23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ರಾಷ್ಟ್ರಮಟ್ಟದ ಪುರುಷರ ಯೋಗಾಸನ ಸ್ಪರ್ಧೆಗೆ ಉಜಿರೆಯ ಎಸ್‌ಡಿಎಂ ವಿದ್ಯಾರ್ಥಿಗಳ ಆಯ್ಕೆ

ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ (ಎಸ್‌ಡಿಎಂ) ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನಗಳ ಮಹಾವಿದ್ಯಾಲಯದ ವೈದ್ಯಕೀಯ ವಿದ್ಯಾರ್ಥಿಗಳು ರಾಷ್ಟ್ರಮಟ್ಟದ ಪುರುಷರ ಯೋಗಾಸನ ಸ್ಪರ್ಧೆಯಲ್ಲಿ ಭಾಗವಹಿಸುತ್ತಿದ್ದಾರೆ. ಈ ಸ್ಪರ್ಧೆ ಡಿ,. 18ರಿಂದ 22ರವರೆಗೆ ಚೆನ್ನೈನ ವೇಲ್ಸ್ ವಿಶ್ವವಿದ್ಯಾಲಯದಲ್ಲಿ ನಡೆಯಲಿದೆ.

ಈ ರಾಷ್ಟ್ರಮಟ್ಟದ ಸ್ಪರ್ಧೆಯಲ್ಲಿ ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸುತ್ತಿರುವ ಹಿನ್ನೆಲೆಯಲ್ಲಿ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಡಾ. ಪ್ರಶಾಂತ್ ಶೆಟ್ಟಿ, ಉಪಪ್ರಾಂಶುಪಾಲರಾದ ಡಾ. ಸುಜಾತಾ ಕೆ.ಜೆ. ಹಾಗೂ ಯೋಗ ವಿಭಾಗದ ಡೀನ್ ಮತ್ತು ಶಾಂತಿವನದ ಮುಖ್ಯ ವೈದ್ಯಾಧಿಕಾರಿ ಡಾ. ಶಿವಪ್ರಸಾದ್ ಶೆಟ್ಟಿ ಅವರು ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿ ಶುಭ ಹಾರೈಸಿದರು.

ತಂಡದ ತರಬೇತುದಾರರಾಗಿ ಯೋಗ ವಿಭಾಗದ ಉದಯ ಸುಬ್ರಹ್ಮಣ್ಯ ಹಾಗೂ ತಂಡದ ವ್ಯವಸ್ಥಾಪಕರಾಗಿ ದೈಹಿಕ ಶಿಕ್ಷಣ ನಿರ್ದೇಶಕರಾದ ಧರ್ಮೇಂದ್ರ ಕುಮಾರ್ ಭಾಗವಹಿಸುತ್ತಿದ್ದಾರೆ.

ಸ್ಪರ್ಧೆಯಲ್ಲಿ ಎಸ್‌ಡಿಎಂ ಬಿಎನ್‌ವೈಎಸ್ ಕಾಲೇಜಿನ ವಿದ್ಯಾರ್ಥಿಗಳಾದ ಡಾ. ಸ್ವಪ್ನಿಲ್, ಡಾ. ವಿಶ್ವಾಸ್, ಅಕ್ಷಯ್ ಕುಮಾರ್, ಮಾರ್ಕನ್, ಸ್ವರೂಪ್ ಹಾಗೂ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ಮಹಾವಿದ್ಯಾಲಯದ ವಿದ್ಯಾರ್ಥಿಗಳು ಭಾಗವಹಿಸುತ್ತಿದ್ದಾರೆ.

ಇದಲ್ಲದೆ, ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ಮಹಾವಿದ್ಯಾಲಯ, ಬೆಂಗಳೂರು ಇದರ ಉಪಕುಲಪತಿಗಳಾದ ಡಾ. ಭಗವಾನ್ ಅವರು ರಾಷ್ಟ್ರೀಯ ಯೋಗ ತಂಡವನ್ನು ಸನ್ಮಾನಿಸಿದರು.

Related posts

ಉಜಿರೆ ಶ್ರೀ ಮಂಜುನಾಥ ಡ್ರೈವಿಂಗ್ ಸ್ಕೂಲ್ ಮಾಲಕ ಬಾಲಕೃಷ್ಣ ಶೆಣೈ ಹೃದಯಾಘಾತದಿಂದ ನಿಧನ

Suddi Udaya

ಜೆಸಿಐ ಕೊಕ್ಕಡ ಕಪಿಲ ಘಟಕದ ವತಿಯಿಂದ ಎಸ್.ಎಸ್.ಎಲ್.ಸಿ ಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ ಅನರ್ಘ್ಯ ರಿಗೆ ಸನ್ಮಾನ

Suddi Udaya

ನೀರಚಿಲುಮೆ ನರ್ಸರಿಯ ಮಣ್ಣಿನ ಅಡಿಯಲ್ಲಿ ಬಿಳಿ ಬಣ್ಣದ ಉದ್ದನೆಯ 28 ಮೊಟ್ಟೆಗಳು ಪತ್ತೆ

Suddi Udaya

ಗುರುವಾಯನಕೆರೆ ಎಕ್ಸೆಲ್ ಕಾಲೇಜಿನ ವಿಧ್ಯಾರ್ಥಿಗಳಿಂದ ಅದ್ವಿತೀಯ ಸಾಧನೆ: 593 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್ ನಲ್ಲಿ ಉತ್ತೀರ್ಣ, ವಿವಿಧ ವಿಷಯಗಳಲ್ಲಿ ನೂರಕ್ಕೆ ನೂರರಷ್ಟು ಅಂಕಗಳನ್ನು ಪಡೆದುಕೊಂಡು ಸಾಧನೆ: ಸಾಧಕ ವಿದ್ಯಾರ್ಥಿಗಳನ್ನು ಅಭಿನಂದಿಸಿದ ಕಾಲೇಜಿನ ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್

Suddi Udaya

ಮುಂಡಾಜೆ: ದಾಮೋದರ ಗೌಡ ನಿಧನ

Suddi Udaya

ಇಂದಬೆಟ್ಟು ಗ್ರಾ.ಪಂ. ನಲ್ಲಿ ವಿಕಲಚೇತನರ ವಿಶೇಷ ಸಮನ್ವಯ ಗ್ರಾಮ ಸಭೆ

Suddi Udaya
error: Content is protected !!