ಉಜಿರೆ: ಮಹಿಳೆಯರ ರಾಜ್ಯಮಟ್ಟದ ಹ್ಯಾಂಡ್‌ಬಾಲ್ ಪಂದ್ಯಾಟದಲ್ಲಿ ಪ್ರಕೃತಿ ಚಿಕಿತ್ಸಾ ಕಾಲೇಜು ಸಾಧನೆ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ, ಬೆಂಗಳೂರು ಹಾಗೂ ಮಂಡ್ಯ ವೈದ್ಯಕೀಯ ಕಾಲೇಜು, ಮಂಡ್ಯ ಇವರ ಸಹಯೋಗದಲ್ಲಿ ಡಿ.10 ಮತ್ತು 11 ರಂದು ಆಯೋಜಿಸಲಾದ ರಾಜ್ಯಮಟ್ಟದ ಮಹಿಳೆಯರ ಹ್ಯಾಂಡ್‌ಬಾಲ್ ಪಂದ್ಯಾಟದಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರಕೃತಿ ಚಿಕಿತ್ಸಾ ಮತ್ತು ಯೋಗವಿಜ್ಞಾನಗಳ ಮಹಾವಿದ್ಯಾಲಯ, ಉಜಿರೆ ಕಾಲೇಜು ತಂಡವು ಉತ್ತಮ ಪ್ರದರ್ಶನ ನೀಡಿ ದ್ವಿತೀಯ ಸ್ಥಾನವನ್ನು ಗಳಿಸಿದೆ.
ಸೆಮಿಫೈನಲ್ ಪಂದ್ಯಾಟದಲ್ಲಿ ಎಸ್‌ಎಸ್‌ಐಎಂಎಸ್, ದಾವಣಗೆರೆ ತಂಡವನ್ನು 4–2 ಗೋಲುಗಳ ಅಂತರದಲ್ಲಿ ಸೋಲಿಸಿ ಫೈನಲ್‌ಗೆ ಪ್ರವೇಶಿಸಿತು. ಫೈನಲ್ ಪಂದ್ಯದಲ್ಲಿ ಕಾಲೇಜು ತಂಡವು ರನ್ನರ್-ಅಪ್ ಸ್ಥಾನವನ್ನು ಪಡೆದುಕೊಂಡಿತು.
ಕಾಲೇಜಿನ ವಿದ್ಯಾರ್ಥಿನಿಯರಿಗೆ ಎಸ್‌ಡಿಎಂ ಸ್ಪೋರ್ಟ್ಸ್ ಕ್ಲಬ್‌ನ ಹ್ಯಾಂಡ್‌ಬಾಲ್ ತರಬೇತಿದಾರರಾದ ಸುದೀನ್ ಅವರು ತರಬೇತಿ ನೀಡಿದ್ದು, ಕಾಲೇಜಿನ ದೈಹಿಕ ನಿರ್ದೇಶಕ ಧರ್ಮೇಂದ್ರ ಕುಮಾರ್ ಅವರು ಸಮಗ್ರ ಮಾರ್ಗದರ್ಶನ ನೀಡಿದರು.











