22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಚ್ಚಿನ ಗ್ರಾಮ ಪಂಚಾಯತ್ ಮಟ್ಟದ 25ನೇ ಜನಸ್ಪಂದನ ಸಭೆ: ನಾಡ ಕಚೇರಿಯ ಬೇಡಿಕೆ – ಚಿರತೆ ಕಾಟದಿಂದ ಜನರಲ್ಲಿ ಆತಂಕ

ಮಚ್ಚಿನ: ಜನರ ಬಳಿಗೆ ತಾಲೂಕು ಆಡಳಿತ ಎಂಬ ಶಾಸಕ ಹರೀಶ್ ಪೂಂಜರ ಪರಿಕಲ್ಪನೆಯ 25 ನೇ ಜನಸ್ಪಂದನ ಸಭೆ
ಮಚ್ಚಿನ ಗ್ರಾಮ ಪಂಚಾಯತ್ ಜನಸ್ಪಂದನ ಸಭೆ ಡಿ. 20 ರಂದು ಗ್ರಾಮ ಪಂಚಾಯತ್ ಸಮುದಾಯ ಭವನದಲ್ಲಿ ನಡೆಯಿತು.

ಶಾಸಕ ಹರೀಶ್ ಪೂಂಜ ಮಾತನಾಡಿ ತಾಲೂಕು ಮಟ್ಟದ ಅಧಿಕಾರಿಗಳು ಗ್ರಾಮ ಮಟ್ಟಕ್ಕೆ ಆಗಮಿಸಿ ಜನಸಾಮಾನ್ಯರ ಸಮಸ್ಯೆಗಳನ್ನು ಇತ್ಯರ್ಥಗೊಳಿಸುವ ಪ್ರಾಮಾಣಿಕ ಪ್ರಯತ್ನವನ್ನು ಜನಸ್ಪಂದನ ಮೂಲಕ ನಡೆಸಲಾಗುವುದು ಎಂದರು.

ಓಡಿಲ್ನಾಳ ಮತ್ತು ಮಚ್ಚಿನ ಗಡಿ ಗ್ರಾಮದಲ್ಲಿ ಬಿಎಸ್ ಎನ್ ಎಲ್ ಟವರ್ ನಿರ್ಮಾಣಕ್ಕೆ ಜಾಗ ಗುರುತಿಸಲಾಗಿದೆ ಆದರೆ ಆ ಸ್ಥಳಕ್ಕೆ ಅರಣ್ಯ ಇಲಾಖೆಯ ಆಕ್ಷೇಪಯಿದೆ ಎಂದು ಗ್ರಾಮಸ್ಥರು ಹೇಳಿದರು. ಸದ್ರಿ ಸ್ಥಳದ ಕುರಿತು ಅರಣ್ಯ ಇಲಾಖೆಯಿಂದ ನೀರಕ್ಷೇಪಣಾ ಪತ್ರ ಬರಬೇಕು ಎಂದು ಆರ್ ಎಫ್ ಓ ಮಾಹಿತಿ ನೀಡಿದರು.

ಗ್ರಾಮದ ಮಾಣೂರು ಪ್ರದೇಶದ ರಸ್ತೆಯನ್ನು ದುರಸ್ತಿಗೊಳಿಸಿ ಬೇಕು ಎಂದು ನಾಗರೀಕರು ಹೇಳಿದರು. ಕಳೆದ ಅವಧಿಯಲ್ಲಿ ಮಚ್ಚಿನ ಗ್ರಾಮ ವ್ಯಾಪ್ತಿಯಲ್ಲಿ 26 ಕೋಟಿ ರೂಪಾಯಿ ಅನುದಾನ ಬಿಡುಗಡೆಯಾಗಿದ್ದು ಆದರೆ ಪ್ರಸ್ತುತ ಸರ್ಕಾರದ ಅನುದಾನ ನೀಡದಿರುವುದಿಂದ ಅಭಿವೃದ್ಧಿಗೆ ಸಮಸ್ಯೆಯಾಗುತ್ತಿದೆ.
ಮಾಣೂರು ರಸ್ತೆಯ ಅಭಿವೃದ್ಧಿಗೆ ಶಾಸಕರ ನಿಧಿಯಿಂದ 10 ಲಕ್ಷ ರೂಪಾಯಿ ಅನುದಾನ ನೀಡಲಾಗುವುದು. ಬಂಗೇರಕಟ್ಟ – ನೆತ್ತರ ರಸ್ತೆ ದುರಸ್ತಿ ಕುರಿತು ಪ್ರಸ್ತಾವನೆ ಸಲ್ಲಿಸಲಾಗಿದ್ದು ಕಾಮಗಾರಿಗೆ ಅನುಮೋದನೆ ದೊರೆಯಬೇಕಾಗಿದೆ ಎಂದು ಶಾಸಕರು ತಿಳಿಸಿದರು.

ಕಳೆದ 9 ವರ್ಷಗಳ ಹಿಂದೆ ಮನೆ ನಿರ್ಮಾಣಕ್ಕೆ ನಿವೇಶನ ಹಂಚಿಕೆ ಮಾಡಿದೆ ಆದರೆ ಮನೆ ನಿರ್ಮಾಣಕ್ಕೆ ಸಮರ್ಪಕ ಸ್ಥಳ ದೊರೆಯುತ್ತಿಲ್ಲ ಎಂದು ಗ್ರಾಮಸ್ಥರು ಹೇಳಿದರು. ನಿವೇಶನ ಸಮಸ್ಯೆ ಕುರಿತು ತಹಶೀಲ್ದಾರ್ ಮತ್ತು ಇಓ ಸ್ಥಳ ಪರಿಶೀಲನೆ ನಡೆಸಬೇಕು ಎಂದು ಶಾಸಕರು ಸೂಚಿಸಿದರು.

ಓಡಿಲ್ನಾಳ ಕುವೆಟ್ಟು ಗ್ರಾಮದ ಗಡಿಭಾಗದಲ್ಲಿ ಜೆಜೆಎಂ ಕಾಮಗಾರಿ ಸಮರ್ಪಕವಾಗಿ ನಡೆದಿಲ್ಲ ಎಂದು ಗ್ರಾಮಸ್ಥರು ಹೇಳಿದಾಗ ಶಾಸಕರು ಸ್ಥಳ ಪರಿಶೀಲನೆ ನಡೆಸುವಂತೆ ಇಲಾಖಾಧಿಕಾರಿಗಳಿಗೆ ಸೂಚಿಸಿದರು.

ಮಚ್ಚಿನದಲ್ಲಿ ನಾಡ ಕಚೇರಿ ಆಗಲಿ ಇದರಿಂದ ರೈತರಿಗೆ ಅನುಕೂಲವಾಗಲಿದೆ ಎಂದು ಗ್ರಾಮಸ್ಥರು ಹೇಳಿದರು.
ಕಣಿಯೂರು ಹೋಬಳಿ ರಚನೆ ಕುರಿತು ಸರ್ಕಾರಕ್ಕೆ ಮನವಿ ಮಾಡಲಾಗಿದೆ. ಎಲ್ಲರಿಗೂ ಅನುಕೂಲವಾಗಲಿ ಎಂದು ಸೂಕ್ತ ಸ್ಥಳವನ್ನು ಆಯ್ದು ನಾಡ ಕಚೇರಿ ನಿರ್ಮಾಣ ಮಾಡಲಾಗುವುದು ಎಂದು ಶಾಸಕರು ತಿಳಿಸಿದರು.

ಶುದ್ಧ ಕುಡಿಯುವ ನೀರು ಘಟಕ ತುಕ್ಕು ಹಿಡಿದಿದೆ ಎಂದು ಗ್ರಾಮಸ್ಥರು ಹೇಳಿದಾಗ ಗ್ರಾಮ ಪಂಚಾಯತ್ ಇದನ್ನು ಹಸ್ತಾಂತರ ತೆಗೆದುಕೊಳ್ಳುವ ಕಾರ್ಯ ಮಾಡಿ ಎಂದು ಶಾಸಕರು ತಿಳಿಸಿದರು. ಚಿರತೆ ಕಾಟದಿಂದ ಗ್ರಾಮಸ್ಥರು ಭಯಭೀತರಾಗಿದ್ದಾರೆ ಎಂದು ಗ್ರಾಮಸ್ಥರು ಹೇಳಿದರು.

ಗ್ರಾ.ಪಂ.ಅಧ್ಯಕ್ಷೆ , ಉಪಾಧ್ಯಕ್ಷೆ ಸೋಮವಾತಿ, ತಹಶೀಲ್ದಾರ್ ಪ್ರಥ್ವಿ ಸಾನಿಕಂ, ತಾಲೂಕು ಪಂಚಾಯತ್
ಕಾರ್ಯನಿರ್ವಾಹಣಾಧಿಕಾರಿ ಭವಾನಿಶಂಕರ್ , ಪಂಚಾಯತ್ ಅಭಿವೃದ್ಧಿ ಅಧಿಕಾರಿ ಗೌರಿಶಂಕರ್, ಸದಸ್ಯರು ಇಲಾಖಾಧಿಕಾರಿಗಳು, ಗ್ರಾಮಸ್ಥರು ಉಪಸ್ಥಿತರಿದ್ದರು.

Related posts

ಗುರುವಾಯನಕೆರೆ: ಶ್ರೀ ವೇದವ್ಯಾಸ ಶಿಶುಮಂದಿರದ ಪುಟಾಣಿ ಮಕ್ಕಳಿಗೆ ಶಿಶು ಶಿಕ್ಷಣ ಪ್ರಮಾಣ ಪತ್ರ

Suddi Udaya

ಬೆಳ್ತಂಗಡಿ ತಾಲೂಕು ತಹಶೀಲ್ದಾರ್ ಆಗಿ ಎಸ್.ಎನ್. ನರಗುಂದ ನೇಮಕ

Suddi Udaya

ದಯಾ ವಿಶೇಷ ಶಾಲೆಯಲ್ಲಿ ಕೀರ್ತಿಶೇಷ ಕೆ. ವಸಂತ ಬಂಗೇರರ ಹುಟ್ಟುಹಬ್ಬ ಆಚರಣೆ

Suddi Udaya

ಪುಂಜಾಲಕಟ್ಟೆ ಕರ್ನಾಟಕ ಪಬ್ಲಿಕ್ ಸ್ಕೂಲ್ ನ ಪ್ರೌಢಶಾಲಾ ವಿಭಾಗದ ಶಿಕ್ಷಕರಿಗೆ ಸ್ವಾಗತ-ವಿದಾಯ

Suddi Udaya

ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಮಾಗಣೆ ಗೌಡ, ಊರ ಗೌಡ ಮತ್ತು ಒತ್ತು ಗೌಡರ ಸಮಾವೇಶ ಮತ್ತು ಸನ್ಮಾನ ಸಮಾರಂಭ

Suddi Udaya

ಕಡಿರುದ್ಯಾವರ ಜಿ. ಪಂ. ಹಿ. ಪ್ರಾ ಶಾಲಾ ಎಸ್.ಡಿ.ಎಮ್.ಸಿ ಹಾಗೂ ಪೋಷಕರ ಸಭೆ

Suddi Udaya
error: Content is protected !!