ಗ್ರಾಮಾಂತರ ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಬದನಾಜೆ ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲಾ ಅಮೃತ ಮಹೋತ್ಸವ: ಸುಜ್ಞಾನ ಸಭಾಂಗಣ ಲೋಕಾರ್ಪಣೆ

ಉಜಿರೆ: ಬದನಾಜೆ ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆ ಮತ್ತು ಪ್ರೌಢ ಶಾಲೆಯ ಅಮೃತ ಮಹೋತ್ಸವ ಹಾಗೂ ಸುಜ್ಞಾನ ಸಭಾಂಗಣ ಲೋಕಾರ್ಪಣೆ ಕಾರ್ಯಕ್ರಮವು ಡಿ.21ರಂದು ಜರುಗಿತು.

ಬದನಾಜೆ ಅಮೃತ ಮಹೋತ್ಸವ ಸಮಿತಿ ಗೌರವಾಧ್ಯಕ್ಷರು, ಉಜಿರೆ ಶ್ರೀ ಜನಾರ್ದನ ದೇವಸ್ಥಾನದ ಆನುವಂಶಿಕ ಆಡಳಿತ ಮೊಕ್ತೇಸರ ಶರತ್ ಕೃಷ್ಣ ಪಡುವೆಟ್ನಾಯ ರವರು ಧ್ವಜಾರೋಹಣ ಹಾಗೂ ಉಜಿರೆ ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕರಾದ ಮೋಹನ್ ಕುಮಾರ್ ರವರು ಸುಜ್ಞಾನ ಸಭಾಂಗಣದ ಲೋಕಾರ್ಪಣೆ ನೆರವೇರಿಸಿದರು.

ಸಭಾ ಕಾರ್ಯಕ್ರಮದ ಉದ್ಘಾಟನೆಯನ್ನು ಉಜಿರೆ ಗ್ರಾಮ ಪಂಚಾಯತ್ ಅಧ್ಯಕ್ಷೆ ಉಷಾಕಿರಣ್ ಕಾರಂತ್ ನೆರವೇರಿಸಿದರು. ಉಜಿರೆ ಬೆನಕ ಹೆಲ್ತ್ ಸೆಂಟರ್ ನ ಆಡಳಿತ ನಿರ್ದೇಶಕ ಡಾ.ಗೋಪಾಲಕೃಷ್ಣ ಭಟ್ ಅವರು ಅಮೃತ ಪಥ ಸ್ಮರಣ ಸಂಚಿಕೆ ಬಿಡುಗಡೆಗೊಳಿಸಿ ಮಾತನಾಡಿದರು.

ವೇದಿಕೆಯಲ್ಲಿ ಸೀತಾರಾಮ ಶೆಟ್ಟಿ ಎಸ್.ಕೆ.ಡಿ.ಆರ್.ಡಿ.ಪಿ, ನಿವೃತ್ತ ಶಿಕ್ಷಕ ಬಾಬು ಗೌಡ, ಸನತ್ ಕುಮಾರ್, ಅಮೃತ ಮಹೋತ್ಸವ ಸಮಿತಿ ಅಧ್ಯಕ್ಷ ಗಿರಿರಾಜ ಬಾರಿತ್ತಾಯ, ಎಸ್ ಡಿ ಎಂ ಸಿ ಅಧ್ಯಕ್ಷರುಗಳಾದ ಅನಿಲ್ ಡಿಸೋಜ, ಅರುಣಾಕ್ಷಿ, ಗ್ರಾಮ ಪಂಚಾಯತ್ ಸದಸ್ಯರುಗಳಾದ ಮಂಜುನಾಥ್, ಬಿ.ಎಂ. ಇಲ್ಯಾಸ್, ಶೀನ ನಾಯ್ಕ, ಲಲಿತ, ಗುರುಪ್ರಸಾದ್, ನಾಗವೇಣಿ, ಸವಿತಾ ಉಪಸ್ಥಿತರಿದ್ದರು.

ನಿವೃತ್ತ ಶಿಕ್ಷಕರಿಗೆ ಹಾಗೂ ಪ್ರಸ್ತುತ ಶಿಕ್ಷಕರಿಗೆ ಕಾರ್ಯ ನಿರ್ವಹಿಸುತ್ತಿರುವ ಶಿಕ್ಷಕರು, ಗೌರವ ಶಿಕ್ಷಕರಿಗೆ ಗೌರವ ಸಮರ್ಪಣೆ ಹಾಗೂ ಗುರುವಂದನೆ ಕಾರ್ಯಕ್ರಮ ಜರುಗಿತು. ಹಾಗೂ ಅಡುಗೆ ಸಿಬ್ಬಂದಿಗಳನ್ನೂ ಗೌರವಿಸಲಾಯಿತು. ವಿವಿಧ ಆಟೋಟ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಸ್ಮರಣ ಸಂಚಿಕೆಯ ಪ್ರಧಾನ ಸಂಪಾದಕ, ಶಿಕ್ಷಕ ಗೋಪಾಲ್ ಸಂಚಿಕೆಯ ಪರಿಚಯವನ್ನು ತಿಳಿಸಿದರು.

ಮುಖ್ಯೋಪಾಧ್ಯಾಯ ನಿರಂಜನ್ ಪ್ರಸ್ತಾವಿಸಿ, ಸ್ವಾಗತಿಸಿದರು. ಪ್ರೌಢ ಶಾಲಾ ಮುಖ್ಯೋಪಾಧ್ಯಾಯಿನಿ ಜಮುನ ಕೆ.ಎಸ್. ವರದಿ ಮಂಡಿಸಿದರು. ಶಿಕ್ಷಕಿ ಪ್ರೀತಿ ಸಂದೇಶ ವಾಚಿಸಿದರು. ಶಿಕ್ಷಕರಾದ ಜಯಲಕ್ಷ್ಮಿ ಮತ್ತು ಜಯರಾಮ ನಿರೂಪಿಸಿದರು. ದೈಹಿಕ ಶಿಕ್ಷಕ ವಿಠಲ ನಾಯ್ಕ ವಂದಿಸಿದರು.

Related posts

ವಿದ್ಯುತ್ ಪರಿವರ್ತಕದಿಂದ ಕಿಡಿಗಳು ಸಿಡಿದು ವ್ಯಾಪಿಸಿದ ಬೆಂಕಿ; ಅನಾಹುತ ತಪ್ಪಿಸಿದ ಸ್ಥಳೀಯ ನಾಗರಿಕರು

Suddi Udaya

ಭಾರತೀಯ ಸಾಂಸ್ಕೃತಿಕ ವಿಕಾಸಕ್ಕಾಗಿ ನರೇಂದ್ರ ಮೋದಿಜೀಯವರು ಮತ್ತೊಮ್ಮೆ ಪ್ರಧಾನಿಯಾಗಲು ಕ್ಯಾ| ಬ್ರಿಜೇಶ್ ಚೌಟ ಹಾಗೂ ಕೋಟ ಶ್ರೀನಿವಾಸ ಪೂಜಾರಿಯವರನ್ನು ಗೆಲ್ಲಿಸಿ ಸಂಸ್ಕಾರ ಭಾರತೀ ಬೆಳ್ತಂಗಡಿ ಘಟಕ ಮತ್ತು ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನದ ಅಧ್ಯಕ್ಷ ಸಂಪತ್ ಬಿ ಸುವರ್ಣ ಹೇಳಿಕೆ

Suddi Udaya

ಬೆಳ್ತಂಗಡಿ ಯುವ ಮೋರ್ಚಾ ವತಿಯಿಂದ ಕಾರ್ಗಿಲ್ ವಿಜಯ ದಿವಸ್ ಅಂಗವಾಗಿ ಗುರುವಾಯನಕೆರೆ ಹುತಾತ್ಮ ಯೋಧ ಏಕನಾಥ್ ಶೆಟ್ಟಿ ರವರ ಪ್ರತಿಮೆಗೆ ಮಾಲಾರ್ಪಣೆ, ನುಡಿನಮನ

Suddi Udaya

ಜಾತಿ ಗಣತಿ ಸಮೀಕ್ಷೆಯಲ್ಲಿ ಮೂಲ್ಯ – ಕುಂಬಾರ ಸಮುದಾಯದವರು ಜಾತಿ ಕಾಲಂನಲ್ಲಿ ಕುಂಬಾರ ಎಂದು ನಮೂದಿಸುವಂತೆ ತಾಲೂಕು ಮೂಲ್ಯರ ಯಾನೆ ಕುಂಬಾರರ ಸೇವಾ ಸಂಘದಿಂದ ಹೇಳಿಕೆ

Suddi Udaya

ಹಳೆಪೇಟೆಯಿಂದ ಕುತ್ರೋಟ್ಟು ರಸ್ತೆ ದುರಸ್ತಿಪಡಿಸುವ ಬಗ್ಗೆ ಕುಂಟಿನಿ ಕಾಂಗ್ರೆಸ್ ಬೂತ್ ಸಮಿತಿಯಿಂದ ಮನವಿ

Suddi Udaya

ವಾಣಿ ಕಾಲೇಜು: ಜಿಲ್ಲಾ ಮಟ್ಟದ ತ್ರೋಬಾಲ್ ಪಂದ್ಯಾಟ

Suddi Udaya
error: Content is protected !!