ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಉಜಿರೆ ಇದರ ಶತಮಾನೋತ್ಸವ ಸಂಭ್ರಮದ ಉದ್ಘಾಟನೆಯನ್ನು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆ ಕಾರ್ಯದರ್ಶಿ ಡಿ.ಹರ್ಷೇಂದ್ರ ಕುಮಾರ್ ಅವರು ಡಿ.19 ರಂದು ದೀಪ ಪ್ರಜ್ವಲನೆ ಮಾಡುವ ಮೂಲಕ ಶುಭ ಕೋರಿದರು.

ಶಾಲಾ ಶತಮಾನೋತ್ಸವ ಸಮಿತಿ ಅಧ್ಯಕ್ಷ ಶರತ್ ಕೃಷ್ಣ ಪಡ್ವೆಟ್ನಾಯರವರು ಅಧ್ಯಕ್ಷತೆ ವಹಿಸಿ, ಪ್ರಾಸ್ತಾವಿಕ ಮಾತುಗಳೊಂದಿಗೆ ಸ್ವಾಗತಿಸಿದರು.

ವೇದಿಕೆಯಲ್ಲಿ ಉಜಿರೆ ಗ್ರಾಮ ಪಂಚಾಯತ್ ಅಧ್ಯಕ್ಷೆ ಉಷಾ ಕಿರಣ್ ಕಾರಂತ್, ಬೆಳ್ತಂಗಡಿ ಕ್ಷೇತ್ರ ಶಿಕ್ಷಣಾಧಿಕಾರಿ ತಾರಕೇಸರಿ, ಬಾಗಲಕೋಟೆ ವಿಶ್ವ ವಿದ್ಯಾನಿಲಯ ಕುಲಸಚಿವರಾದ ಡಾ.ಔದ್ರಮ, ಶ್ರೀ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆ ಕಾರ್ಯದರ್ಶಿ ಡಾ.ಸತೀಶ್ಚಂದ್ರ ಎಸ್, ಸಮಿತಿ ಪ್ರಧಾನ ಸಂಚಾಲಕ ಮೋಹನ್ ಕುಮಾರ್ ಲಕ್ಷ್ಮೀ ಇಂಡಸ್ಟ್ರೀಸ್ ಉಜಿರೆ, ಕಾರ್ಯದರ್ಶಿ ಅಬೂಬಕ್ಕರ್, ಕೋಶಾಧಿಕಾರಿ ಮೋಹನ್ ಶೆಟ್ಟಿಗಾರ್, ಕಾರ್ಯಕ್ರಮ ಸಂಯೋಜಕ ಬಿ.ಸೋಮಶೇಖರ ಶೆಟ್ಟಿ, ಶಾಲಾ ಮುಖ್ಯೋಪಾಧ್ಯಾಯರಾದ ಬಾಲಕೃಷ್ಣ ನಾಯ್ಕ ಪಿ,ಶಾಲಾ ಶಿಕ್ಷಕ- ರಕ್ಷಕ ಸಂಘದ ಅಧ್ಯಕ್ಷ ಅಬೂಬಕ್ಕರ್,ವಿದ್ಯಾರ್ಥಿ ನಾಯಕಿ ಶೆಝ ಫಾತಿಮಾ ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಹಲವಾರು ನಿವೃತ ಶಿಕ್ಷಕರನ್ನು ಸನ್ಮಾನಿಸಿ, ಗೌರವಿಸಲಾಯಿತು.
ಶಾಲಾ ವಿದ್ಯಾರ್ಥಿಗಳು ಪ್ರಾರ್ಥನೆ ಹಾಡಿದರು. ಶಿಕ್ಷಕಿ ನಿರೂಪಿಸಿದರು.











