25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಪಂಚ ಗ್ಯಾರಂಟಿ ಯೋಜನೆಯ ತಾಲೂಕು ಮಟ್ಟದ ಅನುಷ್ಟಾನ ಸಮಿತಿ ಸಭೆ

ಬೆಳ್ತಂಗಡಿ: ಪಂಚ ಗ್ಯಾರಂಟಿ ಯೋಜನೆಯ ತಾಲೂಕು ಮಟ್ಟದ ಅನುಷ್ಟಾನ ಸಮಿತಿ ಸಭೆಯು ಸಮಿತಿಯ ಅಧ್ಯಕ್ಷ ಪದ್ಮನಾಭ ಸಾಲ್ಯಾನ್ ರವರ ಅಧ್ಯಕ್ಷತೆಯಲ್ಲಿ ಪಂಚ ಗ್ಯಾರಂಟಿ ಯೋಜನೆ ಸದಸ್ಯ ಕಾರ್ಯದರ್ಶಿ ಹಾಗೂ ಕಾರ್ಯನಿರ್ವಹಣಾಧಿಕಾರಿಯವರಾದ ಭವಾನಿಶಂಕರ್ ಎನ್. ಇವರ ಉಪಸ್ಥಿತಿಯಲ್ಲಿ ಬೆಳ್ತಂಗಡಿ ತಾಲೂಕು ಪಂಚಾಯತಿಯ ಗ್ಯಾರಂಟಿ ಅನುಷ್ಟಾನ ಸಮಿತಿ ಕಛೇರಿಯಲ್ಲಿ ನಡೆಯಿತು.


ಮೆಸ್ಕಾಂ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಆಹಾರ ಇಲಾಖೆ, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಮತ್ತು ಉದ್ಯೋಗ ವಿನಿಮಯ ಕಛೇರಿಗಳ ಮೂಲಕ ಗೃಹಜ್ಯೋತಿ, ಗೃಹಲಕ್ಷ್ಮೀ, ಅನ್ನಭಾಗ್ಯ, ಶಕ್ತಿ ಹಾಗೂ ಯುವನಿಧಿ ಯೋಜನೆಗಳಲ್ಲಿ ಸರ್ಕಾರದಿಂದ ಬಿಡುಗಡೆಯಾದ ಅನುದಾನ ಮತ್ತು ಸವಲತ್ತು ಪಡೆದ ಫಲಾನುಭವಿಗಳ ಸಂಖ್ಯೆಯನ್ನು ಪರಿಶೀಲಿಸಲಾಯಿತು.

ಸರ್ಕಾರದ ಪಂಚಯೋಜನೆಗಳ ಸವಲತ್ತುಗಳನ್ನು ಪಡೆಯಲು ಬಾಕಿ ಇರುವ ಫಲಾನುಭವಿಗಳ ಅರ್ಜಿಗಳನ್ನು ವಿಲೇವಾರಿಗೊಳಿಸುವ ಕುರಿತು ಚರ್ಚಿಸಲಾಯಿತು. ಗೃಹಜ್ಯೋತಿ ಯೋಜನೆಯಡಿ ಉಜಿರೆ ಉಪವಿಭಾಗದಲ್ಲಿ 2025ರ ನವೆಂಬರ್ ತಿಂಗಳಲ್ಲಿ 27132 ಕುಟುಂಬಗಳಿಗೆ 1,36,32,737/- ರೂ, ಬೆಳ್ತಂಗಡಿ ಉಪವಿಭಾಗದಲ್ಲಿ 2025ರ ನವೆಂಬರ್ ತಿಂಗಳಲ್ಲಿ 44888 ಕುಟುಂಬಗಳಿಗೆ 2,64,64,884.93/-ರೂ ಸಹಾಯಧನ ದೊರತಿದ್ದು ತಾಲೂಕಿಗೆ ಈವರೆಗೆ 104,76,26,728.74/- ರೂ ಸಹಾಯಧನ ದೊರೆತಿರುವುದಾಗಿ ಅಧಿಕಾರಿಗಳು ತಿಳಿಸಿದರು.
ಗೃಹಲಕ್ಷ್ಮೀ ಯೋಜನೆಯಡಿ ಪ್ರಕೃತ 58854 ಫಲಾನುಭವಿಗಳಿದ್ದು, ಆಗಸ್ಟ್-2023 ರಿಂದ ಈವರೆಗೆ 2,50,72,72,000/-ರೂ ಸಹಾಯಧನ ದೊರೆತಿರುವುದಾಗಿ ಅಧಿಕಾರಿಗಳು ಮಾಹಿತಿ ನೀಡಿದರು.
ಅನ್ನ ಭಾಗ್ಯ ಯೋಜನೆಯಡಿ ಅಕ್ಟೋಬರ್ ತಿಂಗಳಲ್ಲಿ 45613 ಪಡಿತರ ಚೀಟಿದಾರರಿಗೆ ಪ್ರತೀ ಕೆ.ಜಿ.ಗೆ ರೂಪಾಯಿ 34.00 ರಂತೆ 55,49,55,540.00ರೂಗಳ ಅನುದಾನವು ಆಗಸ್ಟ್-2023 ರಿಂದ ಈವರೆಗೆ ತಾಲೂಕಿನ ಪಡಿತರ ಚೀಟಿದಾರರಿಗೆ ದೊರೆತಿರುವುದಾಗಿ ಅಧಿಕಾರಿಗಳು ಸಭೆಗೆ ವಿವರ ನೀಡಿದರು.

ಯುವನಿಧಿ ಯೋಜನೆಯಡಿ ಜಿಲ್ಲೆಯಲ್ಲಿ ಒಟ್ಟು 6892 ಫಲಾನುಭವಿಗಳಿದ್ದು, ಬೆಳ್ತಂಗಡಿ ತಾಲೂಕಿನ 883 ಅಭ್ಯರ್ಥಿಗಳಿಗೆ 2025ರ ಜುಲೈ ತಿಂಗಳಲ್ಲಿ 24,87,000.00ರೂ.ಗಳನ್ನು ಡಿ.ಬಿ.ಟಿ ಮೂಲಕ ಸಹಾಯಧನವನ್ನು ವಿತರಿಸಲಾಗಿದ್ದು, ಆಗಸ್ಟ್-2023 ರಿಂದ 2025ರ ಜುಲೈ ತಿಂಗಳವರೆಗೆ 2,14,59,000.00ರೂ.ಗಳನ್ನು ಸರ್ಕಾರದಿಂದ ಫಲಾನುಭವಿಗಳ ಖಾತೆಗೆ ಜಮಾ ಮಾಡಲಾಗಿದೆ.

ಶಕ್ತಿ ಯೋಜನೆಯಡಿ ಧರ್ಮಸ್ಥಳ ಘಟಕದ ಬಸ್ಸುಗಳ ಮೂಲಕ 2025ರ ನವೆಂಬರ್ ತಿಂಗಳಲ್ಲಿ 785013 ಮಹಿಳಾ ಪ್ರಯಾಣಿಕರು ಯೋಜನೆಯ ಸವಲತ್ತನ್ನು ಪಡೆದಿದ್ದು, ಜೂನ್-2023 ರಿಂದ ಈವರೆಗೆ 36414238 ಪ್ರಯಾಣಿಕರು ಪ್ರಯಾಣಿಸಿದ್ದು, 87,57,35,924/-ರೂ. ಬಿಡುಗಡೆಯಾಗಿರುವುದಾಗಿ ಇಲಾಖಾಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು.
ಸಭೆಯಲ್ಲಿ ಗ್ಯಾರಂಟಿ ಯೋಜನೆಗಳ ಜಿಲ್ಲಾ ಸಮಿತಿಯ ಸದಸ್ಯರಾದ ಶೇಖರ್ ಕುಕ್ಕೇಡಿ, ತಾಲೂಕು ಅನುಷ್ಟಾನ ಸಮಿತಿಯ ಸದಸ್ಯರಾದ ವಂದನಾ ಕುಮಾರಿ, ಸೌಮ್ಯ ಲಾಯಿಲ, ಮೆರಿಟಾ ಪಿಂಟೋ, ವಾಸುದೇವ ರಾವ್, ವಿಜಯಗೌಡ ಬೆಳಾಲು, ಕೇಶವ ನಾಯ್ಕ, ಶರೀಫ್ ಸಬರಬೈಲ್, ಕೆ.ನೇಮಿರಾಜ್ ಕಿಲ್ಲೂರು, ಸತೀಶ್ ಹೆಗ್ಡೆ ವೇಣೂರು, ಅಬ್ದುಲ್ ಸಲಾಂ, ಶ್ರಿಪತಿ ಉಪಾಧ್ಯಾಯ ಮತ್ತು ವೀರಪ್ಪ ಮೊಯ್ಲಿ ಹಾಗೂ ನೋಡೆಲ್ ಅಧಿಕಾರಿಯಾದ ಹೆರಾಲ್ಡ್ ಸ್ವಿಕ್ವೇರಾ ಉಪಸ್ಥಿತರಿದ್ದರು.

Related posts

ಮಾ.10: ಬಿಲ್ಲವರ ಮಹಾಮಂಡಲದ ರಜತ ಮಹೋತ್ಸವ: ಹುಣ್ಸೆಕಟ್ಟೆಯಲ್ಲಿ ಪೂರ್ವಭಾವಿ ಸಭೆ

Suddi Udaya

ಲಾಯಿಲ ಶ್ರೀ ರಾಘವೇಂದ್ರ ಮಠದ ಗೌರವ ಸಲಹೆಗಾರರಾಗಿ ಸುಮಂತ್ ಕುಮಾರ್ ಜೈನ್ ಆಯ್ಕೆ

Suddi Udaya

ಉಜಿರೆ ಗ್ರಾ.ಪಂ. ವ್ಯಾಪ್ತಿಯಲ್ಲಿ ಸ್ವಚ್ಛತಾ ಕಾರ್ಯ ಹಾಗೂ ಸ್ವಚ್ಛತಾ ಪ್ರತಿಜ್ಞಾ ವಿಧಿ ಸ್ವೀಕಾರ

Suddi Udaya

ಓಡಿಲ್ನಾಳ ಕಿರಾತ ಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ನಾಗರ ಪಂಚಮಿ ಪ್ರಯುಕ್ತ ನಾಗದೇವರಿಗೆ ತoಬಿಲ ಸೇವೆ

Suddi Udaya

ಉಜಿರೆ: ಎಸ್.ಡಿ.ಎಂ ಸ್ನಾತಕೋತ್ತರ ಕೇಂದ್ರದ ರಸಾಯನಶಾಸ್ತ್ರ ವಿಭಾಗದಿಂದ ಅಂತರಾಷ್ಟ್ರೀ ಯ ವಿಚಾರ ಸಂಕಿರಣ

Suddi Udaya

ರೇಷ್ಮೆರೋಡ್: ಬೃಹತ್ ಗಾತ್ರದ ಹೆಬ್ಬಾವು ಪತ್ತೆ: ಸುರಕ್ಷಿತವಾಗಿ ಹಿಡಿದು ಕಾಡಿಗೆ ಬಿಟ್ಟ ಸ್ನೇಕ್ ಅಶೋಕ್

Suddi Udaya
error: Content is protected !!