September 6, 2026
ಆರೋಗ್ಯಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿ

ಶ್ರೀ ಧ ಮಂ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವೈದ್ಯಕೀಯ ಮಹಾ ವಿದ್ಯಾ ನಿಲಯದಲ್ಲಿ ವಿಶ್ವ ಧ್ಯಾನ ದಿನಾಚರಣೆ

ಉಜಿರೆ: ವಿಶ್ವ ಧ್ಯಾನ ದಿನದ ಅಂಗವಾಗಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವೈದ್ಯಕೀಯ ಮಹಾವಿದ್ಯಾಲಯ, ಉಜಿರೆಯ ಮಾತೃಶ್ರೀ ರತ್ನಮ್ಮ ಹೆಗ್ಗಡೆ ಸಭಾಂಗಣದಲ್ಲಿ ಡಿ. 20 ರಂದು ನ ಜಾಗೃತಿ ಕಾರ್ಯಕ್ರಮವನ್ನು ಆಯೋಜಿಸಲಾಯಿತು.

ಮುಖ್ಯ ಅತಿಥಿಗಳಾಗಿ ಡಾ. ಹರೀಶ್ ಕೃಷ್ಣಸ್ವಾಮಿ ಅವರು ಧ್ಯಾನದ ಮಹತ್ವ ಹಾಗೂ ಪಂಚಕೋಶಗಳ ಮೇಲೆ ಧ್ಯಾನವು ಬೀರುವ ಪರಿಣಾಮಗಳ ಕುರಿತು ವಿವರವಾದ ಮಾಹಿತಿಯನ್ನು ನೀಡಿದರು. ಧ್ಯಾನವು ಮಾನವನ ದೈಹಿಕ, ಮಾನಸಿಕ ಮತ್ತು ಆತ್ಮೀಯ ಬೆಳವಣಿಗೆಗೆ ಅತ್ಯಂತ ಅವಶ್ಯಕವೆಂದು ತಿಳಿಸಿದರು.

ಶಾಂತಾರಾಮ್ ಪೈ ಅವರು ಈ ರೀತಿಯ ಕಾರ್ಯಕ್ರಮಗಳ ಆಯೋಜನೆ ಕುರಿತು ಸಂತೋಷ ವ್ಯಕ್ತಪಡಿಸಿ, ವಿದ್ಯಾರ್ಥಿಗಳು ಧ್ಯಾನವನ್ನು ತಮ್ಮ ದಿನನಿತ್ಯದ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಉಪ ಪ್ರಾಂಶುಪಾಲರಾದ ಡಾ. ಸುಜಾತಾ ಕೆ.ಜೆ. ವಹಿಸಿ ಮಾತನಾಡಿ, ಧ್ಯಾನವು ದೈಹಿಕ, ಮಾನಸಿಕ ಮತ್ತು ಸಾಮಾಜಿಕ ಆರೋಗ್ಯವನ್ನು ಕಾಪಾಡುವುದರ ಜೊತೆಗೆ ನಿತ್ಯ ಧ್ಯಾನವು ವಿದ್ಯಾರ್ಥಿಗಳ ಏಕಾಗ್ರತೆ ಮತ್ತು ಆತ್ಮವಿಶ್ವಾಸವನ್ನು ಹೆಚ್ಚಿಸುತ್ತದೆ ಎಂದು ತಿಳಿಸಿ ವಿದ್ಯಾರ್ಥಿಗಳನ್ನು ಧ್ಯಾನ ಅಭ್ಯಾಸಕ್ಕೆ ಪ್ರೋತ್ಸಾಹಿಸಿದರು.

ಜೀವ ರಸಾಯನ ಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಡಾ. ಬಾಲಕೃಷ್ಣ ಶೆಟ್ಟಿ ಸ್ವಾಗತಿಸಿದರು. ಡಾ. ಹರ್ಷಿಣಿ ವಂದಿಸಿದರು.

Related posts

ಬೆಳ್ತಂಗಡಿ ರಾಮ ಭಕ್ತರಿಂದ ರಾಮೋತ್ಸವ ಸಂಭ್ರಮ: ಅಯೋಧ್ಯ ಕರ ಸೇವೆಯಲ್ಲಿ ಭಾಗವಹಿಸಿದ ಚಂದ್ರಶೇಖರ್ ಕಣ್ಣಾಜೆರವರಿಗೆ ಗೌರವಾರ್ಪಣೆ

Suddi Udaya

ಶಿಬಾಜೆ ಶ್ರೀಧರ ಕೊಲೆ ಪ್ರಕರಣ: ತನಿಖೆ ಆರಂಭಿಸಿದ ಎಸ್ಐಟಿ ಅಧಿಕಾರಿಗಳು

Suddi Udaya

ಅಂತರಾಷ್ಟ್ರೀಯ ಮಟ್ಟದ ಕರಾಟೆ ಪಂದ್ಯಾಟ: ಕಕ್ಕಿಂಜೆಯ ಶೇಖ್ ಅಝೀಮ್ ರಿಗೆ ಪ್ರಶಸ್ತಿ

Suddi Udaya

ಫೆ. 26ರಿಂದ ಮಾ.4: ಬೆಳಾಲು ಮಾಯ ಮಹಾದೇವ ದೇವಸ್ಥಾನದ ವಾರ್ಷಿಕ ಜಾತ್ರೆ

Suddi Udaya

ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ವತಿಯಿಂದ ಜೂ. 23ರಂದು ತಾಲೂಕಿನ ಎಲ್ಲಾ ಗ್ರಾಮ ಪಂಚಾಯತಿಗಳ ಮುಂದೆ ಪ್ರತಿಭಟನೆ

Suddi Udaya

ಪಾಲೇದು: ಮನೆ ಮನೆಗಳಲ್ಲಿ ಪರಿಸರ ದಿನ

Suddi Udaya
error: Content is protected !!