23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ : ಶ್ರೀ ಧ. ಮಂ. ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವೈದ್ಯಕೀಯ ಮಹಾವಿದ್ಯಾಲಯದಲ್ಲಿ ಲೈಂಗಿಕ ಕಿರುಕುಳ ತಡೆಗಟ್ಟುವಿಕೆ ಕುರಿತು ಜಾಗೃತಿ ಕಾರ್ಯಕ್ರಮ

ಉಜಿರೆ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವೈದ್ಯಕೀಯ ಮಹಾವಿದ್ಯಾಲಯ, ಉಜಿರೆ ಇದರ ಮಾತೃ ಶ್ರೀ ರತ್ನಮ್ಮ ಹೆಗ್ಗಡೆ ಸಭಾಂಗಣದಲ್ಲಿ ಡಿ. 19ರಂದು ಲೈಂಗಿಕ ಕಿರುಕುಳ ತಡೆಗಟ್ಟುವಿಕೆ ಕುರಿತು ಜಾಗೃತಿ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಆಗಮಿಸಿದ ಶ್ರೀಮತಿ ಮನೋರಮಾ ಭಟ್ ಅವರು, ಲೈಂಗಿಕ ಕಿರುಕುಳ ತಡೆಗಟ್ಟುವಲ್ಲಿ ಮಾನವ ಹಕ್ಕುಗಳ ಪಾತ್ರ, ಆಂತರಿಕ ದೂರು ಸಮಿತಿಯ ಮಹತ್ವ ಹಾಗೂ ಅದರ ಕಾರ್ಯನಿರ್ವಹಣೆಯ ಕುರಿತು ಸಮಗ್ರ ಮಾಹಿತಿ ನೀಡಿದರು. ಮಹಿಳೆಯರು ತಮ್ಮ ಹಕ್ಕುಗಳ ಬಗ್ಗೆ ಅರಿವು ಹೊಂದಿ ಧೈರ್ಯದಿಂದ ಅನ್ಯಾಯದ ವಿರುದ್ಧ ಧ್ವನಿ ಎತ್ತಬೇಕು ಎಂದು ತಿಳಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಉಪ ಪ್ರಾಂಶುಪಾಲರಾದ ಡಾ. ಸುಜಾತಾ ಕೆ.ಜೆ. ವಹಿಸಿ, ವಿಷಯದ ಕುರಿತು ಜಾಗೃತಿ ಮೂಡಿಸಿ, ಹೆಣ್ಣು ಮಕ್ಕಳು ಆತ್ಮವಿಶ್ವಾಸದಿಂದ ಸಮಾಜವನ್ನು ಎದುರಿಸುವಲ್ಲಿ ಪ್ರಬಲರಾಗಬೇಕೆಂದು ಪ್ರೋತ್ಸಾಹಿಸಿದರು.

ಶಾಂತಿವನ ಆಸ್ಪತ್ರೆಯ ಸ್ಥಾನಿಕ ವೈದ್ಯಾಧಿಕಾರಿ ಡಾ. ಬಿಂದು ಸ್ವಾಗತಿಸಿ, ಡಾ. ಮೇಘನಾ ವಂದನಾರ್ಪಣೆ ಸಲ್ಲಿಸಿದರು. ಕಾರ್ಯಕ್ರಮದಲ್ಲಿ ಕಾಲೇಜಿನ ವಿದ್ಯಾರ್ಥಿಗಳು, ಅಧ್ಯಾಪಕರು ಹಾಗೂ ಸಿಬ್ಬಂದಿಗಳು ಭಾಗವಹಿಸಿದ್ದರು.

Related posts

ಉಜಿರೆ ಎಸ್.ಡಿ.ಎಂ ಸ್ನಾತಕೋತ್ತರ ಕಾಲೇಜಿನ ಸಹಾಯಕ ಪ್ರಾಧ್ಯಾಪಕಿ ಅಶ್ವಿನಿ ಎಸ್. ಶೆಟ್ಟಿ ರವರಿಗೆ ಪಿಹೆಚ್ ಡಿ ಪದವಿ

Suddi Udaya

ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣ: ಸೌಜನ್ಯ ಮಾವ ವಿಠಲ್ ಗೌಡ ಪ್ರಕರಣದ ಆರೋಪಿ; ಸ್ಪೋಟಕ ತಿರುವು ನೀಡಿದ ಹೋರಾಟಗಾರ ಸ್ನೇಹಮಯಿ ಕೃಷ್ಣ

Suddi Udaya

ಕಡಿರುದ್ಯಾವರ ಜ್ಞಾನ ವಿಕಾಸ ಮಹಿಳಾ ಕಾರ್ಯಕ್ರಮದಡಿ ಹೊಲಿಗೆ ತರಬೇತಿ ಉದ್ಘಾಟನೆ

Suddi Udaya

ಕನ್ಯಾಡಿ ಸೇವಾಭಾರತಿಯಿಂದ 7 ಮಂದಿ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ಗಾಲಿಕುರ್ಚಿ ವಿತರಣೆ

Suddi Udaya

ಎಲ್. ಸಿ. ಆರ್ ಇಂಡಿಯನ್ ವಿದ್ಯಾಸಂಸ್ಥೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಸುಲ್ಕೇರಿ: ಅನುದಾನಿತ ಖಾಸಗಿ ಹಿ.ಪ್ರಾ. ಹಾಗೂ ಶ್ರೀರಾಮ ಪ್ರೌಢ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya
error: Content is protected !!