23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ವಕೀಲರ ಸಂಘದ ನೂತನ ಅಧ್ಯಕ್ಷ ಅಲೋಷಿಯಸ್ ಎಸ್ ಲೋಬೋ ಮತ್ತು ತಂಡದ ಪದಗ್ರಹಣ ಸಮಾರಂಭ

ಬೆಳ್ತಂಗಡಿ:ಬೆಳ್ತಂಗಡಿ ವಕೀಲರ ಸಂಘದ ನೂತನ ಅಧ್ಯಕ್ಷ ಅಲೋಷಿಯಸ್ ಎಸ್ ಲೋಬೋ ಮತ್ತು ತಂಡದ ಪದಗ್ರಹಣ ಸಮಾರಂಭವು ಹೋಲಿ ರೇಡಿಮರ್ ಆಡಿಟೋರಿಯಂನಲ್ಲಿ ಡಿ 19ರಂದು ನಡೆಯಿತು.

ಪದಗ್ರಹಣ ಸಮಾರಂಭದ ಉದ್ಘಾಟನೆಯನ್ನು ಕರ್ನಾಟಕ ಸರಕಾರದ ಅಡ್ವಕೇಟ್ ಜನರಲ್ ಶಶಿಕಿರಣ್ ಶೆಟ್ಟಿ ಅವರು ದೀಪ ಪ್ರಜ್ವಲನೆ ಮಾಡುವ ಮೂಲಕ ನೆರವೇರಿಸಿದರು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬೆಳ್ತಂಗಡಿ ವಕೀಲರ ಸಂಘದ ಅಧ್ಯಕ್ಷರಾದ ಅಲೋಶಿಯಸ್ ಲೋಬೋ‌ ವಹಿಸಿದ್ದರು.

ಮುಖ್ಯ ಅತಿಥಿಗಳಾಗಿ ಮಂಗಳೂರಿನ ಜಿಲ್ಲಾ ನ್ಯಾಯಾಲಯದ ಸರಕಾರಿ ವಕೀಲರಾದ ಮೆಲ್ವಿನ್ ಪ್ರಕಾಶ್ ನೊರೋನ್ಹಾ, ಬೆಳ್ತಂಗಡಿ ನ್ಯಾಯಾಲಯದ ಪ್ರಿನ್ಸಿಪಾಲ್ ಸೀನಿಯರ್ ಸಿವಿಲ್ ಜಡ್ಜ್ ಮತ್ತು ಜೆ. ಎಮ್. ಎಫ್.ಸಿ ಮನು ಬಿ.ಕೆ,ಹೆಚ್ಚುವರಿ ಸಿವಿಲ್ ಜಡ್ಜ್ ಮತ್ತು ಜೆ.ಎಮ್.ಎಫ್.ಸಿ ನ್ಯಾಯಾಧೀಶರಾದ ವಿಜಯೇಂದ್ರ ಟಿ.ಹೆಚ್,ಬೆಳ್ತಂಗಡಿ ಬೆಸ್ಟ್ ಫೌಂಡೇಶನ್ ಅಧ್ಯಕ್ಷ ರಕ್ಷಿತ್ ಶಿವರಾಂ,ನಿಕಟ ಪೂರ್ವಾಧ್ಯಕ್ಷ ವಸಂತ ಮರಕಡ,ಉಪಾಧ್ಯಕ್ಷ ಶ್ರೀನಿವಾಸ್ ಗೌಡ,ಜತೆ ಕಾರ್ಯದರ್ಶಿ ಹರ್ಷಿತ್,ಕೋಶಾಧಿಕಾರಿ ಮುಮ್ತಾಜ್ ಬೇಗಂ,ಹಿರಿಯ ವಕೀಲರ ಸಮಿತಿ ಅಧ್ಯಕ್ಷ ಶಿವಕುಮಾರ್,ನಿಕಟಪೂರ್ವ ಕಾರ್ಯದರ್ಶಿ ನವೀನ್ ಬಿಕೆ ಉಪಸ್ಥಿತರಿದ್ದರು.ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ಎಂ ಅವರು ಸ್ವಾಗತಿಸಿದರು. ಹಿರಿಯ ನ್ಯಾಯವಾದಿ ಬಿ.ಕೆ ಧನಂಜಯ್ ರಾವ್,ವಕೀಲರಾದ ಕೃಷ್ಣ ಶೆಣೈ ನಿರೂಪಿಸಿದರು.

Related posts

ಸೌಜನ್ಯಾ ಅತ್ಯಾಚಾರ, ಕೊಲೆ ಪ್ರಕರಣ : ಸಿಬಿಐ ಮೇಲ್ಮನವಿ

Suddi Udaya

ಹಳ್ಳಿಂಗೇರಿ ಹಾ.ಉ. ಮಹಿಳಾ ಸಹಕಾರ ಸಂಘದ ಕಟ್ಟಡ ರಚನಾ ಸಮಿತಿ ರಚನೆ

Suddi Udaya

ಕಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವತಿಯಿಂದ ವಿ.ಪ. ಶಾಸಕ ಕಿಶೋರ್ ಕುಮಾರ್ ರವರಿಗೆ ಸನ್ಮಾನ

Suddi Udaya

ಗೇರುಕಟ್ಟೆ : ಕಾಂಗ್ರೆಸ್ ಪಕ್ಷದ ಕಳಿಯ ಪಂಚಾಯತ್ ಸಮಿತಿ ಅಧ್ಯಕ್ಷರಾಗಿ ಸತೀಶ್ ನಾಯ್ಕ್ ನಾಳ ಆಯ್ಕೆ. ವೀಕ್ಷಕರಾಗಿ ಪ್ರಮೋದ್ ಕುಮಾರ್ ಮಚ್ಚಿನ ಭಾಗಿ

Suddi Udaya

ಮೇಲಂತಬೆಟ್ಟು ಸಾರ್ವಜನಿಕ ಶ್ರೀ ಗಣೇಶೋತ್ಸವ ಸೇವಾ ಸಮಿತಿಯಿಂದ ಗಣೇಶೋತ್ಸವ ಆಚರಣೆ: ಶಾಸಕ ಹರೀಶ್ ಪೂಂಜ ಭಾಗಿ

Suddi Udaya

ಕಳಿಯ ನ್ಯಾಯತರ್ಪು ಗ್ರಾಮದಲ್ಲಿ ಶ್ರೀ ಕ್ಷೇತ್ರ ಗೆಜ್ಜೆಗಿರಿ ಜಾತ್ರೋತ್ಸವ ಸಮಾಲೋಚನಾ ಸಭೆ

Suddi Udaya
error: Content is protected !!