ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮುಂಡಾಜೆ ಗ್ರಾಮ ಪಂಚಾಯತ್ ನಲ್ಲಿ ಮಕ್ಕಳ ಗ್ರಾಮಸಭೆ

ಮುಂಡಾಜೆ ಗ್ರಾಮ ಪಂಚಾಯತ್ ನಲ್ಲಿ ಮಕ್ಕಳ ಗ್ರಾಮಸಭೆಯು ಗ್ರಾಮ ಪಂಚಾಯತ್ ಅಧ್ಯಕ್ಷ ಕೆ ಗಣೇಶ ಬಂಗೇರ ರವರ ಅಧ್ಯಕ್ಷತೆಯಲ್ಲಿ ನಡೆಯಿತು.


ವಿದ್ಯಾರ್ಥಿಗಳು ತಮ್ಮ ಶಾಲೆಯ ಇರುವ ಸಮಸ್ಯೆಗಳ ಬಗ್ಗೆ ಹಾಗೂ ಬೇಡಿಕೆಗಳ ಬಗ್ಗೆ ಚರ್ಚಿಸಿದರು.
ಮುಂಡಾಜೆ ಶಾಲೆಗೆ ಹೋಗುವ ರಸ್ತೆಯ ವ್ಯವಸ್ಥೆ, ಆವರಣ ಗೋಡೆ , ಶಿಕ್ಷಕರ ಕೊರತೆಯ ಬಗ್ಗೆ , ಶಾಲಾ ಕೊಠಡಿ, ಡೆಸ್ಕ್ ಬೆಂಚುಗಳ ಕೊರತೆ , ಹಾಗೂ ಕೊಂಬಿನಡ್ಕ ಶಾಲೆಯಲ್ಲಿ ಆಟದ ಮೈದಾನದ ಕೊರತೆ, ಮರದ ಗೆಲ್ಲುಗಳನ್ನು ಕಡಿಯುವುದು , ಬೀದಿನಾಯಿಗಳ ಉಪಟಳ , ಮೇಲ್ಚಾವಣಿ ಸೋರುವುದರ ಬಗ್ಗೆ ಮಾಹಿತಿ ನೀಡಿದರು.

ಮುಂಡಾಜೆ ಪ್ರಾಥಮಿಕ ಅರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಸುಶ್ರಾವ್ಯ ಮಕ್ಕಳಲ್ಲಿ ಆರೋಗ್ಯದ ಬಗ್ಗೆ ಮಾಹಿತಿ ನೀಡಿದರು. ಗ್ರಾಮ ಪಂಚಾಯತ್ ಗ್ರಂಥಾಲಯ ಮೇಲ್ವಿಚಾರಕಿ ಮಮತಾ ಇವರು ಗ್ರಂಥಾಲಯದಲ್ಲಿ ಮಕ್ಕಳಿಗಾಗಿ ಹಮ್ಮಿಕೊಳ್ಳುವ ಚಟುವಟಿಕೆಗಳ ಬಗ್ಗೆ ಮಾಹಿತಿ ನೀಡಿದರು. ಅಂಗನವಾಡಿ ಮೇಲ್ವಿಚಾರಕರಾದ ಸುಶೀಲ ಮಕ್ಕಳಲ್ಲಿ ಪೌಷ್ಟಿಕ ಆಹಾರದ ಬಗ್ಗೆ ಮಾಹಿತಿ ನೀಡಿದರು.

ಗ್ರಾಮ ಪಂಚಾಯತ್ ಸದಸ್ಯರು, ಕಾರ್ಯದರ್ಶಿ ನಾಗವೇಣಿ, ಶಾಲಾ ಶಿಕ್ಷಕರು, ಅಂಗನವಾಡಿ ಕಾರ್ಯಕರ್ತರು,. ಆಶಾ ಕಾರ್ಯಕರ್ತರು, ಸ್ಥಳೀಯ ಶಾಲೆಗಳ ಶಾಲಾ ನಾಯಕ ನಾಯಕಿಯರು, ಶಾಲಾ ವಿದ್ಯಾರ್ಥಿಗಳು, ಪಂಚಾಯತ್ ಸಿಬ್ಬಂದಿಗಳು ಉಪಸ್ಥಿತರಿದ್ದರು. ಪಂಚಾಯತ್ ಅಭಿವೃದ್ಧಿ ಅಧಿಕಾರಿ ಗಾಯತ್ರಿ ಪಿ ಸ್ವಾಗತಿಸಿ ವಂದಿಸಿದರು.

Related posts

ಡಿ.12: ಹಳೆ ಕಟ್ಟಡ ಕಲ್ಲೇರಿಯಲ್ಲಿ “ಕಲ್ಲೇರಿ ವೆಲ್‌ನೆಸ್ ಸೆಂಟರ್‌”ನ ಶುಭಾರಂಭ

Suddi Udaya

ರಹ್ಮಾನಿಯಾ ಜುಮ್ಮಾ ಮಸ್ಜಿದ್ ಹಾಗೂ ಕಾಜೂರು ಹಯಾತುಲ್ ಔಲಿಯಾ ದರ್ಗಾ ಶರೀಫ್ ನಲ್ಲಿ ಸಂಭ್ರಮದ ಈದುಲ್ ಫಿತ್ರ್ ಆಚರಣೆ

Suddi Udaya

ಬೆಳ್ತಂಗಡಿ ಬಿಜೆಪಿ ಪದಾಧಿಕಾರಿಗಳ ಪದಗ್ರಹಣ ಹಾಗೂ ಕಾರ್ಯಕರ್ತರ ಸಮಾವೇಶ

Suddi Udaya

ನಿವೃತ್ತ ಮುಖ್ಯೋಪಾಧ್ಯಾಯಿನಿ ಉಮಾ ಡಿ. ಗೌಡ ಹಟ್ಟತ್ತೋಡಿರವರಿಗೆ ಶಾಸಕ ಹರೀಶ್ ಪೂಂಜರಿಂದ ಸನ್ಮಾನ

Suddi Udaya

ವಿಟಿಯು ಅಂತರ್ ಕಾಲೇಜು ಕ್ರಿಕೆಟ್ ಟೂರ್ನಿ : ಉಜಿರೆಯ ಎಸ್.ಡಿ.ಎಂ ಗೆ ಪ್ರಶಸ್ತಿ

Suddi Udaya

ವಲಯ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ: ಉಜಿರೆ ಎಸ್ ಡಿ ಎಂ ಆಂಗ್ಲ ಮಾಧ್ಯಮ ರಾಜ್ಯ ಪಠ್ಯಕ್ರಮ ಶಾಲೆಯ ವಿದ್ಯಾರ್ಥಿಗಳಿಗೆ ಹಲವು ಪ್ರಶಸ್ತಿ

Suddi Udaya
error: Content is protected !!