37.9 C
ಪುತ್ತೂರು, ಬೆಳ್ತಂಗಡಿ
March 6, 2026
ತಾಲೂಕು ಸುದ್ದಿ

ಧರ್ಮಸ್ಥಳದ ಅಶೋಕನಗರ ಅಭಿವೃದ್ಧಿಗಾಗಿ ರೂ.2.41 ಕೋಟಿ ಅನುದಾನದ ಕಾಮಗಾರಿಗೆ ಶಂಕು ಸ್ಥಾಪನೆ

ಧಮ೯ಸ್ಥಳ: ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ ರಾಜ್ಯಸಭಾ ಅನುದಾನದಲ್ಲಿ ಧರ್ಮಸ್ಥಳದ ಅಶೋಕನಗರ ಅಭಿವೃದ್ಧಿಗೆ 2.41 ಕೋಟಿ ರೂ. ಮಂಜೂರಾಗಿದ್ದು ಕಾಮಗಾರಿಗೆ ಶಿಲಾನ್ಯಾಸ ಡಿ.21 ಅಮೃತವರ್ಷಿಣಿ ಸಭಾಭವನದ ಬಳಿ ಇರುವ ಮೈದಾನದಲ್ಲಿ ನಡೆಯಿತು.

ಅಭಿವೃದ್ಧಿ ಕಾಮಗಾರಿಗೆ ಶಿಲಾನ್ಯಾಸ ಮಾಡಿದ ಶಾಸಕ ಹರೀಶ್ ಪೂಂಜ ಮಾತನಾಡಿ, ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ ದಕ್ಷ ನೇತೃತ್ವದಲ್ಲಿ ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿಯವರು ಕಂಡ ಗ್ರಾಮರಾಜ್ಯದ ಮೂಲಕ ರಾಮರಾಜ್ಯದ ಕನಸು ದೇಶದೆಲ್ಲೆಡೆ ನನಸಾಗುತ್ತಿದೆ. ಅಶೋಕನಗರದಲ್ಲಿ ರಸ್ತೆ, ಬೀದಿದೀಪ, ಚರಂಡಿ ವ್ಯವಸ್ಥೆ, ಸ್ವಚ್ಛತೆ ಮೊದಲಾದ ಮೂಲಭೂತ ಸೌಕರ್ಯಗಳ ಪೂರೈಕೆಗಾಗಿ ಪೂಜ್ಯ ಹೆಗ್ಗಡೆಯವರು 2.41 ಕೋಟಿ ರೂ. ಅನುದಾನ ಮಂಜೂರು ಮಾಡಿರುವುದಕ್ಕೆ ಕೃತಜ್ಞತೆ ಅರ್ಪಿಸಿದರು.
ಅನುದಾನ ಮಂಜೂರಾತಿಗೆ ಸಹಕರಿಸಿದ ರಾಜ್ಯಸಭಾ ಸದಸ್ಯರ ಆಪ್ತ ಕಾರ್ಯದರ್ಶಿ ಕೆ.ಎನ್. ಜನಾರ್ದನ್ ಮತ್ತು ಹೆಗ್ಗಡೆಯವರ ಆಪ್ತಕಾರ್ಯದರ್ಶಿ ಎ.ವಿ. ಶೆಟ್ಟಿ ಅವರ ಸಕ್ರಿಯ ಸಹಕಾರಕ್ಕಾಗಿ ಶಾಸಕರು ಅಭಿನಂದಿಸಿದರು.

ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಚಂದನ್‌ಪ್ರಸಾದ್ ಕಾಮತ್ ಮತ್ತು ರಾಜ್ಯಸಭಾ ಸದಸ್ಯರ ಆಪ್ತ ಕಾರ್ಯದರ್ಶಿ ಕೆ.ಎನ್. ಜನಾರ್ದನ್ ಶುಭಾಶಂಸನೆ ಮಾಡಿದರು.
ಹೆಗ್ಗಡೆಯವರ ಆಪ್ತಕಾರ್ಯದರ್ಶಿ ಎ.ವಿ. ಶೆಟ್ಟಿ ಮಾತನಾಡಿ ಅಶೋಕನಗರದ ಸರ್ವತೋಮುಖ ಪ್ರಗತಿಯ ಕನಸು ನನಸಾಗುವ ಸುವರ್ಣಾವಕಾಶ ಒದಗಿ ಬಂದಿದೆ. “ಹಿಂದುಳಿದವರು ಎಂಬ ಪದವನ್ನೇ ಅಳಿಸಿ ಎಲ್ಲರೂ ಮುಂದುವರಿದವರು ಆಗಬೇಕು ಎಂಬುದು ಪೂಜ್ಯ ಹೆಗ್ಗಡೆಯವರ ಆಶಯವಾಗಿದೆ. ಅಶೋಕನಗರವು “ಸಾಮ್ರಾಟ್ ಅಶೋಕನಗರ” ವಾಗಿ ಬೆಳೆಯಲಿ, ಬೆಳಗಲಿ ಎಂದು ಹಾರೈಸಿದರು.


ಬೆಳ್ತಂಗಡಿ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಭವಾನಿಶಂಕರ್, ಧರ್ಮಸ್ಥಳ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ವಿಮಲಾ, ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಪ್ರೀತಮ್ ಧರ್ಮಸ್ಥಳ, ನಿರ್ಮಿತಿ ಕೇಂದ್ರದ ಎಂಜಿನಿಯರ್ ನವೀನ್, ಗ್ರಾಮಾಭಿವೃದ್ಧಿ ಯೋಜನೆಯ ಪ್ರಾದೇಶಿಕ ನಿರ್ದೇಶಕ ಮನೋಜ್ ಮಿನೇಜಸ್, ಅನ್ನಪೂರ್ಣ ಛತ್ರದ ಪ್ರಬಂಧಕ ಸುಬ್ರಹ್ಮಣ್ಯಪ್ರಸಾದ್, ಬೀಡಿನ ಪ್ರಬಂಧಕ ರಾಜೇಂದ್ರ ದಾಸ್, ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷೆ ಧನಲಕ್ಷೀ ಜನಾರ್ದನ್, ಗ್ರಾಮ ಪಂಚಾಯತ್ ಸದಸ್ಯೆ ಸುನೀತಾ,ಅಶೋಕನಗರದ ಗುರಿಕಾರ ಕರಿಯ ಗುರಿಕಾರ ಮತ್ತು ಒತ್ತು ಗುರಿಕಾರ ಸದಾಶಿವ, ಗ್ರಾಮ ಪಂಚಾಯತ್ ಸದಸ್ಯರು, ಪಂಚಾಯತ್ ಸಿಬಂದಿ ವಗ೯ದವರು, ಅಶೋಕ ನಗರದ‌ ನಾಗರಿಕರು ಉಪಸ್ಥಿತರಿದ್ದರು.

ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಶ್ರೀನಿವಾಸ ರಾವ್ ಧರ್ಮಸ್ಥಳ ಸ್ವಾಗತಿಸಿದರು. ಪಿ.ಡಿ.ಒ. ಗಾಯತ್ರಿ ಧನ್ಯವಾದವಿತ್ತರು. ದೇವಿಪ್ರಸಾದ್ ಕಾರ್ಯಕ್ರಮ ನಿರ್ವಹಿಸಿದರು.

Related posts

ಮದ್ದಡ್ಕ ವಿಶ್ವ ಹಿಂದೂ ಪರಿಷತ್ ಭಜರಂಗದಳ ವತಿಯಿಂದ ಧನಸಹಾಯ ಹಸ್ತಾಂತರ

Suddi Udaya

ಬಂಗಾಡಿ ಕೊಲ್ಲಿಯಲ್ಲಿ ಯುವ ನಾಯಕ ರಂಜನ್ ಜಿ ಗೌಡರವರ ಸಾರಥ್ಯದಲ್ಲಿ 26ನೇ ವರ್ಷದ ಹೊನಲು ಬೆಳಕಿನ ಸೂರ್ಯ-ಚಂದ್ರ ಜೋಡುಕರೆ ಕಂಬಳ ಉದ್ಘಾಟನೆ

Suddi Udaya

ಬೆಳ್ತಂಗಡಿ ಅಖಿಲ ಕರ್ನಾಟಕ ಬ್ರಾಹ್ಮಣ ಅರ್ಚಕ ಮತ್ತು ಪುರೋಹಿತರ ಪರಿಷತ್ ವತಿಯಿಂದ ನಡ ಸ.ಹಿ.ಪ್ರಾ.ಶಾಲೆಗೆ ಶುದ್ಧ ಕುಡಿಯುವ ನೀರಿನ ಯಂತ್ರ ಹಸ್ತಾಂತರ

Suddi Udaya

ಮಂಜೊಟ್ಟಿ ಸ್ಟಾರ್ ಲೈನ್ ಆಂ.ಮಾ. ಶಾಲಾ ವಿದ್ಯಾರ್ಥಿಗಳ ಸಂಸತ್ತಿನ ಚುನಾವಣೆ

Suddi Udaya

ಗಡಿಪಾರು ವಿಷಯದಲ್ಲಿ ಷಡ್ಯಂತ್ರ ಎಂದು ಸುಳ್ಳು ಸುದ್ದಿಯನ್ನು ಯುಟ್ಯೂಬ್ ನಲ್ಲಿ ಪ್ರಸಾರ ಮಾಡಿದ ಜಯಂತ್ ಟಿ ವಿರುದ್ಧ ಪ್ರಕರಣ ದಾಖಲು

Suddi Udaya

ಉಜಿರೆ: ಎಸ್. ಡಿ. ಎಂ. ಪದವಿ ಪೂರ್ವ ಕಾಲೇಜಿನಲ್ಲಿ ‘ಪ್ರತಿಭಾ ಸಮ್ಮಾನ್-2025’

Suddi Udaya
error: Content is protected !!