38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಡಿ.20: ಕರಾಯದಲ್ಲಿ ಹೆಣ್ಣು ಕರುಗಳ ಪ್ರದರ್ಶನ

ಕರಾಯ: ಕರ್ನಾಟಕ ಸಹಕಾರ ಹಾಲು ಉತ್ಪಾದಕರ ಮಹಾ ಮಂಡಳಿ, ಬೆಂಗಳೂರು ಮತ್ತು ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ, ಮಂಗಳೂರು ಇವುಗಳ ಸಂಯುಕ್ತ ಆಶ್ರಯದಲ್ಲಿ ದ.ಕ. ಜಿಲ್ಲಾ ಮಟ್ಟದ ಹೆಣ್ಣು ಕರುಗಳ ಪ್ರದರ್ಶನ ಡಿ.20 ರಂದು ಶ್ರೀ ಮಹಾಲಿಂಗೇಶ್ವರ ದೇವರ ಗದ್ದೆ, ಕರಾಯದಲ್ಲಿ ನಡೆಯಲಿದೆ.

ಬೆಳಿಗ್ಗೆ ನೋಂದಣಿ, ಉಪಹಾರ, ಹೆಣ್ಣು ಕರುಗಳ ಪ್ರದರ್ಶನ ಉದ್ಘಾಟನೆ, ಹೈನುಗಾರಿಕೆ ಮಾಹಿತಿ, ಕರುಗಳ ಮೌಲ್ಯಮಾಪನ, ಫಲಿತಾಂಶ ಮತ್ತು ಬಹುಮಾನ ವಿತರಣೆ ಕಾರ್ಯಕ್ರಮ ನಡೆಯಲಿದೆ. ಜೆರ್ಸಿ, ಹೆಚ್.ಎಫ್., ಇತರ ತಳಿಗಳು ಮತ್ತು ಎಮ್ಮೆ ಕರುಗಳ ವಿಭಾಗಗಳಲ್ಲಿ ಮತ್ತು 0-4, 5-8 ಹಾಗೂ 9-12 ತಿಂಗಳ ವಯೋ ಗುಂಪುಗಳಲ್ಲಿ ಪ್ರದರ್ಶನ ಮತ್ತು ಸ್ಪರ್ಧೆ ನಡೆಯಲಿದೆ.

ಒಕ್ಕೂಟದ ಪಶುವೈದ್ಯರು ಪ್ರದರ್ಶನದಲ್ಲಿ ಭಾಗವಹಿಸಲಿರುವ ಕರುಗಳ ಆಯ್ಕೆ ಮತ್ತು ನೋಂದಣಿಯನ್ನು ಮುಂಚಿತವಾಗಿಯೇ ನಡೆಸಲಿದ್ದಾರೆ. ಅಧ್ಯಕ್ಷತೆಯನ್ನು ದ.ಕ. ಹಾಲು ಒಕ್ಕೂಟ ಅಧ್ಯಕ್ಷ ರವಿರಾಜ್ ಹೆಗ್ಡೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಶಾಸಕ ಹರೀಶ್ ಪೂಂಜ, ತಣ್ಣೀರುಪಂತ ಗ್ರಾ.ಪಂ. ಅಧ್ಯಕ್ಷೆ ಹೇಮಾವತಿ ಚಂದ್ರಶೇಖರ್, ದ.ಕ ಹಾಲು ಒಕ್ಕೂಟದ ಉಪಾಧ್ಯಕ್ಷ ಉದಯ ಎಸ್. ಕೋಟ್ಯಾನ್, (ಪ.ಸಂ.) ಕ.ಹಾ.ಮ. ಬೆಂಗಳೂರು ನಿರ್ದೇಶಕ ಡಾ. ಬಸವರಾಜ್, ಶ್ರೀ ಕ್ಷೇ.ಧ.ಗ್ರಾ. ಯೋಜನೆ ಬಿ.ಸಿ. ಟ್ರಸ್ಟ್ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅನಿಲ್ ಕುಮಾರ್ ಎಸ್.ಎಸ್. ಹಾಗೂ ದ.ಕ ಒಕ್ಕೂಟದ ಎಲ್ಲಾ ನಿರ್ದೇಶಕರು ಭಾಗವಹಿಸಲಿದ್ದಾರೆ.

Related posts

ಮುಂಡಾಜೆ : ಸುಷ್ಮಾ ಪಟವರ್ಧನ್ ನಿಧನ

Suddi Udaya

ಜೆಸಿಐ ಮಡಂತ್ಯಾರು ವಿಜಯ 2024 ರ ಶಾಶ್ವತ ಯೋಜನೆಗಳ ಆನಾವರಣ

Suddi Udaya

ಬೆಳ್ತಂಗಡಿ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ರೈತ ದಿನಾಚರಣೆ

Suddi Udaya

ಬಿಜೆಪಿ ಬೆಳ್ತಂಗಡಿ ಮಂಡಲದ ಪದಾಧಿಕಾರಿಗಳು ಮತ್ತು ಸದಸ್ಯರಿಂದ ಅಯೋಧ್ಯೆ ಯಾತ್ರೆ

Suddi Udaya

ಡಾ. ಡಿ. ವೀರೇಂದ್ರ ಹೆಗ್ಗಡೆ ಅವರ ಪಟ್ಟಾಭಿಷೇಕದ ಅಂಗವಾಗಿ ಉಜಿರೆ ಎಸ್‌ಡಿಎಂ ಇಂಜಿನಿಯರಿಂಗ್‌ಕಾಲೇಜಿನಲ್ಲಿ ಸರಣಿ ಕಾರ್ಯಕ್ರಮಗಳು

Suddi Udaya

ನೆರಿಯ ಬಾಂಜಾರುವಿನಲ್ಲಿ “ಉಚಿತ ಆರೋಗ್ಯ ತಪಾಸಣಾ ಮತ್ತು ಚಿಕಿತ್ಸಾ ಶಿಬಿರ”

Suddi Udaya
error: Content is protected !!