32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಡಿ. 29 : ಹತ್ಯಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಕಟ್ಟಡ ಅರಸಿನಮಕ್ಕಿಯಲ್ಲಿ ಜನೌಷಧಿ ಕೇಂದ್ರ ಉದ್ಘಾಟನೆ

ಅರಸಿನಮಕ್ಕಿ: ಹತ್ಯಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಕಟ್ಟಡ ಅರಸಿನಮಕ್ಕಿಯಲ್ಲಿ ಪ್ರಧಾನ ಮಂತ್ರಿ ಭಾರತೀಯ ಜನೌಷಧಿ ಕೇಂದ್ರವು ಡಿ. 29ರಂದು ಶುಭಾರಂಭಗೊಳ್ಳಲಿದೆ.

ಕಾರ್ಯಕ್ರಮದ ಉದ್ಘಾಟನೆಯನ್ನು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ನೆರವೇರಿಸಲಿದ್ದಾರೆ.

ಇದು ಸಂಘದ ಆಡಳಿತ ಮಂಡಳಿಯ ಬಹುದಿನಗಳ ಕನಸಾಗಿದ್ದು ತನ್ನ ಚುನಾವಣಾ ಪ್ರಣಾಲಿಕೆಯಲ್ಲೂ ಜನೌಷಧಿ ಕೇಂದ್ರ ಸಂಘದ ಕಟ್ಟಡದಲ್ಲಿ ಸ್ಥಾಪಿಸುವುದಾಗಿ ಸಂಘದ ಅಧ್ಯಕ್ಷ ರಾಘವೇಂದ್ರ ನಾಯಕ್ ತಿಳಿಸಿದ್ದರು. ಅದರಂತೆ ಡಿ. 29 ರಂದು ಜನೌಷಧಿ ಕೇಂದ್ರ ಉದ್ಘಾಟನೆಗೊಳ್ಳಲಿದೆ. ದಕ್ಷಿಣ ಕನ್ನಡ ಲೋಕಸಭಾ ಸದಸ್ಯ ಬ್ರಿಜೇಶ್ ಚೌಟ, ಶಾಸಕ ಹರೀಶ್ ಪೂಂಜ, ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್, ಸಂಘದ ಉಪಾಧ್ಯಕ್ಷ ರಾಜು ಕೆ. ಸಾಲ್ಯಾನ್, ಮುಖ್ಯಕಾರ್ಯನಿರ್ವಾಹಣಾಧಿಕಾರಿ ರವಿಚಂದ್ರ ರಾವ್ ಅಂಗಡಿತೋಟ ಹಾಗೂ ಸಂಘದ ನಿರ್ದೇಶಕರು ಮತ್ತು ಸರ್ವ ಸದಸ್ಯರು, ಶಿಶಿಲ ಗ್ರಾ.ಪಂ. ಅಧ್ಯಕ್ಷ ಸುಧೀನ್ ಡಿ., ಅರಸಿನಮಕ್ಕಿ ಗ್ರಾ.ಪಂ. ಅಧ್ಯಕ್ಷೆ ಗಾಯತ್ರಿ, ಶಿಬಾಜೆ ಗ್ರಾ.ಪಂ. ಅಧ್ಯಕ್ಷೆ ರತ್ನಾ, ಪಂಚಾಯತ್ ನ ಉಪಾಧ್ಯಕ್ಷರುಗಳು, ಸದಸ್ಯರುಗಳು ಉಪಸ್ಥಿತರಿರಲಿದ್ದಾರೆ.

Related posts

ಉಜಿರೆ: “ಯಕ್ಷಸಿರಿ” ಪ್ರಶಸ್ತಿಗೆ ಆಯ್ಕೆಯಾದ ದಿವಾಕರ್ ದಾಸ್ ಕಾವಳಕಟ್ಟೆ ರವರಿಗೆ ಗೌರವಾರ್ಪಣೆ

Suddi Udaya

ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಹುಟ್ಟುಹಬ್ಬದ ಪ್ರಯುಕ್ತ ಗರ್ಡಾಡಿ ನಂದಿಬೆಟ್ಟ ದೇವಸ್ಥಾನದಲ್ಲಿ ವಿಶೇಷ ಪೂಜೆ

Suddi Udaya

ಬೆಳ್ತಂಗಡಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ವತಿಯಿಂದ ತಾಲೂಕು ಮಿನಿ ವಿಧಾನಸೌಧದ ಮುಂಭಾಗದಲ್ಲಿ ಪ್ರತಿಭಟನೆ

Suddi Udaya

ಮರೋಡಿ: ದೇರಾಜೆ ಬೆಟ್ಟ ಎಂಬಲ್ಲಿಗೆ ಹೋಗುವ ಸಂಪರ್ಕ ರಸ್ತೆ ಕುಸಿತ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ನೂತನವಾಗಿ ನಿರ್ಮಿಸಲಾದಕಲ್ಯಾಣ ಮಂಟಪಗಳ ಸಮುಚ್ಚಗಳ ಉದ್ಘಾಟನೆ

Suddi Udaya

ಧರ್ಮಸ್ಥಳ: ಯೂಟ್ಯೂಬರ್ಸ್‌ ಮೇಲೆ ಹಲ್ಲೆ ಪ್ರಕರಣ ಧರ್ಮಸ್ಥಳ ಪೊಲೀಸರಿಂದ ಓರ್ವನ ಬಂಧನ

Suddi Udaya
error: Content is protected !!