ಗ್ರಾಮಾಂತರ ಸುದ್ದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿರಾಜಕೀಯವರದಿ

ಶಿಕ್ಷಕರು ಮತ್ತು ಸರ್ಕಾರಿ ಶಾಲೆಗಳ ಸಮಸ್ಯೆಗಳ ಬಗ್ಗೆ ಅಧಿವೇಶನದಲ್ಲಿ ಗಮನ ಸೆಳೆದ ಶಾಸಕ ಹರೀಶ್ ಪೂಂಜ

ಬೆಳ್ತಂಗಡಿ: ಡಿ.18ರಂದು ನಡೆದ ವಿಧಾನಸಭೆಯ ಅಧಿವೇಶನದಲ್ಲಿ ರಾಜ್ಯದಲ್ಲಿ ಶಿಕ್ಷಕರು ಮತ್ತು ಸರ್ಕಾರಿ ಶಾಲೆಗಳು ಅನುಭವಿಸುತ್ತಿರುವ ಅನೇಕ ಸಮಸ್ಯೆಗಳ ಕುರಿತು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ, ಶಿಕ್ಷಣ ಸಚಿವರ ಹಾಗೂ ಸರ್ಕಾರದ ಗಮನ ಸೆಳೆದರು.

ಅತಿಥಿ ಶಿಕ್ಷಕರ ನೇಮಕಾತಿ ಹಾಗೂ ವೇತನದ ತಾರತಮ್ಯವನ್ನು ಸರಿಪಡಿಸಿ ವೇತನವನ್ನು ಪರಿಷ್ಕರಿಸಿ ಅತಿಥಿ ಉಪನ್ಯಾಸಕರಿಗೂ ಒಂದು ಉತ್ತಮ ವೇತನವನ್ನು ನಿಗದಿಪಡಿಸಬೇಕು. ಶಿಕ್ಷಕರನ್ನು ಪಠ್ಯೇತರ ಚಟುವಟಿಕೆಗಳಾದ ಬಿ.ಎಲ್.ಓ ಅಥವಾ ಇನ್ನಿತರ ಚಟುವಟಿಕೆಗಳಲ್ಲಿ ಕಡಿಮೆ ತೊಡಗಿಸಿಕೊಳ್ಳುವಂತೆ ಸರ್ಕಾರವನ್ನು ಒತ್ತಾಯಿಸಲಾಯಿತು.

ಮಕ್ಕಳಲ್ಲಿರುವ ಮೊಬೈಲ್ ಬಳಕೆ ಹವ್ಯಾಸವನ್ನು ಕಡಿಮೆಗೊಳಿಸುವ ಉದ್ದೇಶದಿಂದ ಮಕ್ಕಳಿಗೆ ಮೊಬೈಲ್ ಮೂಲಕ ಪಠ್ಯವನ್ನು ಬೋಧಿಸುವ ಯೋಜನೆಯನ್ನು ಕೈಬಿಡಬೇಕು. ನಲಿಕಲಿ ಶಿಕ್ಷಣ ವ್ಯವಸ್ಥೆಯಿಂದ ಗುಣಮಟ್ಟದ ಶಿಕ್ಷಣಕ್ಕೆ ತೊಂದರೆ ಉಂಟಾಗುತ್ತಿದ್ದು ಈ ಬಗ್ಗೆ ಸರ್ಕಾರ ಗಮನಹರಿಸಿ ನಲಿಕಲಿ ಯೋಜನೆಯನ್ನು ಕೈಬಿಡುವಂತೆಯೂ ಶಿಕ್ಷಣ ಸಚಿವರನ್ನು ಹಾಗೂ ಸರ್ಕಾರವನ್ನು ವಿನಂತಿಸಲಾಯಿತು.

ಬಹಳ ಮುಖ್ಯವಾಗಿ ಸರ್ಕಾರ ನೀಡುತ್ತಿರುವ ಮೊಟ್ಟೆ ಮತ್ತು ಬಾಳೆಹಣ್ಣಿನ ಅನುದಾನದಲ್ಲಿ ಕೊರತೆಯಾಗುತ್ತಿದ್ದು ಅದು ಶಿಕ್ಷಕರಿಗೆ ಮತ್ತು ಶಾಲಾ ಅಭಿವೃದ್ಧಿ ಸಮಿತಿಗೆ ಹೂರೆಯಾಗಿ ಪರಿಣಮಿಸಿದ್ದು ಮಕ್ಕಳಿಗೆ ಪೌಷ್ಟಿಕಾಂಶಯುಕ್ತ ಆಹಾರವನ್ನು ನೀಡುವ ಉದ್ದೇಶದಿಂದ ಮಾಡಲಾದ ಈ ಯೋಜನೆಗೆ ಹೆಚ್ಚಿನ ಅನುದಾನವನ್ನು ನೀಡುವಂತೆ ಸದನದಲ್ಲಿ ಸರ್ಕಾರವನ್ನು ಶಾಸಕ ಹರೀಶ್ ಪೂಂಜ ಒತ್ತಾಯಿಸಿದರು.

Related posts

ಧರ್ಮಸ್ಥಳದಲ್ಲಿ ಎಸ್.ಡಿ.ಎಮ್. ಸಂಸ್ಥೆಗಳ ಹಿರಿಯ ವಿದ್ಯಾರ್ಥಿಗಳ ಸಮಾವೇಶ

Suddi Udaya

ಗುಡ್ ಫ್ಯೂಚರ್ ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya

ಪೆರ್ಲ -ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದ ಪುನರ್ ಪ್ರತಿಷ್ಟಾಷ್ಠಬಂಧ ಬ್ರಹ್ಮಕಲಶೋತ್ಸವ ಧಾರ್ಮಿಕ ಸಭೆ

Suddi Udaya

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ಅಧ್ಯಕ್ಷರಾಗಿ ಲೆನ್ಸಿ ಪಿಂಟೊ, ಉಪಾಧ್ಯಕ್ಷರಾಗಿ ಫ್ರಾನ್ಸಿಸ್ ವಿ.ವಿ ಅವಿರೋಧ ಆಯ್ಕೆ

Suddi Udaya

ಡ್ರಾಯಿಂಗ್ ಗ್ರೇಡ್ ಪರೀಕ್ಷೆ: ಎಕ್ಸೆಲ್ ಟೆಕ್ನೊ ಸ್ಕೂಲ್ ವೇಣೂರಿಗೆ ಶೇ.100 ಫಲಿತಾಂಶ:ತೇರ್ಗಡೆಯಾದ ಎಲ್ಲಾ ವಿದ್ಯಾರ್ಥಿಗಳನ್ನು ಅಭಿನಂದಿಸಿದ ಸಂಸ್ಥೆಯ ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್ ಬಿ

Suddi Udaya

ಅಕ್ರಮ ಕಲ್ಲು ಗಣಿಗಾರಿಕೆ ಪ್ರಕರಣ : ಮೂವರ ವಿರುದ್ಧ ಪ್ರಕರಣ ದಾಖಲು

Suddi Udaya
error: Content is protected !!