September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪಡಂದಡ್ಕ ವ್ಯಾಪ್ತಿಯಲ್ಲಿ ರಸ್ತೆ ಹಾಗೂ ಚರಂಡಿ ದುರಸ್ತಿಗೆ ಎಸ್.ಡಿ.ಪಿ.ಐ ಮನವಿ

ಬೆಳ್ತಂಗಡಿ : ಪಡಂದಡ್ಕ ವ್ಯಾಪ್ತಿಯ ಕಿರೋಡಿಯಿಂದ ಕಟ್ಟೆ ಬಳಿವರೆಗೆ ಇರುವ ರಸ್ತೆ ಸಂಪೂರ್ಣ ಹೊಂಡಗಳಿಂದ ತುಂಬಿಕೊಂಡು ಸಂಚಾರಕ್ಕೆ ಅಸಾಧ್ಯವಾಗಿದ್ದು ಹಲವು ವರ್ಷಗಳಿಂದ ವಿದ್ಯಾರ್ಥಿಗಳು, ಕೂಲಿ ಕಾರ್ಮಿಕರು ಹಾಗೂ ಸಾರ್ವಜನಿಕರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ಸಾರ್ವಜನಿಕರ ಸುರಕ್ಷತೆಗೆ ಆದಷ್ಟು ಬೇಗ ಚರಂಡಿ ವ್ಯವಸ್ಥೆ ಮಾಡಿ ರಸ್ತೆ ಅಗಲೀಕರಣ ಹಾಗೂ ಡಾಂಬರೀಕರಣ ಕೈಗೊಳ್ಳಬೇಕೆಂದು ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್, ಲೋಕೋಪಯೋಗಿ ಇಲಾಖೆ ಉಪ ವಿಭಾಗ ಬೆಳ್ತಂಗಡಿ ಇವರಿಗೆ ಮನವಿ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಎಸ್.ಡಿ.ಪಿ.ಐ ಪಡ್ಡಂದಡ್ಕ ಬ್ರಾಂಚ್ ಸಮಿತಿ ಅಧ್ಯಕ್ಷರು ಸಲ್ಮಾನ್ ಪಡ್ಡಂದಡ್ಕ, ಕೋಶಾಧಿಕಾರಿ ಇಮ್ತಿಯಾಜ್ ಹಾಗೂ ವೇಣೂರು ಬ್ಲಾಕ್ ಸಮಿತಿ ಸದಸ್ಯ ಜುನೈದ್ ಉಪಸ್ಥಿತರಿದ್ದರು.

Related posts

ಪೆರಾಡಿಯಲ್ಲಿ ಪುರುಷ ಕಟ್ಟುವ ಆಚರಣೆಯ ನೆಪದಲ್ಲಿ ಇಸ್ಲಾಂ ಧರ್ಮಕ್ಕೆ ಅವಹೇಳನ ಆರೋಪ : 17 ಮಂದಿ ಮೇಲೆ ಪ್ರಕರಣ ದಾಖಲು

Suddi Udaya

27 ನೇ ವರ್ಷದ ಭಜನಾ ಕಮ್ಮಟ: ಆಧ್ಯಾತ್ಮಿಕ ಕಮ್ಮಟಗಳು ಭಜನೆಗೆ ಮಾತ್ರವಲ್ಲ, ವ್ಯಕ್ತಿತ್ವ ನಿರ್ಮಾಣಕ್ಕೆ ಉತ್ತಮ ವೇದಿಕೆ:ಅನಿಲ್ ಕುಮಾರ್

Suddi Udaya

ಅಂಡಿಂಜೆ : ನೆಲ್ಲಿಂಗೇರಿ ಸ.ಕಿ.ಪ್ರಾ. ಶಾಲೆ ಮತ್ತು ಅಂಗನವಾಡಿ ಕೇಂದ್ರದಲ್ಲಿ ಶ್ರೀಮತಿ ಇಂದಿರಾ ಗಾಂಧಿಯವರ ಜನ್ಮದಿನಾಚರಣೆ

Suddi Udaya

ದ್ವಿತೀಯ ಪಿಯುಸಿ ಪರೀಕ್ಷೆ ವಾಣಿಜ್ಯ ವಿಭಾಗದಲ್ಲಿ ಸಾಧನೆಗೈದ ಜೋಶನ್‌ ರಫಾಯೆಲ್‌ ಡಿಸೋಜ ರಿಗೆ ಮಡಂತ್ಯಾರು ಸೇಕ್ರೆಡ್‌ ಹಾಟ್‌೯ ವಿದ್ಯಾಸಂಸ್ಥೆಯ ವತಿಯಿಂದ ಸನ್ಮಾನ

Suddi Udaya

ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ: ಸೇಕ್ರೆಡ್ ಹಾರ್ಟ್ ಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಬೆಳಾಲು ಅನಂತೇಶ್ವರ ಫ್ರೆಂಡ್ಸ್ ಅನಂತೋಡಿ ಕೆಸರುಗದ್ದೆ ಕ್ರೀಡಾಕೂಟದ ಸಮಾರೋಪ ಸಮಾರಂಭ

Suddi Udaya
error: Content is protected !!