September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳ ಗ್ರಾಮ ಪಂಚಾಯತ್ ಸಾಮಾಜಿಕ ಪರಿಶೋಧನೆ ಪೂರ್ವಭಾವಿ ಸಭೆ

ಧರ್ಮಸ್ಥಳ ಗ್ರಾಮ ಪಂಚಾಯಿತಿನ 2024-25 ನೇ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಯೋಜನೆ ಹಾಗೂ 15 ನೇ ಹಣಕಾಸು ಯೋಜನೆ ಮತ್ತು ರಾಜ್ಯ ಹಣಕಾಸು ಆಯೋಗದ ಐದು ವರ್ಷದ ಕಾಮಗಾರಿಗಳ ಸಾಮಾಜಿಕ ಪರಿಶೋಧನೆ ಡಿ.20 ರಿಂದ ಡಿ.29 ರ ತನಕ ನಡೆಯಲಿದ್ದು ಈ ಬಗ್ಗೆ ಧರ್ಮಸ್ಥಳ ಗ್ರಾಮ್ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ವಿಮಲಾ ಇವರ ಆದ್ಯತೆಯಲ್ಲಿ ಪೂರ್ವಭಾವಿ ಸಭೆ ಧರ್ಮಸ್ಥಳ ಗ್ರಾಮ್ ಪಂಚಾಯತ್ ಸಭಾಂಗಣದಲ್ಲಿ ನಡೆಯಿತು.

ಸಾಮಾಜಿಕ ಪರಿಶೋಧನೆ ಸಂಪನ್ಮೂಲ ವ್ಯಕ್ತಿ ಶ್ರೀಮತಿ ಲೀಲಾವತಿಯವರು ಉದ್ದೇಶ ಹಾಗೂ ವಿವರಗಳನ್ನು ಸಭೆಗೆ ತಿಳಿಸಿದರು. ಡಿ. 29ರಂದು ಸಾಮಾಜಿಕ ಪರಿಶೋಧನೆ ಗ್ರಾಮ ಸಭೆ ನಡೆಯಲಿದೆ ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಧರ್ಮಸ್ಥಳ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಪಿ ಶ್ರೀನಿವಾಸ ರಾವ್, ಸಾಮಾಜಿಕ ಪರಿಶೋಧನೆ ಗ್ರಾಮ ಸಂಪನ್ಮೂಲ ಸಿಬ್ಬಂದಿಗಳಾದ ಸುಮಲತಾ, ಉಷಾಲತಾ, ವಿದ್ಯಾ ಶ್ರೀ, ಈಶ್ವರಿ, ಸುಚೇತನ. ಗ್ರಾಮ ಪಂಚಾಯಿತಿ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶ್ರೀಮತಿ ಗಾಯತ್ರಿ ಸಭೆಗೆ ಸ್ವಾಗತಿಸಿದರು. ಕಾರ್ಯದರ್ಶಿಯಾದ ಶ್ರೀಮತಿ ಪ್ರಮೀಳಾ ಧನ್ಯವಾದ ನೀಡಿದರು.

Related posts

ಉಜಿರೆಯಲ್ಲಿ “ಸ್ವಚ್ಛೋತ್ಸವ” ಬೃಹತ್ ಸ್ವಚ್ಛತಾ ಅಭಿಯಾನ

Suddi Udaya

ಉಜಿರೆ: ಮರ ಬಿದ್ದು ಗಂಭೀರ ಗಾಯಗೊಂಡ ಗಾಯಾಳುಗಳ ಆರೋಗ್ಯ ವಿಚಾರಿಸಿದ ಕೆ.ಪಿ.ಸಿಸಿ ಪ್ರದಾನ ಕಾರ್ಯದರ್ಶಿ ರಕ್ಷಿತ್ ಶಿವಾರಂ

Suddi Udaya

ಗುರಿಪಳ್ಳ ಜಯನಗರದಲ್ಲಿ ಬ್ರಹ್ಮಶ್ರೀ ಬಿಲ್ಲವ ಮಹಿಳಾ ಸ್ವ ಸಹಾಯ ಸಂಘ ಉದ್ಘಾಟನೆ

Suddi Udaya

ಬೊಳಿಯಾರು ಕಾಡಾನೆ ದಾಳಿಗೆ ರಿಕ್ಷಾ ನಜ್ಜುಗುಜ್ಜು: ಅದೃಷ್ಟಾವಶತ್ ಪಾರಾದ ಚಾಲಕ

Suddi Udaya

ಉಜಿರೆ ಶ್ರೀ ಧ.ಮಂ. ಎಜ್ಯುಕೇಶನಲ್ ಸೊಸೈಟಿಯಿಂದ 33 ಮಂದಿ ನಿವೃತ್ತ ಸಿಬ್ಬಂದಿಗಳಿಗೆ ಸನ್ಮಾನ ಮತ್ತು ಶಿಕ್ಷಕರಿಗೆ ತರಬೇತಿ ಕಾರ್ಯಕ್ರಮ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂ.ಮಾ. ಶಾಲೆಯಲ್ಲಿ ವಿದ್ಯಾರ್ಥಿಗಳ ಪೋಷಕರಿಗೆ ಮಾಹಿತಿ ಕಾರ್ಯಾಗಾರ

Suddi Udaya
error: Content is protected !!