22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ : ಸುದೀಪ್ ಸಾಲ್ಯಾನ್’ಗೆ ಗೋಲ್ಡನ್ ಬುಕ್ ಆಫ್ ವರ್ಲ್ಡ್‌ ರೆಕಾರ್ಡ್ ಗರಿಮೆ

ಬೆಳ್ತಂಗಡಿ : ತಾಲೂಕು ಮಾತ್ರವಲ್ಲದೆ ಜಿಲ್ಲೆಯಾದ್ಯಂತ ಬಹಳಷ್ಟು ಖ್ಯಾತಿ ಪಡೆದಿರುವ “ಸಾಲ್ಯಾನ್ ಎಲ್ ಇಡಿ” ಇಂದು ಗೋಲ್ಡನ್ ಬುಕ್ ಆಫ್ ವರ್ಲ್ಡ್‌ ರೆಕಾರ್ಡ್ ಪ್ರಮಾಣಪತ್ರವನ್ನು ತನ್ನದಾಗಿಸಿಕೊಂಡಿದೆ. ಮಂಗಳೂರಿನಲ್ಲಿ ನಡೆದ ದಿ| ಕಿಶೋರ್‌ಕುಮಾರ್‌ಹಾಡುಗಳ ಗಾಯನ ದಾಖಲೆ, 100 ಗಾಯಕರು, ನಿರಂತರ 40 ಗಂಟೆಗಳ ಕಾಲ ಕರೋಕೆ ಸ್ವರೂಪದ ಗಾಯನ ಸ್ಪರ್ಧೆಯಲ್ಲಿ ಸಾಲ್ಯಾನ್ ಎಲ್ ಇಡಿ ಮಾಲಕ ಸುದೀಪ್ ಅವರು ತಮ್ಮ ಎಲ್ ಇಡಿ ಪ್ರದರ್ಶನವನ್ನು ಮಾಡುವ ಮೂಲಕ ಈ ದಾಖಲೆಯ ಪಾಲು ಪಡೆದಿದ್ದಾರೆ. ಸುದೀಪ್ ಸಾಲ್ಯಾನ್ ರವರು ಧ್ವನಿ ನ್ಯೂಸ್ ಚಾನೆಲ್ ನ ಪ್ರಧಾನ ಸಂಪಾದಕರಾಗಿದ್ದಾರೆ.

ಮಂಗಳೂರು ಪುರಭವನದಲ್ಲಿ ನವೆಂಬರ್ 18 ಹಾಗೂ 19ರಂದು ನಡೆದ ಷೋಡಶಿ ಫೌಂಡೇಶನ್ ನೇತೃತ್ವದಲ್ಲಿ’ಗಾತಾ ರಹೇ ಮೇರಾ ದಿಲ್’ ಎಂಬ ಹೆಸರಿನಲ್ಲಿ ದಿ| ಕಿಶೋರ್ ಕುಮಾರ್ ಅವರು ಹಾಡಿದ ಹಾಡುಗಳನ್ನು ಬರೋಬ್ಬರಿ 100 ಗಾಯಕರು ನಿರಂತರ 40 ಗಂಟೆ ‘ಕರೋಕೆ’ ಸ್ವರೂಪದಲ್ಲಿ ಹಾಡುವ ಮೂಲಕ ವಿಶ್ವದಾಖಲೆಯ ಗೋಲ್ಡನ್ ಬುಕ್ ಆಫ್ ವರ್ಲ್ಡ್‌ನಲ್ಲಿ ಹೆಸರು ನಮೂದಿಸಿದ್ದಾರೆ. ಈ ವಿಶ್ವದಾಖಲೆಯಲ್ಲಿ ಸಾಲ್ಯಾನ್ ಎಲ್ ಇಡಿ ಉತ್ತಮವಾಗಿ ಕಾರ್ಯನಿರ್ವಹಿಸಿತ್ತು. ಇದೀಗ ಈ ಸಾಧನೆಗೆ ಸುದೀಪ್ ಸಾಲ್ಯಾನ್ ಅವರಿಗೆ ‘ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್’ ವತಿಯಿಂದ ಪದಕ, ಸರ್ಟಿಫಿಕೇಟ್ ನೀಡಿ ಗೌರವಿಸಲಾಗಿದೆ.

Related posts

ಲಾಯಿಲ: ಕುಂಟಿನಿ ಸರಕಾರಿ ಕಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ

Suddi Udaya

ಸುಹಾಸ್ ಶೆಟ್ಟಿ ಕೊಲೆ ಪ್ರಕರಣ: ಮತ್ತೆ ಮೂವರು ಆರೋಪಿಗಳನ್ನು ಬಂಧಿಸಿದ ಪೊಲೀಸರು

Suddi Udaya

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಅಷ್ಠಬಂಧ ಬ್ರಹ್ಮಕಲಶೋತ್ಸವ: ವಿಧಾನ ಪರಿಷತ್ ಶಾಸಕ ಪ್ರತಾಪ್ ಸಿಂಹ ನಾಯಕ್ ಭೇಟಿ

Suddi Udaya

ಮರೋಡಿ: ದೇರಾಜೆ ಬೆಟ್ಟ ಎಂಬಲ್ಲಿಗೆ ಹೋಗುವ ಸಂಪರ್ಕ ರಸ್ತೆ ಕುಸಿತ

Suddi Udaya

ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಅನುದಾನಿತ ಪ್ರೌಢಶಾಲೆಯಲ್ಲಿ “ಅಂತರಾಷ್ಟ್ರೀಯ ಯೋಗ ದಿನಾಚರಣೆ”

Suddi Udaya

ಅ.12: ಎಸ್.ಕೆ ಗೋಲ್ಡ್ ಸ್ಮಿತ್ಸ್ ಇಂಡಸ್ಟ್ರಿಯಲ್ ಕೋ-ಆಪರೇಟಿವ್ ಸೊಸೈಟಿಯ ವಜ್ರಮಹೋತ್ಸವ ಆಚರಣೆಯ ಪ್ರಯಕ್ತ ಗ್ರಾಹಕರ ಸಮಾವೇಶ ಮತ್ತು ವೈದ್ಯಕೀಯ ತಪಾಸಣಾ ಶಿಬಿರ

Suddi Udaya
error: Content is protected !!