ಉಜಿರೆ: ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆಯ ಸ್ಥಾಪಕಾಧ್ಯಕ್ಷ ಮಹೇಶ್ ಶೆಟ್ಟಿ ತಿಮರೋಡಿಯನ್ನು 16-12-2025 ರಿಂದ 16-09-2026 ರವರೆಗೆ ಗಡಿಪಾರು (10 ತಿಂಗಳು) ವರೆಗೆ ದಕ್ಷಿಣ ಕನ್ನಡ ಜಿಲ್ಲೆಯಿಂದ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ ಎರಡನೇ ಭಾರಿಗೆ ಹೈಕೋರ್ಟ್ ಆದೇಶದಂತೆ ಮೊದಲ ಗಡಿಪಾರು ಆದೇಶವನ್ನು ಮರು ಪರಿಶೀಲನೆ ಮಾಡಿ ಮತ್ತೆ ಡಿ.16 ರಂದು ಗಡಿಪಾರು ಮಾಡಿ ಪುತ್ತೂರು ಎ.ಸಿ.ಸ್ಟೆಲ್ಲಾ ವರ್ಗಿಸ್ ಆದೇಶ ಮಾಡಿದ್ದರು.
ಈ ಆದೇಶದ ಬೆನ್ನಲ್ಲೇ ಬೆಳ್ತಂಗಡಿ ಪೊಲೀಸರು ಮಹೇಶ್ ಶೆಟ್ಟಿ ತಿಮರೋಡಿ ಮನೆಗೆ ಗಡಿಪಾರು ಆದೇಶದ ಪ್ರತಿ ಜಾರಿ ಮಾಡಿ ಮಹೇಶ್ ಶೆಟ್ಟಿ ತಿಮರೋಡಿಯನ್ನು ದಕ್ಷಿಣ ಕನ್ನಡದಿಂದ ಗಡಿಪಾರು ಮಾಡಲು ಡಿ.18 ರಂದು ಬೆಳಗ್ಗೆ ತೆರಳಿದಾಗ ಪೊಲೀಸರು ಬರುವ ಸಂದರ್ಭದಲ್ಲಿ ಮಹೇಶ್ ಶೆಟ್ಟಿ ತಿಮರೋಡಿ ಇರಲಿಲ್ಲ ಎನ್ನಲಾಗಿದೆ. ಗಡಿಪಾರು ಆದೇಶವಾಗಿ ಮಹೇಶ್ ಶೆಟ್ಟಿ ತಿಮರೋಡಿ ಬಗ್ಗೆ ಬೆಳ್ತಂಗಡಿ ಪೊಲೀಸರು ಡಿ.18 ರಂದು ಸಂಜೆ ಉಜಿರೆ ಪೇಟೆಯಲ್ಲಿ ಸಾರ್ವಜನಿಕ ಪ್ರಕಟಣೆಯನ್ನು ಮೈಕ್ ಮೂಲಕ ಜನರಿಗೆ ಮಾಹಿತಿ ನೀಡಿದ್ದಾರೆ.











