September 6, 2026
Uncategorized

ಮುಂಡಾಜೆ: ಬಸ್ ಗೆ ಡಿಕ್ಕಿ ಹೊಡೆದು ಧರೆಗೆ ಗುದ್ದಿ ಪಲ್ಟಿಯಾದ ಕಾರು

ಮುಂಡಾಜೆ : ಚಾಲಕನ ನಿಯಂತ್ರಣ ತಪ್ಪಿದ ಕಾರು ಕೆಎಸ್ಸಾರ್ಟಿಸಿ ಬಸ್ ಗೆ ಡಿಕ್ಕಿ ಹೊಡೆದು, ಧರೆಗೆ ಗುದ್ದಿ ಪಲ್ಟಿಯಾದ ಘಟನೆ ಡಿ. 20ರಂದು ನಡೆದಿದೆ.

ಮಂಗಳೂರು- ವಿಲ್ಲುಪುರಂ ರಾಷ್ಟ್ರೀಯ ಹೆದ್ದಾರಿಯ ಮುಂಡಾಜೆ ಗ್ರಾಮದ ಸೀಟು ಎಂಬಲ್ಲಿ ಹಾಸನದಿಂದ ಮಂಗಳೂರಿನ ಕಡೆಗೆ ಪ್ರಯಾಣಿಸುತ್ತಿದ್ದ ಕಾರು ಏಕಾಏಕಿ ರಸ್ತೆಯ ಬಲಬದಿಗೆ ಚಲಿಸಿ, ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಧರ್ಮಸ್ಥಳದಿಂದ ಕುಕನೂರಿಗೆ ಸಂಚಾರ ನಡೆಸುವ ಕೆಎಸ್ಸಾರ್ಟಿಸಿ ಬಸ್ ನ ಎಡಬದಿಗೆ ಡಿಕ್ಕಿ ಹೊಡೆದು ಸುಮಾರು 50 ಮೀ.ದೂರದವರೆಗೆ ಹೋಗಿ ಧರೆಗೆ ಗುದ್ದಿ ಉರುಳಿ ಬಿದಿದ್ದೆ. ಅಪಘಾತದ ತೀವ್ರತೆಗೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಮೂವರು ಪವಾಡ ಸದೃಶವಾಗಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕಾರಿನ ಪ್ರಯಾಣಿಕರಿಗೆ ಗಾಯಗಳಾಗಿದ್ದು ಅವರನ್ನು ಉಜಿರೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾರಿನಲ್ಲಿ ಸಿಲುಕಿದ್ದ ಮೂವರನ್ನು ಸ್ಥಳೀಯರು ಹೊರತೆಗೆದು ಆಸ್ಪತ್ರೆಗೆ ದಾಖಲಿಸಿದರು.
ಸ್ಥಳಕ್ಕೆ ಬೆಳ್ತಂಗಡಿ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ಬಸ್ ಪ್ರಯಾಣಿಕರನ್ನು ಆ ಮಾರ್ಗದಲ್ಲಿ ಸಂಚರಿಸುತ್ತಿದ್ದ ಇತರ ಬಸ್ ಗಳಲ್ಲಿ ಕಳುಹಿಸಿಕೊಡಲಾಯಿತು.

Related posts

ಮಸೀದಿ ಬಳಿ ನಿಲ್ಲಿಸಿದ್ದ ಧರ್ಮಗುರುಗಳ ಬೈಕ್ ಕಳವು : ಕಳ್ಳತನ ಕೃತ್ಯ ಸಿಸಿ ಕ್ಯಾಮರದಲ್ಲಿ ಸೆರೆ

Suddi Udaya

ಕನ್ಯಾಡಿ: ಬೈಕ್ – ಬಸ್ಸು ನಡುವೆ ಅಪಘಾತ: ಬೈಕ್ ಸವಾರ ಗಂಭೀರ ಗಾಯ

Suddi Udaya

ಕುವೆಟ್ಟು ಗ್ರಾ.ಪಂ ಸಹಯೋಗದಲ್ಲಿ ಕಣ್ಣಿನ ಉಚಿತ ತಪಾಸಣ ಶಿಬಿರ ಉದ್ಘಾಟನೆ

Suddi Udaya

ಬೆಳ್ತಂಗಡಿ ವಿಜಯಾ ಕ್ರೇಡಿಟ್ ಕೋ ಆಪರೇಟಿವ್ ಸೊಸೈಟಿದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಬ್ಯಾಂಕ್ ನಿಂದ ಸಾಧನ ಪ್ರಶಸ್ತಿ

Suddi Udaya

ಸಿವಿಲ್ ನ್ಯಾಯಾಧೀಶರಾಗಿ ಆಯ್ಕೆಯಾದ ಮಂಜುನಾಥ್ ರವರಿಗೆ ಮೇಲಂತಬೆಟ್ಟು ಭಗವತಿ ಕ್ಷೇತ್ರದಲ್ಲಿ ಗೌರವಾರ್ಪಣೆ

Suddi Udaya

ಬೆಳ್ತಂಗಡಿ ಧರ್ಮ ಪ್ರಾಂತ್ಯದಲ್ಲಿ ಗರಿಗಳ ಹಬ್ಬ

Suddi Udaya
error: Content is protected !!