25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪುದುವೆಟ್ಟು ಶ್ರೀ ಧ.ಮಂ. ಅ.ಹಿ.ಪ್ರಾ. ಶಾಲೆಯ ಪ್ರತಿಭಾ ದಿನಾಚರಣೆಯ ಅಂಗವಾಗಿ ಬಹುಮಾನ ವಿತರಣೆ

ಪುದುವೆಟ್ಟು : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಪುದುವೆಟ್ಟು ಇಲ್ಲಿ ವಾರ್ಷಿಕ ಪ್ರತಿಭಾ ದಿನಾಚರಣೆಯ ಅಂಗವಾಗಿ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣಾ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.

ಪುದುವೆಟ್ಟು ಗ್ರಾಮ ಪಂಚಾಯಿತಿ ಅಧ್ಯಕ್ಷ ಪೂರ್ಣಾಕ್ಷಾ ಅಧ್ಯಕ್ಷತೆ ವಹಿಸಿ ಮಾತನಾಡಿ ಶಾಲಾ ಹಂತದ ಮಕ್ಕಳಿಗೆ ತುಂಬಾ ಖುಷಿ ಕೊಡುವ ದಿನವೆಂದರೆ ಅದು ವಾರ್ಷಿಕ ಪ್ರತಿಭಾ ದಿನಾಚರಣೆ ಪ್ರತಿಬೆಗೆ ತಕ್ಕ ಪ್ರತಿಫಲ ಸಿಗುವ ರೀತಿಯಲ್ಲಿ ವಿದ್ಯಾರ್ಥಿಗಳು ಪ್ರಯತ್ನ ಪಡಬೇಕು ಎಂದು ತಿಳಿಸಿದರು.

ಮುಖ್ಯ ಅತಿಥಿಯಾಗಿ ಉಜಿರೆ ರತ್ನ ಮಾನಸದ ಪ್ರಧಾನ ಪಾಲಕ ಯತೀಶ್, ಮಾತನಾಡಿ ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ ಮೈಗೂಡಿಸಿಕೊಳ್ಳಬೇಕು ನಾಯಕತ್ವ ಎನ್ನುವುದು ವಿದ್ಯಾರ್ಥಿಗಳಿಗೆ ಮುಂದಿನ ದಿನಗಳಲ್ಲಿ ಬಹಳಷ್ಟು ಪ್ರಯೋಜನವಾಗುತ್ತದೆ, ಹಳ್ಳಿಯ ಮಕ್ಕಳು ಮುಗ್ಧ ಮನಸ್ಸಿನ ಮಕ್ಕಳು ಮಕ್ಕಳಲ್ಲಿ ಅಡಗಿರುವ ಪ್ರತಿಭೆ ಹೊರಬರಬೇಕಾದರೆ ಇಂತಹ ವೇದಿಕೆ ಉತ್ತಮ ರೀತಿಯಲ್ಲಿ ಅಳವಡಿಸಿಕೊಳ್ಳಬೇಕು ಎಂದು ತಿಳಿಸಿದರು.

ಸ್ಥಳೀಯ ಪ್ರಗತಿಪರ ಕೃಷಿಕ ಚಿತ್ತರಂಜನ್ ಜೈನ್, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಉಜಿರೆ ನಿವೃತ್ತ ಮುಖ್ಯೋಪಾಧ್ಯಾಯನಿಯಾರಾದ ಶ್ರೀಮತಿ ಶಶಿಕಲಾ, ಶ್ರೀಮತಿ ಜಯ ಭಾರತಿ, ಶಾಲೆಯ ಶಿಕ್ಷಕ- ರಕ್ಷಕ ಸಂಘದ ಅಧ್ಯಕ್ಷರಾದ ಶಶಿಧರ್ ಜಿ, ಉಪಸ್ಥಿತರಿದ್ದರು.

ಶಾಲಾ ಮುಖ್ಯ ಶಿಕ್ಷಕ ಶೀನಪ್ಪಗೌಡ ರವರು ಈ ವರ್ಷದ ಶೈಕ್ಷಣಿಕ ಚಟುವಟಿಕೆಗಳ ಬಗ್ಗೆ ಪ್ರಸ್ತಾವಿಕ ಮಾತುಗಳನ್ನು ನುಡಿದರು.
ಕಾರ್ಯಕ್ರಮದಲ್ಲಿ ಸಾಂಸ್ಕೃತಿಕ, ಕ್ರೀಡೆಗೆ ಸಂಬಂಧಿಸಿದ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ನೀಡಿ ಗೌರವಿಸಲಾಯಿತು. ಈ ಕಾರ್ಯಕ್ರಮವನ್ನು ಶಾಲಾ ಶಿಕ್ಷಕಿ ಶ್ರೀಮತಿ ಪುಷ್ಪಲತಾ, ಶ್ರೀಮತಿ ಶೀಲಾ, ಶ್ರೀಮತಿ ಯಶೋದ, ಕು ಜಿತೀಕ್ಷಾ ರವರು ನೆರವೇರಿಸಿ ಕೊಟ್ಟರು.
ಶಾಲಾ ಶಿಕ್ಷಕ ಪವನ್ ಕುಮಾರ್ ಸ್ವಾಗತಿಸಿ , ಶಾಲಾ ಶಿಕ್ಷಕಿಯಾದ ಶ್ರೀಮತಿ ತೇಜಾವತಿ ಧನ್ಯವಾದವಿತ್ತರು. ಶಾಲಾ ಶಿಕ್ಷಕ ನಿಶಾಂತ್ ಕುಮಾರ್ ನಿರೂಪಿಸಿದರು.

Related posts

ಹುಟ್ಟು ಹಬ್ಬದ ಸಂಭ್ರಮದಲ್ಲಿರುವ ಎಕ್ಸೆಲ್ ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರಿಗೆ ರೂ‌ 1.50 ಕೋಟಿ ಬೆಲೆಯ ಬಿಳಿ ಬಣ್ಣದ ಹೊಸ ಲ್ಯಾಂಡ್ ರೋವರ್ ಡಿಫೆಂಡರ್ ಕಾರು

Suddi Udaya

ಮಾಲಾಡಿ: ಶುದ್ಧ ಕುಡಿಯುವ ನೀರಿನ ಘಟಕ ಸರಿಯಾಗಿ ನಿರ್ವಹಣೆ ಮಾಡದೆ ಲಕ್ಷಾಂತರ ರೂ. ಬೆಲೆಬಾಳುವ ಮಿಷನರಿಗಳು ಕಳ್ಳರ ಪಾಲು : ಸಂಬಂಧಪಟ್ಟ ಇಲಾಖೆಯವರು ಗಮನಹರಿಸಿ ನೀರಿನ ಘಟಕವನ್ನು ಜನಸಾಮಾನ್ಯರಿಗೆ ಉಪಯೋಗ ಆಗುವ ರೀತಿಯಲ್ಲಿ ಮಾಡುವಂತೆ ಗ್ರಾಮಸ್ಥರ ಒತ್ತಾಯ

Suddi Udaya

ಇಂದಬೆಟ್ಟು: ಬೆಳ್ಳೂರು ಬೈಲಿನ ನೇತ್ರಾವತಿ ನದಿಯಲ್ಲಿ ಅಕ್ರಮ ಮರಳು ಗಣಿಗಾರಿಕೆ

Suddi Udaya

ಫೆ.23: ಕುತ್ಲೂರು ಶಿವಶಕ್ತಿ ಫ್ರೆಂಡ್ಸ್ ಕ್ಲಬ್ ನ ಸಂಯುಕ್ತ ಆಶ್ರಯದಲ್ಲಿ 12ನೇ ವರ್ಷದ ವಾರ್ಷಿಕೋತ್ಸವದ ಪ್ರಯುಕ್ತ ಮ್ಯಾಟ್‌ ಕಬಡ್ಡಿ ಪಂದ್ಯಾಟ ಹಾಗೂ ಬೃಹತ್ ಉಚಿತ ವೈದ್ಯಕೀಯ ತಪಾಸಣಾ ಶಿಬಿರ

Suddi Udaya

ಉರುವಾಲು ಹಲೇಜಿ ತನ್ನೋಜಿ ಶ್ರೀ ಮಹಾಲಿಂಗೇಶ್ವರ ದೇವರ ಪ್ರತಿಷ್ಠಾ ವಾರ್ಷಿಕೋತ್ಸವ

Suddi Udaya

ಮಿತ್ತಬಾಗಿಲು: ಪ್ರಗತಿಪರ ಕೃಷಿಕ ಕೃಷ್ಣಪ್ಪ ಗೌಡ ನಿಧನ

Suddi Udaya
error: Content is protected !!