September 6, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿವರದಿ

ಮಾದಕವಸ್ತು ಪ್ರಕರಣದಲ್ಲಿ ಆರೋಪಿಗೆ ಐದು ವರ್ಷ ಶಿಕ್ಷೆ ; ಆರೋಪಿಯನ್ನು 16 ವರ್ಷಗಳ ಬಳಿಕ ಬಂಧಿಸಿದ್ದ ಸಿ.ಎಸ್.ಪಿ ಅಧಿಕಾರಿಗಳು

ಬೆಳ್ತಂಗಡಿ: ಕರಾವಳಿ ಕಾವಲು ಪೊಲೀಸ್ ಠಾಣೆಯ(CSP) ಅಪರಾಧ ಕ್ರಮಾಂಕ 09/2008 ಎನ್‌ಡಿಪಿಎಸ್ ಕಾಯಿದೆ ಕಲಂ 8ಸಿ 20 ಬಿ,(ii) ಮಾದಕ ವಸ್ತು ಪ್ರಕರಣದಲ್ಲಿ ಆರೋಪಿ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ತೋಟತ್ತಾಡಿ ಗ್ರಾಮದಲ್ಲಿ ನಿವಾಸಿಯಾಗಿದ್ದು ಮೂಲತಃ ಕೇರಳ ರಾಜ್ಯದ ತ್ರಿಶೂರ್ ಜಿಲ್ಲೆಯ ಮುಕುಂದಪುರಂ ,ಉತ್ತುಕ್ಕಾಡ್ ಗ್ರಾಮದ ಟಿ.ಇ. ಜೋಸೆಫ್(58) ಎಂಬಾತನಿಗೆ ವಿಚಾರಣೆ ನಡೆಸಿದ ಮಾನ್ಯ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಡಿ.20 ರಂದು ಸದ್ರಿ ಪ್ರಕರಣದಲ್ಲಿ ಆರೋಪಿತನಿಗೆ 5 ವರ್ಷ ಕಠಿಣ ಶಿಕ್ಷೆ ಹಾಗು 50,000 ದಂಡ ವಿಧಿಸಿ ಆದೇಶ ಮಾಡಲಾಗಿದೆ.

ಪ್ರಕರಣದಲ್ಲಿ ಬಂಧನದ ಬಳಿಕ ಜಾಮೀನು ಪಡೆದು ಹೊರಬಂದ ನಂತರ ಪ್ರಕರಣದ ವಿಚಾರಣೆಗೆ ಮಾನ್ಯ ನ್ಯಾಯಾಲಯಕ್ಕೆ ಹಾಜರಾಗದೇ 16 ವರ್ಷಗಳಿಂದ ತಲೆಮರೆಸಿಕೊಂಡಿದ್ದು. ಈತನ ವಿರುದ್ದ ನ್ಯಾಯಾಲಯವು LPC ಹಾಗೂ ದಸ್ತಗಿರಿ ವಾರೆಂಟನ್ನು ಹೊರಡಿಸಿತ್ತು. ಮಂಗಳೂರು ಕರಾವಳಿ ಕಾವಲು ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷರಾದ ಅನಂತ ಪದ್ಮನಾಭ ಮಾರ್ಗದರ್ಶನದಲ್ಲಿ ಎ.ಎಸ್.ಐ ಅಶೋಕ್, ವಿಜಯ ಸುವರ್ಣ, ಲೋಕೇಶ್ ಹಾಗೂ ಇತರ ಸಿಬ್ಬಂದಿಯವರವರನ್ನೊಳಗೊಂಡ ತಂಡವು ಆರೋಪಿ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ತೋಟತ್ತಾಡಿ ಗ್ರಾಮದ ನಿವಾಸಿಯಾಗಿದ್ದು ಮೂಲತಃ ಕೇರಳ ರಾಜ್ಯದ ತ್ರಿಶೂರ್ ಜಿಲ್ಲೆಯ ಮುಕುಂದಪುರಂ ,ಉತ್ತುಕ್ಕಾಡ್ ಗ್ರಾಮದ ಟಿ.ಇ. ಜೋಸೆಫ್ (58) ಎಂಬಾತನನ್ನು ವಿವಿಧ ಅಯಾಮಗಳಲ್ಲಿ ಮಾಹಿತಿಯನ್ನು ಸಂಗ್ರಹಿಸಿ ಆರೋಪಿಯ ಇರುವಿಕೆಯನ್ನು ಖಚಿತಪಡಿಸಿಕೊಂಡು ಆರೋಪಿಯನ್ನು 2024 ಫೆಬ್ರವರಿ 21 ರಂದು ಕೇರಳದ ತ್ರಿಶೂರ್ ನಲ್ಲಿ ವಶಕ್ಕೆ ಪಡೆದು ಮಂಗಳೂರು ಮಾನ್ಯ ಪ್ರಧಾನ ಮತ್ತು ಸತ್ರ ನ್ಯಾಯಾಲಯದ ಮುಂದೆ ಹಾಜರು ಪಡಿಸಿದಂತೆ ನ್ಯಾಯಾಲಯವು ನ್ಯಾಯಾಂಗ ಬಂಧನವನ್ನು ವಿಧಿಸಿ ಬಳಿಕ ವಿಚಾರಣೆ ಮುಂದುವರಿಸಿ ತಪ್ಪಿತಸ್ಥ ಎಂದು ಸಾಭಿತಾಗಿದ್ದರಿಂದ ಶಿಕ್ಷೆ ವಿಧಿಸಲಾಗಿದೆ.

16 ವರ್ಷದ ಬಳಿಕ ಆರೋಪಿ ಪತ್ತೆ:- LPC ಪ್ರಕರಣದಲ್ಲಿ 16 ವರ್ಷಗಳಿಂದ ಪೊಲೀಸರ ಕೈಗೆ ಸಿಗದೆ ತಲೆಮರೆಸಿಕೊಂಡಿದ್ದ ಆರೋಪಿ ಟಿ.ಇ.ಜೋಸೆಫ್ ನನ್ನು ಪತ್ತೆ ಹಚ್ಚಿ ನ್ಯಾಯಾಲಯಕ್ಕೆ ಹಾಜರುಪಡಿಸಿ ಶಿಕ್ಷೆಗೆ ಗುರಿಪಡಿಸಲು ಶ್ರಮ ವಹಿಸಿದ ಮಂಗಳೂರು ಕರಾವಳಿ ಕಾವಲು ಪೊಲೀಸ್‌ ಠಾಣೆಯ(CSP) ಎ.ಎಸ್.ಐ ಅಶೋಕ್ ,ಸಿಬ್ಬಂದಿ ಶ್ರೀ ವಿಜಯ ಸುವರ್ಣ ಹೆಚ್.ಸಿ , ಲೋಕೇಶ್ ಇವರಿಗೆ ಸಾರ್ವಜನಿಕರು ಅಭಿನಂದನೆ ಸಲ್ಲಿಸಿದ್ದಾರೆ.

Related posts

ಶ್ರೀ ಕ್ಷೇತ್ರ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಜಾತ್ರಾ ಮಹೋತ್ಸವ: ಧ್ವಜಾರೋಹಣ, ಹಸಿರು ಹೊರೆಕಾಣಿಕೆ ಸಮರ್ಪಣೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಸಹಪಠ್ಯ ಚಟುವಟಿಕೆಗಳ ಉದ್ಘಾಟನೆ

Suddi Udaya

ಹುಣ್ಸೆಕಟ್ಟೆ ಮತ್ತು ರೆಂಕೆದಗುತ್ತು ವ್ಯಾಪ್ತಿಯಲ್ಲಿ ಗುರು ಗಾಂಧಿ ಸಂವಾದ ಕಾರ್ಯಕ್ರಮ ಮತ್ತು ಕೋಟಿ ಚೆನ್ನಯ್ಯ ಕ್ರೀಡಾಕೂಟದ ಪೂರ್ವಭಾವಿ ಸಭೆ

Suddi Udaya

ವೇಣೂರು: ಚಿರತೆಯ ಮೃತದೇಹ ಪತ್ತೆ ಪ್ರಕರಣ:ಚಿರತೆಯ ಶವಪರೀಕ್ಷೆ ಮಾಡಿ ಅಂತ್ಯಕ್ರಿಯೆ ನಡೆಸಿದ ಅರಣ್ಯ ಇಲಾಖೆ

Suddi Udaya

ಬೆಳ್ತಂಗಡಿ: ವಂಚನೆ ಪ್ರಕರಣದಲ್ಲಿ 10 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Suddi Udaya

ರುಪ್ಸಾ ನೀಡುವ ತಾಲೂಕು ಮಟ್ಟದ ಉತ್ತಮ ಶಿಕ್ಷಕಿ ಪ್ರಶಸ್ತಿಗೆ ಎಸ್. ಡಿ. ಎಂ. ಆಂಗ್ಲ ಮಾಧ್ಯಮ ಶಾಲೆಯ ಸಹಶಿಕ್ಷಕಿ ರೇಷ್ಮಾ ಕೆ.ಎಸ್ ಆಯ್ಕೆ

Suddi Udaya
error: Content is protected !!