32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಎಸ್ ಡಿ ಎಂ ಆಂ.ಮಾ. ಶಾಲೆಯಲ್ಲಿ ತಾಲೂಕು ಮಟ್ಟದ ಪ್ರಾರಂಭಿಕ ತರಬೇತಿ ಶಿಬಿರ ಹಾಗೂ ಪುನಶ್ಚೇತನ ತರಬೇತಿ ಶಿಬಿರ

ಬೆಳ್ತಂಗಡಿ: ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ,ದಕ್ಷಿಣ ಕನ್ನಡ ಜಿಲ್ಲಾ ಸಂಸ್ಥೆ,ಬೆಳ್ತಂಗಡಿ ತಾಲೂಕಿನ ಬೆಳ್ತಂಗಡಿ ಮತ್ತು ಮಡಂತ್ಯಾರು ಸ್ಥಳೀಯ ಸಂಸ್ಥೆ ಇವರ ಸಹಭಾಗಿತ್ವದಲ್ಲಿ ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿ ಇಲ್ಲಿ ಬೆಳ್ತಂಗಡಿ ತಾಲೂಕು ಮಟ್ಟದ ಪ್ರಾರಂಭಿಕ ತರಬೇತಿ ಶಿಬಿರ ಹಾಗೂ ಪುನಶ್ಚೇತನ ತರಬೇತಿ ಶಿಬಿರ ಯಶಸ್ವಿಯಾಗಿ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬೆಳ್ತಂಗಡಿ ತಾಲೂಕಿನ ಮಾನ್ಯ ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿಗಳು ಶ್ರೀಮತಿ ಸುಜಯ ವಿ ಇವರು ವಹಿಸಿಕೊಂಡು ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.

ಕಾರ್ಯಕ್ರಮವನ್ನು ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯ ಮುಖ್ಯ ಶಿಕ್ಷಕಿ ಶ್ರೀಮತಿ ಹೇಮಲತಾ ಇವರು ದೀಪ ಬೆಳಗಿಸಿ ಉದ್ಘಾಟಿಸಿದರು.

ಕಾರ್ಯಕ್ರಮದಲ್ಲಿ ಬೆಳ್ತಂಗಡಿ ಸ್ಥಳೀಯ ಸಂಸ್ಥೆಯ ಅಧ್ಯಕ್ಷ ಪದ್ಮಕುಮಾರ್, ಜಿಲ್ಲಾ ಕಾರ್ಯದರ್ಶಿ ಪ್ರತೀಮ್ ಕುಮಾರ್, ಶಿಬಿರ ನಾಯಕರು ಶ್ರೀ ಗುರುಮೂರ್ತಿ ನಾಯ್ಕಪು LT(S),ಶಿಬಿರ ಸಹಾಯಕರು ವಿನೋದ್ ಚೇವಾರ್ HWB(S), ಸ್ಥಳೀಯ ಸಂಸ್ಥೆಯ ಕೋಶಾಧಿಕಾರಿ ಬೆಳ್ಳಿಯಪ್ಪ ಕೆ, ಕಾರ್ಯದರ್ಶಿ ಪ್ರಮೀಳಾ, ರಾಜ್ಯ ಸಹಾಯಕ ಸಂಘಟನಾ ಆಯುಕ್ತರು ಭರತ್ ರಾಜ್ ಕೆ ಉಪಸ್ಥಿತರಿದ್ದರು.

ಸ್ವಯಂ ಸೇವಕರಾಗಿ ವಾಣಿ ಪದವಿ ಪೂರ್ವ ಕಾಲೇಜು ಬೆಳ್ತಂಗಡಿ ಇಲ್ಲಿನ ರೋವರ್ಸ್ ಮತ್ತು ರೇಂಜರ್ಸ್ ವಿದ್ಯಾರ್ಥಿಗಳು ಸಹಕರಿಸಿದರು.

ಪ್ರಾರಂಭಿಕ ತರಬೇತಿ ಶಿಬಿರದಲ್ಲಿ ಒಟ್ಟು 31 ಮತ್ತು ಪುನಶ್ಚೇತನ ತರಬೇತಿ ಶಿಬಿರದಲ್ಲಿ ಒಟ್ಟು 10 ಒಟ್ಟು 41 ಶಿಕ್ಷಕ/ಶಿಕ್ಷಕಿಯರು ಭಾಗವಹಿಸುತ್ತಾರೆ.

ಸ್ಥಳೀಯ ಸಂಸ್ಥೆಯ ಕೋಶಾಧಿಕಾರಿ ಬೆಳಿಯಪ್ಪ ಕೆ ಕಾರ್ಯಕ್ರಮ ನಿರೂಪಿಸಿದರು, ರಾಜ್ಯ ಸಹಾಯಕ ಸಂಘಟನಾ ಆಯುಕ್ತರಾದ ಭರತ್ ರಾಜ್ ಕೆ ಸ್ವಾಗತಿಸಿ, ಪ್ರಾಸ್ತಾವಿಕ ನುಡಿದರು. ಸ್ಥಳೀಯ ಸಂಸ್ಥೆಯ ಕಾರ್ಯದರ್ಶಿ ಪ್ರಮೀಳಾ ಧನ್ಯವಾದವಿತ್ತರು.

Related posts

ವಲಯ ಮಟ್ಟದ ಬಾಲಕರ ತ್ರೋಬಾಲ್ ಪಂದ್ಯಾಟ: ಬರೆಂಗಾಯ ಶಾಲಾ ವಿದ್ಯಾರ್ಥಿಗಳ ತಂಡ ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಜು.10 ರಿಂದ ಆ.20ರವರೆಗೆ ಕುಮಟಾದಲ್ಲಿ ಶ್ರೀ ರಾಮ ಕ್ಷೇತ್ರ ಮಹಾಸಂಸ್ಥಾನದ ಜಗದ್ಗುರು ಪೀಠದ ಪೀಠಾಧೀಶ ಮಹಾಮಂಡಲೇಶ್ವರ 1008 ಸದ್ಗುರು ಬ್ರಹ್ಮಾನಂದ ಸರಸ್ವತಿ ಜೀ ಮಹಾರಾಜ ಅವರ ಚಾತುರ್ಮಾಸ್ಯ ವ್ರತಾಚರಣೆ

Suddi Udaya

ಮುಡಾ ಹಗರಣದಲ್ಲಿ ಹೈಕೋರ್ಟ್‌ ತೀರ್ಪು ಬಿಜೆಪಿ ಹೋರಾಟಕ್ಕೆ ಸಂದ ಜಯ: ನೈತಿಕ ಹೊಣೆ ಹೊತ್ತು ಸಿದ್ದರಾಮಯ್ಯನವರು ತಕ್ಷಣ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಬೇಕು: ಶಾಸಕ ಹರೀಶ್ ಪೂಂಜ

Suddi Udaya

ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ಹಾಗೂ ಪ್ರಜಾಪ್ರಭುತ್ವ ವೇದಿಕೆ ಬೆಳ್ತಂಗಡಿ ವತಿಯಿಂದ ಕೋಲ್ಕತ್ತಾದ ಮೆಡಿಕಲ್ ವಿದ್ಯಾರ್ಥಿನಿ ಹತ್ಯೆ ಪ್ರಕರಣ ಖಂಡಿಸಿ ಪಂಜಿನ ಮೆರವಣಿಗೆ

Suddi Udaya

ಜ.12: ಬಳಂಜ ಬದಿನಡೆಯಲ್ಲಿ ಅಯ್ಯಪ್ಪ ಪೂಜೆ, ಇರುಮುಡಿ ಕಟ್ಟುವ ಕಾರ್ಯಕ್ರಮ

Suddi Udaya

ಕನ್ಯಾಡಿ ಶ್ರೀ ಗುರುದೇವ ಮಠಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಭೇಟಿ

Suddi Udaya
error: Content is protected !!