September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಡಿ.24-25: ಬೆಳಾಲು ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನದ ವಾರ್ಷಿಕ ಜಾತ್ರೆ ಹಾಗೂ ಪರಿವಾರ ದೈವಗಳ ನರ್ತನ ಸೇವೆ

ಬೆಳಾಲು: ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನದ ವಾರ್ಷಿಕ ಜಾತ್ರೆ ಹಾಗೂ ಪರಿವಾರ ದೈವಗಳ ನರ್ತನ ಸೇವೆ ಡಿ.24ರಂದು ಮತ್ತು ಡಿ.25ರಂದು ಶ್ರೀ ಅನಂತಪದ್ಮನಾಭ ದೇವಸ್ಥಾನದ ಅನುವಂಶಿಕ ಮೊಕ್ತೇಸರರಾದ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ|| ಡಿ. ವೀರೇಂದ್ರ ಹೆಗ್ಗಡೆಯವರು ಹಾಗೂ ಡಾ|| ಹೇಮಾವತಿ ವೀ. ಹೆಗ್ಗಡೆಯವರ ಘನ ಉಪಸ್ಥಿತಿಯಲ್ಲಿ ಉಜಿರೆ ಶರತ್‌ಕೃಷ್ಣ ಪಡ್ವೆಟ್ನಾಯರ ಮಾರ್ಗದರ್ಶನದಲ್ಲಿ, ಬ್ರಹ್ಮಶ್ರೀ ವೇ| ಮೂ| ನೀಲೇಶ್ವರ ಮಾಧವ ತಂತ್ರಿಗಳ ಹಿರಿತನದಲ್ಲಿ, ಬ್ರಹ್ಮಶ್ರೀ ವೇ| ಮೂ| ನೀಲೇಶ್ವರ ಆಲಂಬಾಡಿ ಪದ್ಮನಾಭ ತಂತ್ರಿಗಳ ನೇತೃತ್ವದಲ್ಲಿ ವಾರ್ಷಿಕ ಜಾತ್ರೆ ಹಾಗೂ ಪರಿವಾರ ದೈವಗಳ ನರ್ತನ ಸೇವೆ ವಿವಿಧ ವೈದಿಕ, ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಜರುಗಲಿದೆ.

ಡಿ.24ರಂದು ಬೆಳಿಗ್ಗೆ ತಂತ್ರಿಗಳ ಆಗಮನ, ಸ್ವಾಗತ, ಶ್ರೀ ದೇವತಾ ಪ್ರಾರ್ಥನೆ, ಗಣಪತಿ ಹೋಮ, ತೋರಣ ಮುಹೂರ್ತ ಉಗ್ರಾಣ ಮುಹೂರ್ತ, ಹಸಿರುವಾಣಿ ಸಮರ್ಪಣೆ (ಊರ ಭಕ್ತಾದಿಗಳಿಂದ) ಬೆಳಾಲು ಪೇಟೆಯಿಂದ ಭವ್ಯ ಮೆರವಣಿಗೆಯೊಂದಿಗೆ ಭಜನಾ ಕಾರ್ಯಕ್ರಮ ಶ್ರೀ ಅನಂತಪದ್ಮನಾಭ ಮಹಿಳಾ ಕುಣಿತ ಭಜನಾ ತಂಡದವರಿಂದ ಶ್ರೀ ಅನಂತೇಶ್ವರ ಭಜನಾ ಮಂಡಳಿ, ಅನಂತೋಡಿ ಶ್ರೀ ದೇವರಿಗೆ ಪಂಚಾಮೃತ ಅಭಿಷೇಕ, ಪವಮಾನ ಕಲಶಾಭಿಷೇಕ, ಪ್ರಸನ್ನ ಪೂಜೆ ಶ್ರೀ ನಾಗದೇವರಿಗೆ ಕಲಶಾಭಿಷೇಕ, ತನು ತರ್ಪಣ, ಪರಿವಾರ ದೈವಗಳಿಗೆ ಕಲಶಾಭಿಷೇಕ, ಪರ್ವ ತಂಬಿಲ, ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ, ವಿಶೇಷ ಸೇವೆ : ಶ್ರೀ ಮಹಾವಿಷ್ಣು ಯಾಗ ಊರ ಋತ್ವಿಜರಿಂದ ಒಂದು ಮಂಡಲ (48 ಬಾರಿ) ವಿಷ್ಣು ಸಹಸ್ರನಾಮ ಪಾರಾಯಣ, ರಾತ್ರಿ ಪೂಜೆ ಹಾಗೂ ಶ್ರೀ ದೇವರಿಗೆ ರಂಗಪೂಜೆ, ಶ್ರೀ ದೇವರ ಬಲಿ ಹೊರಟು ಭೂತಬಲಿ ಉತ್ಸವ, ವಸಂತಕಟ್ಟೆ ಪೂಜೆ, ಮಹಾಪೂಜೆ, ಪ್ರಸಾದ ವಿತರಣೆ ಮತ್ತು ಸಾಯಿ ಶಕ್ತಿ ಕಲಾ ಬಳಗದಿಂದ ಜೋಡು ಜೀಟಿಗೆ ನಡೆಯಲಿದೆ.

ಡಿ.25ರಂದು ಬೆಳಿಗ್ಗೆ ಶ್ರೀ ಗಣಪತಿ ಹೋಮ, ಶ್ರೀ ದೇವರ ಬಲಿ ಹೊರಟು ಉತ್ಸವ, ದರ್ಶನ ಬಲಿ, ಊರವರಿಂದ ಬಟ್ಟಲು ಕಾಣಿಕೆ, ಸಿರಿಮುಡಿ ಗಂಧ-ಪ್ರಸಾದ ವಿತರಣೆ, ನವಕಲಶ ಪೂಜೆ, ನವಕ ಕಲಶಾಭಿಷೇಕ, ಮಹಾಪೂಜೆ, ಸಂಪ್ರೋಕ್ಷಣೆ, ಭಜನಾ ಕಾರ್ಯಕ್ರಮ ಶ್ರೀ ಅನಂತೇಶ್ವರ ಮಕ್ಕಳ ಕುಣಿತ ಭಜನಾ ತಂಡ, ಅನಂತೋಡಿ ಮಹಾಪೂಜೆ, ಮಂಗಲಮಂತ್ರಾಕ್ಷತೆ, ಪ್ರಸಾದ ವಿತರಣೆ, ಮಧ್ಯಾಹ್ನ ಅನ್ನಸಂತರ್ಪಣೆ, ಸಂಜೆ ಶ್ರೀ ದುರ್ಗಾಪೂಜೆ, ರಾತ್ರಿ ಪೂಜೆ, ಶ್ರೀ ಅನಂತಪದ್ಮನಾಭ ದೇವರಿಗೆ, ಪ್ರಸನ್ನ ರಂಗಪೂಜೆ, ಪ್ರಸಾದ ವಿತರಣೆ, ರಾತ್ರಿ ಸಭಾ ಕಾರ್ಯಕ್ರಮ ನಡೆಯಲಿದೆ.

ಧರ್ಮಸ್ಥಳದ ಧರ್ಮಾಧಿಕಾರಿ ಡಾ|| ಡಿ. ವೀರೇಂದ್ರ ಹೆಗ್ಗಡೆಯವರು ಗೌರವ ಉಪಸ್ಥಿತರಿರುವರು. ಧಾರ್ಮಿಕ ಭಾಷಣ ನಿವೃತ್ತ ಎಲ್.ಐ.ಸಿ. ಅಭಿವೃದ್ಧಿ ಅಧಿಕಾರಿ ರೋಹಿಣಿ ಶ್ರೀಪಾದ ಮಂಗಳೂರು ನೆರವೇರಿಸಲಿರುವರು. ಮುಖ್ಯ ಅತಿಥಿಗಳಾಗಿ ಹರೀಶ್ ಗೌಡ ಧರ್ಮದರ್ಶಿಗಳು ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಆರಿಕೋಡಿ, ಕಿರಣ್‌ಚಂದ್ರ ಡಿ. ಪುಷ್ಪಗಿರಿ ಧಾರ್ಮಿಕ ಮುಖಂಡರು, ಕೆ. ಮೋಹನ್ ಕುಮಾರ್, ಲಕ್ಷ್ಮೀ ಇಂಡಸ್ಟ್ರೀಸ್ ಕನಸಿನ ಮನೆ, ಉಜಿರೆ ಭಾಗವಹಿಸಲಿದ್ದಾರೆ. ರಾತ್ರಿ ಪರಿವಾರ ದೈವಗಳಾದ ಶ್ರೀ ರಕೇಶ್ವರೀ ಭೈರವ, ಕಲ್ಲುರ್ಟಿ, ಪಂಜುರ್ಲಿ ದೈವಗಳಿಗೆ ಸಿರಿಸಿಂಗಾರ ನರ್ತನ ಸೇವೆ ಹರಕೆ ಕಾಣಿಕೆ, ಪ್ರಸಾದ ವಿತರಣೆ ನಡೆಯಲಿದೆ ಎಂದು ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಶ್ರೀನಿವಾಸ್ ಗೌಡ ತಿಳಿಸಿದ್ದಾರೆ.

Related posts

ಸಮಾಜ ಕಾರ್ಯ ವಿಭಾಗದಿಂದ ಆರ್ಥಿಕ ಶಿಸ್ತು ಕುರಿತು ಸಂವಾದ ಕಾರ್ಯಕ್ರಮ

Suddi Udaya

ಮುಂಡಾಜೆ : ದಿ. ಮಹಾಬಲ ರೈ ಕಲ್ಲಹಿತ್ತಿಲು ಅವರ ಸ್ಮರಣಾರ್ಥ ಬಸ್ಸು ತಂಗುದಾಣ ಲೋಕಾರ್ಪಣೆ

Suddi Udaya

ಡಾ. ಡಿ. ವೀರೇಂದ್ರ ಹೆಗ್ಗಡೆ ಅವರ ಪಟ್ಟಾಭಿಷೇಕದ ಅಂಗವಾಗಿ ಉಜಿರೆ ಎಸ್‌ಡಿಎಂ ಇಂಜಿನಿಯರಿಂಗ್‌ಕಾಲೇಜಿನಲ್ಲಿ ಸರಣಿ ಕಾರ್ಯಕ್ರಮಗಳು

Suddi Udaya

ಫೆ.15: ನಾರಾವಿ ಶ್ರೀ ಸೂರ್ಯನಾರಾಯಣ ದೇವಸ್ಥಾನದ ಹೊರಾಂಗಣಕ್ಕೆ ನಾರಾವಿ ಶ್ರೀ ಅಯ್ಯಪ್ಪ ಸ್ವಾಮಿ ಸೇವಾ ಸಮಿತಿಯಿಂದ ರೂ.9 ಲಕ್ಷ ವೆಚ್ಚದಲ್ಲಿ ಹಾಸುಕಲ್ಲು ಸಮರ್ಪಣೆ

Suddi Udaya

ನಾಪತ್ತೆಯಾಗಿದ್ದ ಕೊಯ್ಯೂರು ನಿವಾಸಿ ಮುಹಮ್ಮದ್ ಯಾಸಿರ್ ಬೆಂಗಳೂರಿನಲ್ಲಿ ಪತ್ತೆ

Suddi Udaya

ಮುಂಡಾಜೆ : ಕುರುಡ್ಯ ಎಂಬಲ್ಲಿ ಗುಡ್ಡಕ್ಕೆ ಬೆಂಕಿ

Suddi Udaya
error: Content is protected !!