24.8 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳಾಲು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ, ಗ್ರಾಮ ಸಮಿತಿಯ ವಾರ್ಷಿಕ ಕ್ರೀಡಾಕೂಟ

ಬೆಳಾಲು : ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಬೆಳಾಲು , ಗ್ರಾಮ ಸಮಿತಿ ಇದರ ವಾರ್ಷಿಕ ಕ್ರೀಡಾಕೂಟ ನಡೆಯಿತು. ಕ್ರೀಡಾಕೂಟದ ಉದ್ಘಾಟನೆಯನ್ನು ರಾಜಪ್ಪ ಗೌಡ ಪುಚ್ಚೆಹಿತ್ತಿಲು ಮತ್ತು ನೋಣಯ್ಯ ಗೌಡ ಕೊಲ್ಲಿಮಾರು ಇವರು ದೀಪ ಬೆಳಗಿಸಿ ಉದ್ಘಾಟಿಸಿ, ಕ್ರೀಡಾಕೂಟದ ಯಶಸ್ವಿಗೆ ಶುಭ ಹಾರೈಸಿದರು.

ಮುಖ್ಯ ಅತಿಥಿಗಳಾಗಿ ಶ್ರೀಮತಿ ಕವಿತಾ ಉಮೇಶ್ ಗೌಡ ಮಂಜೊತ್ತು ಕ್ರೀಡೆಯನ್ನು ಕ್ರೀಡಾ ಸ್ಫೂರ್ತಿಯಿಂದ ತೆಗೆದುಕೊಂಡು, ಎಲ್ಲರೂ ಒಗ್ಗಟ್ಟಾಗಿ ಬಾಳಬೇಕೆಂದು ತಿಳಿಸಿದರು.
ಗ್ರಾಮ ಸಮಿತಿಯ ಅಧ್ಯಕ್ಷ ಧರ್ಮೇಂದ್ರ ಗೌಡ ಪುಚ್ಚೆಹಿತ್ತಿಲು ಅಧ್ಯಕ್ಷತೆ ವಹಿಸಿದ್ದ ಕಾರ್ಯಕ್ರಮದಲ್ಲಿ ಗ್ರಾಮ ಸಮಿತಿಯ ಗೌರವಾಧ್ಯಕ್ಷರಾದ ವಿಜಯ ಗೌಡ ಸೌತೆಗದ್ದೆ, ಮಹಿಳಾ ವೇದಿಕೆಯ ಗೌರವಾಧ್ಯಕ್ಷೆ ಶ್ರೀಮತಿ ಕನ್ನಿಕಾ ಪದ್ಮ ಗೌಡ, ಯುವ ವೇದಿಕೆಯ ಗೌರವಾಧ್ಯಕ್ಷ ಉಮೇಶ್ ಗೌಡ ಮಂಜೊತ್ತು, ರಾಜ್ಯ ಮಟ್ಟದ ಯೋಗಪಟು ಧನಂಜಯ ಗೌಡ ಹೋಂಪೆಜಾಲು, ಗ್ರಾಮ ಸಮಿತಿಯ ಮಾಜಿ ಅಧ್ಯಕ್ಷ ಲಕ್ಷ್ಮಣ ಗೌಡ ಸೌತೆಗದ್ದೆ, ಯುವ ವೇದಿಕೆಯ ಅಧ್ಯಕ್ಷ ಸಂಜೀವ ಗೌಡ ಕಾಡಂಡ, ಮಹಿಳಾ ವೇದಿಕೆಯ ಅಧ್ಯಕ್ಷೆ ಶ್ರೀಮತಿ ಲತಾ ಕೇಶವ ಗೌಡ, ತಾಲೂಕು ಮಹಿಳಾ ವೇದಿಕೆಯ ಕಾರ್ಯದರ್ಶಿ ಶ್ರೀಮತಿ ಲೀಲಾ ಸೌತೆಗದ್ದೆ ಮತ್ತು ಗ್ರಾಮ ಸಮಿತಿಯ ಪದಾಧಿಕಾರಿಗಳು ಹಾಗೂ ಸ್ವಜಾತಿ ಬಾಂಧವರು ಉಪಸ್ಥಿತರಿದ್ದರು.

ಮಹಿಳಾ ವೇದಿಕೆಯ ಕಾರ್ಯದರ್ಶಿ ಶ್ರೀಮತಿ ಜಯಶ್ರೀ ಮೋಹನ್ ಗೌಡ ನಿರೂಪಿಸಿದ ಕಾರ್ಯಕ್ರಮದಲ್ಲಿ ಗ್ರಾಮ ಸಮಿತಿಯ ಕಾರ್ಯದರ್ಶಿ ಶೇಖರ ಗೌಡ ಕೊಲ್ಲಿಮಾರು ಸ್ವಾಗತಿಸಿ, ಯುವ ವೇದಿಕೆಯ ಕಾರ್ಯದರ್ಶಿ ಸುಖೇಶ್ ಗೌಡ ಅರಿಪಾದೆ ಧನ್ಯವಾದವಿತ್ತರು.

Related posts

ಬೆಳಾಲು ಶ್ರೀ ಧ.ಮಂ.ಪ್ರೌ. ಶಾಲೆಯಲ್ಲಿ ಕಾಷ್ಠಶಿಲ್ಪ ರಚನೆ ಮತ್ತು ಪ್ರಾತ್ಯಕ್ಷಿಕೆ ಕಾರ್ಯಾಗಾರ

Suddi Udaya

ಡಿ.8-12: ಧರ್ಮಸ್ಥಳ ಲಕ್ಷದೀಪೋತ್ಸವ: ಸರ್ವಧರ್ಮ ಸಮ್ಮೇಳನ ಮತ್ತು ಸಾಹಿತ್ಯ ಸಮ್ಮೇಳನ

Suddi Udaya

ಲಾಯಿಲ: ಕೊರಂ ಕೊರತೆಯಿಂದ ಮುಂದೂಡಲಾಗಿದ್ದ ಗ್ರಾ.ಪಂ. ಸಾಮಾನ್ಯ ಸಭೆಯು ನ.29 ರಂದು ಯಶಸ್ವಿ

Suddi Udaya

ಉಜಿರೆ ಮಹಾ ಶಕ್ತಿ ಕೇಂದ್ರದ ಯುವಮೋರ್ಚಾ ಸಂಚಾಲಕರಾಗಿ ಕಿರಣ್

Suddi Udaya

ಬೆಳಾಲು ಶ್ರೀ ಧ.ಮಂ.ಅ. ಪ್ರೌಢ ಶಾಲೆಯಲ್ಲಿ ವಾರ್ಷಿಕ ಪ್ರತಿಭಾ ದಿನಾಚರಣೆ

Suddi Udaya

ಧರ್ಮಸ್ಥಳ: ಅಕ್ರಮ ಕೂಟ ಸೇರಿ ಗಲಾಟೆ ಪ್ರಕರಣ6 ಜನರ ಬಂಧನ: ಜಮೀನು ಮಂಜೂರು

Suddi Udaya
error: Content is protected !!