೋಗ್ಯ ಹಾಗೂ ಕ್ರೀಡೆಯ ಮಹತ್ವವನ್ನು ವಿವರಿಸಿದರು.

ಸಮಾರೋಪ ಸಮಾರಂಭ ಹಾಗೂ ಬಹುಮಾನ ವಿತರಣಾ ಕಾರ್ಯಕ್ರಮದಲ್ಲಿ ಗಂಗಾಧರ್, ಪ್ರಾಂಶುಪಾಲರು, ಸರ್ಕಾರಿ ಪದವಿಪೂರ್ವ ಕಾಲೇಜು ವೇಣೂರು ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಿ ವಿವಿಧ ಕ್ರೀಡಾ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನಗಳನ್ನು ವಿತರಿಸಿ ಶುಭ ಹಾರೈಸಿದರು.

ಭಾರತೀಯ ಜೀವವಿಮಾ ನಿಗಮದ ಪ್ರತಿನಿಧಿ ಜಗನ್ನಾಥ ದೇವಾಡಿಗ ಮುಖ್ಯ ಅತಿಥಿಯಾಗಿ ಭಾಗವಹಿಸಿ ವಿವಿಧ ಸ್ಫರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಸುಮಾರು ರೂಪಾಯಿ 17,000 ನಗದು ಬಹುಮಾನ ನೀಡಿ ಪ್ರೋತ್ಸಾಹಿಸಿದರು.
ಸಂಸ್ಥೆಯ ಪ್ರಾಚಾರ್ಯರಾದ ವಿಶ್ವೇಶ್ವರ ಪ್ರಸಾದ್‌ ಕೆ. ಆರ್‌. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ವಿದ್ಯಾರ್ಥಿಗಳು ಪಠ್ಯದ ಜೊತ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲೂ ತೊಡಗಿಸಿಕೊಂಡು ಸರ್ವಾಂಗೀಣ ಅಭಿವೃದ್ಧಿ ಹೊಂದಬೇಕೇಂದು ಕರೆನೀಡಿದರು.

ವೇದಿಕೆಯಲ್ಲಿ ಉಪಸ್ಥಿತರಿದ್ದ ಕ್ರೀಡಾ ಸಂಚಾಲಕ ವಿನಯಚಂದ್ರರಾಜ್‌ ಪ್ರಾಸ್ತವಿಕ ಮಾತುಗಳೊಂದಿಗೆ ಸ್ವಾಗತಿಸಿದರು. ಕಿರಿಯ ತರಬೇತಿ ಅಧಿಕಾರಿಗಳಾದ ಶ್ರೀಧರ ಡಿ. ಬಹುಮಾನ ವಿಜೇತರ ಪಟ್ಟಿ ವಾಚಿಸಿ, ನುತಿಪ್ರಿಯ ಧನ್ಯವಾದಗೈದ ಕಾರ್ಯಕ್ರಮವನ್ನು ಪ್ರಸನ್ನ ಕುಮಾರ್‌ ನಿರ್ವಹಿಸಿದರು.

Related posts

ಶುಭ ಗೋಲ್ಡ್ ಸ್ಕೀಮ್ ಯೋಜನೆಯ ಗಿಫ್ಟ್ ವೋಚರ್ ಡ್ರಾ

Suddi Udaya

ಲಯನ್ಸ್ ಬೆಳ್ತಂಗಡಿ ವತಿಯಿಂದ “ಡ್ರಗ್ಸ್ ಮುಕ್ತ ಬೆಳ್ತಂಗಡಿ” ಅಭಿಯಾನದ ಕರಪತ್ರ ಅನಾವರಣ

Suddi Udaya

ಕುಕ್ಕೇಡಿ ಬುಳೆಕ್ಕರ ಶ್ರೀ ಶಾರದಾಂಭ ಭಜನಾ ಮಂಡಳಿ ಅಧ್ಯಕ್ಷರಾಗಿ ಶಶಿಕಲಾ, ಕಾರ್ಯದರ್ಶಿಯಾಗಿ ತೃಪ್ತಿ

Suddi Udaya

ಬೆಳ್ತಂಗಡಿ ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ‘ಆಟಿದ ಪೊರ್ಲು’ ಕಾರ್ಯಕ್ರಮ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಸಹಪಠ್ಯ ಚಟುವಟಿಕೆಗಳ ಉದ್ಘಾಟನೆ

Suddi Udaya

ನೆರಿಯದಲ್ಲಿ ಹಿಂದೂ ರುದ್ರಭೂಮಿಗಾಗಿ ಗ್ರಾಮಸ್ಥರ ಪ್ರತಿಭಟನೆ: ಮೃತದೇಹವನ್ನು ಪಂಚಾಯತ್ ಎದುರಿನಲ್ಲಿಟ್ಟು ಪ್ರತಿಭಟನೆಗೆ ಸಿದ್ದತೆ: ಸ್ಥಳಕ್ಕೆ ತಹಶೀಲ್ದಾರರು ಬರಬೇಕು,ಇಂದೇ ಹಿಂದೂ ರುದ್ರಭೂಮಿಗೆ ಸ್ಥಳ ಮಂಜೂರುಗೊಳಿಸಬೇಕೆಂದು ಒತ್ತಾಯ

Suddi Udaya
error: Content is protected !!