32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ಅ.ಹಿ.ಪ್ರಾ. ಶಾಲೆಯಲ್ಲಿ ಪೋಷಕರ ಸಭೆ

ಧರ್ಮಸ್ಥಳ: ಪ್ರಧಾನ ಮಂತ್ರಿ ಪೋಷಣ್ ಶಕ್ತಿ ಯೋಜನೆಯ ಸಾಮಾಜಿಕ ಪರಿಶೋಧನಾ ಸಭೆಯ ಪ್ರಯುಕ್ತ ಪೋಷಕರ ಸಭೆಯು ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ತೋಟಗಾರಿಕಾ ಇಲಾಖೆಯ ಹಿರಿಯ ನಿರ್ದೇಶಕರಾದ ಚಂದ್ರಶೇಖರ್ ಇವರು ವಹಿಸಿ ಸರಕಾರದಿಂದ ವಿದ್ಯಾರ್ಥಿಗಳಿಗೆ ದೊರೆಯುವ ಸವಲತ್ತುಗಳನ್ನು ಪಡೆಯುವುದು ಹಾಗೂ ಇದು ಸರಿಯಾದ ರೀತಿಯಲ್ಲಿ ಮಕ್ಕಳಿಗೆ ಲಭಿಸುತ್ತದೆಯೇ ಎಂಬುದನ್ನು ಪೋಷಕರು ತಿಳಿದುಕೊಳ್ಳಬೇಕು ಎಂದು ಹೇಳಿದರು.

ಕಾರ್ಯಕ್ರಮದ ವ್ಯವಸ್ಥಾಪಕ ರಾಜೀವ ಸಾಲಿಯಾನ್ ಇವರು ಪ್ರಾಸ್ತಾವಿಕ ನುಡಿಗಳನ್ನಾಡಿದರು. ಪೋಷಕರು ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದರು.
ವೇದಿಕೆಯಲ್ಲಿ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಅಧ್ಯಕ್ಷ ರಾಜೇಶ್, ಅಕ್ಷರದಾಸೋಹ ಸಹಾಯಕ ನಿರ್ದೇಶಕರಾದ ರಾಜೇಂದ್ರ, ಶಾಲಾ ಮುಖ್ಯ ಶಿಕ್ಷಕರಾದ ಕಮಲ್ ತೇಜು ರಜಪೂತ್, ಪ್ರಾಥಮಿಕ ಆರೋಗ್ಯ ಇಲಾಖಾ ಹಿರಿಯ ಅಧಿಕಾರಿ
ಶ್ರೀಮತಿ ವಿಜಯಲಕ್ಷ್ಮೀ, ಗ್ರಾಮ ಪಂಚಾಯತ್ ಸದಸ್ಯರಾದ ಶ್ರೀಮತಿ ವಸಂತಿ, ಅಡುಗೆ ಸಿಬ್ಬಂದಿ ಶ್ರೀಮತಿ ವಿಜಯಲಕ್ಷ್ಮೀ ಉಪಸ್ಥಿತರಿದ್ದರು.


ಶಿಕ್ಷಕಜೋಸೆಫ್ ಸ್ವಾಗತಿಸಿ ಶಿಕ್ಷಕಿ ಶ್ರೀಮತಿ ನಿಖಿಲಾ ವಂದಿಸಿದರು. ಶಿಕ್ಷಕಿ ಶೋಭಾ ಕಾರ್ಯಕ್ರಮ ನಿರ್ವಹಿಸಿದರು.

Related posts

ಗುರುವಾಯನಕೆರೆ ವಿಕಾಸ ವಿವಿಧೋದ್ದೇಶ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ರೂ.189 ಕೋಟಿ ವಾರ್ಷಿಕ ವ್ಯವಹಾರ,ರೂ.23 ಲಕ್ಷ ನಿವ್ವಳ ಲಾಭ, ಸದಸ್ಯರಿಗೆ ಶೇ. 14 ಡಿವಿಡೆಂಟ್

Suddi Udaya

ತಾಲೂಕು ಭಜನಾ ಪರಿಷತ್ ನ ಲಾಯಿಲ ವಲಯದ ಭಜನಾ ಮಂಡಳಿಗಳ ಪದಾದಿಕಾರಿಗಳ ಸಭೆ

Suddi Udaya

ಗ್ರಾಮೀಣ ಮಹಿಳೆಯರ ಆರೋಗ್ಯ ರಕ್ಷಣೆಗಾಗಿ ಉಚಿತ ವೈದ್ಯಕೀಯ ತಪಾಸಣಾ ಶಿಬಿರ: ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಉಚಿತ ಸ್ತ್ರೀರೋಗ ಮತ್ತು ಬಂಜೆತನ ತಪಾಸಣೆ

Suddi Udaya

ಪಡಂಗಡಿ: ಪಾದಚಾರಿಗೆ ಕಾರು ಡಿಕ್ಕಿ : ಚಿಕಿತ್ಸೆ ಫಲಕಾರಿಯಾಗದೆ ಸಾವು

Suddi Udaya

ರಾಜಕೇಸರಿ ಟ್ರಸ್ಟ್ ನಿಂದ ಸವಣಾಲು ಸ.ಹಿ.ಪ್ರಾ.ಶಾಲಾ ಮಕ್ಕಳಿಗೆ ಉಚಿತ ಬ್ಯಾಗ್ ,ಪೆನ್ ವಿತರಣೆ

Suddi Udaya

ಶ್ರೀ ಧ.ಮಂ ಪ.ಪೂ ಕಾಲೇಜು – ಸಂಸ್ಕೃತ ಅಂತರಾಧ್ಯಯನ ವೃತ್ತದ ಸಂಯೋಜಕರಾಗಿ ಅಂಜಲಿ ಹಾಗೂ ಪ್ರೀತಮ್ ಮೆನೇಜಸ್ ಆಯ್ಕೆ

Suddi Udaya
error: Content is protected !!