July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲಾ ಶತಮಾನೋತ್ಸವ ಸಂಭ್ರಮ

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಉಜಿರೆ ಇದರ ಶತಮಾನೋತ್ಸವ ಸಮಾರೋಪ ಸಂಭ್ರಮದ ಉದ್ಘಾಟನೆಯನ್ನು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆ ಅಧ್ಯಕ್ಷ, ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರು ದೀಪ ಪ್ರಜ್ವಲನೆ ಮಾಡುವ ಮೂಲಕ ಶುಭ ಕೋರಿದರು.

ನವೀಕೃತ ಗ್ರಂಥಾಲಯದ ಉದ್ಘಾಟನೆಯನ್ನು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖಾ ಸಚಿವರಾದ ಮಧು ಬಂಗಾರಪ್ಪ ಮಾತನಾಡಿ ದೇಶ ಅಭಿವೃದ್ಧಿಯಾಗಬೇಕಾದರೆ ಶಿಕ್ಷಣದಿಂದ ಮಾತ್ರ ಸಾಧ್ಯ.ಶಾಲೆಯಲ್ಲಿ ಶಿಕ್ಷಕರಿದ್ದಾಗ ಮಾತ್ರ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ನೀಡಬಹುದು ಎಂದರು.ಸಮಾರಂಭದ ಅಧ್ಯಕ್ಷತೆಯನ್ನು ಬೆಳ್ತಂಗಡಿ ಕ್ಷೇತ್ರದ ಶಾಸಕರಾದ ಹರೀಶ್ ಪೂಂಜರವರು ವಹಿಸಿದ್ದರು.

ವೇದಿಕೆಯಲ್ಲಿ ವಿಧಾನ ಪರಿಷತ್ ಶಾಸಕ ಎಸ್.ಎಲ್ ಭೋಜೇಗೌಡ, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆ ಕಾರ್ಯದರ್ಶಿ ಡಿ ಹರ್ಷೇಂದ್ರ ಕುಮಾರ್,ಬೆಸ್ಟ್ ಪೌಂಡೇಶನ್ ಅಧ್ಯಕ್ಷ ರಕ್ಷಿತ್ ಶಿವರಾಮ್,ಶ್ರೀ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆ ಕಾರ್ಯದರ್ಶಿ ಡಾ.ಸತೀಶ್ಚಂದ್ರ ಎಸ್, ಶ್ರೀ ನಾರಾಯಣ ಗುರು ನಿಗಮ ರಾಜ್ಯಾದ್ಯಕ್ಷ ಮಂಜುನಾಥ, ಉಜಿರೆ ಗ್ರಾಮ‌ ಪಂಚಾಯತ್ ಅಧ್ಯಕ್ಷೆ ಉಷಾ ಕಿರಣ್ ಕಾರಂತ್, ಉಪಾಧ್ಯಕ್ಷ ರವಿ ಕುಮಾರ್ ಬರಮೇಲು,ಸಮಿತಿ ಪ್ರಧಾನ ಸಂಚಾಲಕ ಮೋಹನ್ ಕುಮಾರ್ ಲಕ್ಷ್ಮೀ ಇಂಡಸ್ಟ್ರೀಸ್ ಉಜಿರೆ,ಕಾರ್ಯದರ್ಶಿ ಅಬೂಬಕ್ಕರ್, ಕೋಶಾಧಿಕಾರಿ ಮೋಹನ್ ಶೆಟ್ಟಿಗಾರ್,ಕಾರ್ಯಕ್ರಮ ಸಂಯೋಜಕ ಬಿ.ಸೋಮಶೇಖರ ಶೆಟ್ಟಿ, ಶಾಲಾ ಮುಖ್ಯೋಪಾಧ್ಯಾಯರಾದ ಬಾಲಕೃಷ್ಣ ನಾಯ್ಕ ಪಿ,ಶಾಲಾ ಶಿಕ್ಷಕ- ರಕ್ಷಕ ಸಂಘದ ಅಧ್ಯಕ್ಷ ಅಬೂಬಕ್ಕರ್,ವಿದ್ಯಾರ್ಥಿ ನಾಯಕಿ ಶೆಝ ಫಾತಿಮಾ ಉಪಸ್ಥಿತರಿದ್ದರು.

ಶಾಲಾ ಶತಮಾನೋತ್ಸವ ಸಮಿತಿ ಅಧ್ಯಕ್ಷ ಶರತ್ ಕೃಷ್ಣ ಪಡ್ವಟ್ನಾಯರವರು ಅಧ್ಯಕ್ಷತೆ ವಹಿಸಿ ಪ್ರಾಸ್ತಾವಿಕ ಮಾತುಗಳೊಂದಿಗೆ ಸ್ವಾಗತಿಸಿದರು.ಶಾಲಾ ವಿದ್ಯಾರ್ಥಿಗಳು ಪ್ರಾರ್ಥನೆ ಹಾಡಿದರು. ಬಿ.ಸೋಮಶೇಖರ ಶೆಟ್ಟಿ, ಡಾ.ಅನನ್ಯ ಅವರು ಕಾರ್ಯಕ್ರಮ ನಿರೂಪಿಸಿದರು .ಕಾರ್ಯಕ್ರಮದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದ ಮಾತೃಶ್ರೀ ಹೇಮಾವತಿ ವೀ ಹೆಗ್ಗಡೆಯವರು, ಸೋನಿಯಾ ವರ್ಮ, ಪೂರನ್ ವರ್ಮ, ಎಕ್ಸೆಲ್ ಶಿಕ್ಚಣ ಸಂಸ್ಥೆಗಳ ಅಧ್ಯಕ್ಷ ಸುಮಂತ್ ಕುಮಾರ್ ಜೈನ್,ಕ್ಷೇತ್ರ ಶಿಕ್ಷಣಾಧಿಕಾರಿ ತಾರಕೇಸರಿ, ಪ್ರಮುಖರಾದ ಹಳ್ಳಿಮನೆ ಪ್ರವೀಣ್, ಕನ್ನಡ ಸಾಹಿತ್ಯ ಸಮ್ಮೇಳನ ಸರ್ವಾಧ್ಯಕ್ಷ ಭುಜಬಲಿ ಧರ್ಮಸ್ಥಳ,ಎಸ್.ಡಿ ಎಂ ಕಾಲೇಜಿನ ಪ್ರಾಂಶುಪಾಲರಾದ ಡಾ.ವಿಶ್ವನಾಥ, ಉದ್ಯಮಿ ರವಿ ಚಕ್ಕಿತ್ತಾಯ, ಎಕ್ಸೆಲ್ ಕಾಲೇಜಿನ ಪ್ರಾಂಶುಪಾಲರಾದ ಡಾ. ನವೀನ್ ಕುಮಾರ್ ಮರಿಕೆ, ಡಾ.ಪ್ರಜ್ವಲ್ ಕಜೆ,ರವೀಂದ್ರ ಶೆಟ್ಟಿ ಬಳಂಜ, ಅರವಿಂದ್ ಕಾರಂತ್,ಶಿವಕಾಂತ್ ಗೌಡ ಹಾಗೂ ವಿವಿಧ ಕ್ಷೇತ್ರದ ಗಣ್ಯರು, ಹಳೆ ವಿದ್ಯಾರ್ಥಿಗಳು, ಪೋಷಕರು,ಶಿಕ್ಷಕ ವೃಂದದವರು, ಇತರರು ಉಪಸ್ಥಿತರಿದ್ದರು.

Related posts

ಉಜಿರೆಯ ಎಸ್ ಎಲ್ ವಿ ಕನ್ಸ್ಟ್ರಕ್ಷನ್ ನ ಸಿವಿಲ್ ಇಂಜಿನಿಯರ್ ಸಂಪತ್ ರತ್ನ ರಾವ್ ಎಮಿನೆಂಟ್ ಇಂಜಿನಿಯರ್ ಪ್ರಶಸ್ತಿಗೆ ಆಯ್ಕೆ

Suddi Udaya

ವಿಷ ಪದಾರ್ಥ ಸೇವಿಸಿದ್ದ ಮಹಿಳೆ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು

Suddi Udaya

ಶಿಶಿಲದಲ್ಲಿ 28ನೇ ವರ್ಷದ ಮೊಸರು ಕುಡಿಕೆ ಉತ್ಸವ, ಪ್ರತಿಭಾ ಪುರಸ್ಕಾರ

Suddi Udaya

ಕಕ್ಕಿಂಜೆ ಮುಹ್ಯುದ್ದೀನ್ ಜುಮ್ಮಾ ಮಸ್ಜಿದ್ ಆಡಳಿತ ಸಮಿತಿಗೆ ಆಯ್ಕೆ

Suddi Udaya

ನಿಡಿಗಲ್ ಶ್ರೀ ಲೋಕನಾಥೇಶ್ವರ ದೇವಸ್ಥಾನದ ಆಡಳಿತ ಅಧಿಕಾರಿಯಾಗಿ ಶ್ರೀನಿವಾಸ್ ಡಿ.ಪಿ

Suddi Udaya

ಕ್ಯಾನ್ ಫಿನ್ ಹೋಮ್ ಲಿ.ನಿಂದ ಸಿ.ಎಸ್.ಆರ್ ಫಂಡ್ ಹಸ್ತಾಂತರ

Suddi Udaya
error: Content is protected !!