September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಯುವವಾಹಿನಿ ಉಪ್ಪಿನಂಗಡಿ ಘಟಕದ ಅಧ್ಯಕ್ಷರಾಗಿ ಮನೋಜ್ ಎನ್ ಸಾಲ್ಯಾನ್ ಆಯ್ಕೆ

ಬೆಳ್ತಂಗಡಿ: ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿಯ ಪ್ರತಿಷ್ಠಿತ ಘಟಕಗಳಲ್ಲೊಂದಾದ ಯುವವಾಹಿನಿ ಉಪ್ಪಿನಂಗಡಿ ಘಟಕದ 2025-26 ನೇ ಸಾಲಿನ ಅವಧಿಗೆ ಅಧ್ಯಕ್ಷರಾಗಿ ಬಾರ್ಯ ನಿವಾಸಿ ಮನೋಜ್ ಎನ್ ಸಾಲ್ಯಾನ್ ಆಯ್ಕೆಯಾಗಿದ್ದಾರೆ.


ಇವರು ಬೆಂಗಳೂರಿನಲ್ಲಿ ತೈವಾನ್ ಮೂಲದ ಎಮ್.ಎನ್.ಸಿ ಕಂಪನಿಯಲ್ಲಿ ಉದ್ಯೋಗದಲ್ಲಿದ್ದುಕೊಂಡು, ಹಲವು ಸಂಘ, ಸಂಸ್ಥೆ,ಹಾಗೂ ಕೆಲವೊಂದು ಸಂಸ್ಥೆಗಳ ಸ್ಥಾಪಕ ಸದಸ್ಯರಾಗಿ ಧಾರ್ಮಿಕ ಹಾಗೂ ಶೈಕ್ಷಣಿಕವಾಗಿಯೂ ತಮ್ಮನ್ನು ತೊಡಗಿಸಿಕೊಂಡಿದ್ದಾರೆ.
ಯುವವಾಹಿನಿ ಉಪ್ಪಿನಂಗಡಿ ಘಟಕದಲ್ಲಿ ನಿರ್ದೇಶಕರಾಗಿ, ಕಾರ್ಯದರ್ಶಿಯಾಗಿ, ಕೋಶಾಧಿಕಾರಿಯಾಗಿ ಮತ್ತು ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ. ಯುವವಾಹಿನಿ(ರಿ.) ಕೇಂದ್ರ ಸಮಿತಿಯಲ್ಲಿ ನಾಮ ನಿರ್ದೇಶಿತ ಸದಸ್ಯರಾಗಿ, ವಿಶು ಕುಮಾರ್ ದತ್ತಿ ನಿಧಿಯ ಕೋಶಾಧಿಕಾರಿಯಾಗಿ, ವಿದ್ಯಾನಿಧಿ ಟ್ರಸ್ಟ್ ನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿರುವ ಅನುಭವ ಇವರದ್ದು.

ವಿದ್ವತ್ ಪಿ.ಯು ಕಾಲೇಜ್ ಗುರುವಾಯನಕೆರೆಯಲ್ಲಿ ಉಪನ್ಯಾಸಕಿಯಾಗಿರುವ ಪತ್ನಿ ಶ್ರೀಮತಿ ದಿವ್ಯಶ್ರೀ ಮತ್ತು ಮಗಳು ಬೇಬಿ ಆರವಿ ಯೊಂದಿಗೆ ಸುಖೀ ಜೀವನ ನಡೆಸುತ್ತಿದ್ದಾರೆ.

Related posts

ಕಡಿರುದ್ಯಾವರ ಗ್ರಾಮ ಪಂಚಾಯತಿನಲ್ಲಿ ನೂತನ ಗ್ರಂಥಾಲಯ ಉದ್ಘಾಟನೆ

Suddi Udaya

ಬಾರ್ಯ, ತೆಕ್ಕಾರು, ಪುತ್ತಿಲ ಬಿಜೆಪಿ ಶಕ್ತಿ ಕೇಂದ್ರ ಅಭ್ಯಾಸ ವರ್ಗ ಕಾರ್ಯಕ್ರಮ

Suddi Udaya

ಮರೋಡಿ: ಉಚ್ಚೂರು ಮನೆತನದ ಹಿರಿಯರಾದ ಗೋಪು ಪೂಜಾರಿ ನಿಧನ

Suddi Udaya

ಮಂಜೊಟ್ಟಿ: ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆ

Suddi Udaya

ಬಿಡದಿ ಟೌನ್‌ಶಿಪ್‌ಗಾಗಿ ರೈತರ ಭೂಮಿ ವಶಪಡಿಸಿಕೊಳ್ಳುವುದನ್ನು ವಿರೋಧಿಸಿ ಕಾಂಗ್ರೆಸ್‌ ಸರ್ಕಾರದ ವಿರುದ್ಧ ಪ್ರತಿಭಟನೆ- ಶಾಸಕ ಹರೀಶ್ ಪೂಂಜ ಭಾಗಿ

Suddi Udaya

ಕಲ್ಮಂಜ: ನಿಡಿಗಲ್ ಅಂಗನವಾಡಿಯಲ್ಲಿ ಪೋಷಣಾ ಅಭಿಯಾನ

Suddi Udaya
error: Content is protected !!