24.1 C
ಪುತ್ತೂರು, ಬೆಳ್ತಂಗಡಿ
September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಡಿ.21: ನಾರಾವಿಯಲ್ಲಿ ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರ

ನಾರಾವಿ: ನಾರಾವಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ, ನಾರಾವಿ ಹಾಲು ಉತ್ಪಾದಕರ ಸಹಕಾರಿ ಸಂಘ, ಕುತ್ಲೂರು ಹಾಲು ಉತ್ಪಾದಕರ ಸಹಕಾರಿ ಸಂಘ, ಸುಲ್ಕೇರಿ ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘ, ಅಂಡಿಂಜೆ ಹಾಲು ಉತ್ಪಾದಕರ ಸಹಕಾರಿ ಸಂಘ ಮತ್ತು ಸಾವ್ಯ ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘ ಇದರ ಆಶ್ರಯದಲ್ಲಿ ಜಸ್ಟಿಸ್ ಕೆ.ಎಸ್. ಹೆಗ್ಡೆ ಚಾರಿಟೇಬಲ್ ಆಸ್ಪತ್ರೆ ದೇರಳಕಟ್ಟೆ ಇವರ ಜಂಟಿ ಸಹಯೋಗದೊಂದಿಗೆ ತಜ್ಞ ವೈದ್ಯರಿಂದ ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರ ಡಿ. 21 ರಂದು ನಾರಾವಿ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜರುಗಲಿರುವುದು.

ಶಾಸಕ ಹರೀಶ್ ಪೂಂಜ ಕಾರ್ಯಕ್ರಮ ಉದ್ಘಾಟಿಸುವರು. ನಾರಾವಿ ಪ್ಯಾಕ್ಸ್ ಅಧ್ಯಕ್ಷ ಎನ್. ಸುಧಾಕರ ಭಂಡಾರಿ ಅಧ್ಯಕ್ಷತೆ ವಹಿಸುವರು. ನಾರಾವಿ ಗ್ರಾ.ಪಂ.ಅಧ್ಯಕ್ಷ ರಾಜವರ್ಮ ಜೈನ್, ದೇರಳಕಟ್ಟೆ ಜಸ್ಟೀಸ್ ಕೆ.ಎಸ್. ಹೆಗ್ಡೆ ಚಾರಿಟೇಬಲ್ ಆಸ್ಪತ್ರೆಯ ಅರಿವಳಿಕೆ ಚಿಕಿತ್ಸಾ ವಿಭಾಗದ ಹಿರಿಯ ಪ್ರಾಧ್ಯಾಪಕ ಡಾ| ಶ್ರೀಪಾದ ಜಿ. ಮೆಹೆಂದಳೆ, ಹೊಸ್ಮಾರು ವಿಜಯಾ ಪಾಲಿಕ್ಲಿನಿಕ್ ಡಾ| ಪ್ರಸಾದ್ ಬಿ. ಶೆಟ್ಟಿ, ನಾರಾವಿ ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯ ಪ್ರಭಾಕರ ನಾರಾವಿ ಭಾಗವಹಿಸಲಿದ್ದಾರೆ.

Related posts

ಎ.ಬಿ.ಕೆ ಗಲ್ಫ್ ಕಮಿಟಿ ಕುದ್ರಡ್ಕ ವಾರ್ಷಿಕ ಮಹಾಸಭೆ ಹಾಗೂ “ಮೆಹ್ಫಿಲ್-ಈ-ಗಲ್ಫ್ ಮೀಟ್”

Suddi Udaya

ಸುಲ್ಕೇರಿಮೊಗ್ರುವಿನಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಮೊಸರು ಕುಡಿಕೆ ಉತ್ಸವ: ಕಂಬಳ ಕ್ಷೇತ್ರದಲ್ಲಿ ಸಾಧನೆಗೈದ ಕಿಂಗ್ ತಾಟೆ ಕೋಣಕ್ಕೆ ಸನ್ಮಾನ ಹಾಗೂ ಅಸಕ್ತರಿಗೆ ಅಕ್ಕಿ, ಧನಸಹಾಯ ವಿತರಣೆ

Suddi Udaya

ರೆಖ್ಯ: ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಕಾರು: 6 ಮಂದಿಗೆ ಗಂಭೀರ ಗಾಯ

Suddi Udaya

ಯಕ್ಷಯಾನ-2026: ಉಜಿರೆ ಎಸ್.ಡಿ.ಎಂ ಯಕ್ಷಗಾನ ಕಲಾಕೇಂದ್ರಕ್ಕೆ ಸಮಗ್ರ ದ್ವಿತೀಯ ತಂಡ ಪ್ರಶಸ್ತಿ

Suddi Udaya

ಪುಂಜಾಲಕಟ್ಟೆ ಯುವಕ ಸೈನೇಡ್ ಸೇವಿಸಿ ಆತ್ಮಹತ್ಯೆ

Suddi Udaya

ಟೀಮ್ ದೇವರಗುಡ್ಡೆ ವತಿಯಿಂದ ಪ್ರಾಥಮಿಕ ಆರೋಗ್ಯ ಮತ್ತು ಕ್ಷೇಮ ಕೇಂದ್ರದಲ್ಲಿ ಕೈತೋಟ ರಚನೆ

Suddi Udaya
error: Content is protected !!