September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಪ್ರಸನ್ನ ಫಾರ್ಮಸಿ ಕಾಲೇಜಿನಲ್ಲಿ ಅಂಗದಾನ ಜಾಗೃತಿ ಕಾರ್ಯಕ್ರಮ ‘ಧಾತ್ರು’ ಆಯೋಜನೆ

ಲಾಯಿಲ: ಪ್ರಸನ್ನ ಎಜುಕೇಶನ್ ಟ್ರಸ್ಟ್ನ ಅಂಗಸAಸ್ಥೆಯಾದ ಬೆಳ್ತಂಗಡಿಯ ಪ್ರಸನ್ನ ಫಾರ್ಮಸಿ ಕಾಲೇಜಿನಲ್ಲಿ ಅಂಗದಾನ ಜಾಗೃತಿ ಕಾರ್ಯಕ್ರಮ ‘ಧಾತ್ರು’ ಡಿ.20 ರಂದು ಯಶಸ್ವಿಯಾಗಿ ಆಯೋಜಿಸಲಾಯಿತು.

ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ತಾಲ್ಲೂಕು ಆರೋಗ್ಯಾಧಿಕಾರಿ ಹಾಗೂ ಹಿರಿಯ ನೇತ್ರ ತಜ್ಞರಾದ ಡಾ. ರಮೇಶ ಭಾಗವಹಿಸಿ, ಅಂಗದಾನದ ಮಹತ್ವ, ಸಮಾಜದಲ್ಲಿ ಅದರ ಅಗತ್ಯತೆ ಹಾಗೂ ಅಂಗದಾನದಿಂದ ಅನೇಕ ಜೀವಗಳನ್ನು ಉಳಿಸಬಹುದಾದ ಬಗ್ಗೆ ವಿವರವಾಗಿ ಮಾತನಾಡಿದರು.

ಅತಿಥಿಗಳಾಗಿ ಪ್ರಸನ್ನ ಆಯುರ್ವೇದ ಕಾಲೇಜು ಮತ್ತು ಆಸ್ಪತ್ರೆಯ ರಚನಾ ಶರೀರ ವಿಭಾಗದ ಪ್ರಾಧ್ಯಾಪಕ ಹಾಗೂ ಮುಖ್ಯಸ್ಥರಾದ ಡಾ. ಪ್ರಲ್ಹಾದ್ ಡಿ. ಸುಬ್ಬಣ್ಣವರ ಹಾಗೂ ಪ್ರಸನ್ನ ಕೈಗಾರಿಕಾ ತರಬೇತಿ ಸಂಸ್ಥೆಯ ಪ್ರಾಂಶುಪಾಲರಾದ ಅಖಿಲೇಶ್ ರಾವ್ ಉಪಸ್ಥಿತರಿದ್ದು, ಅಂಗದಾನದ ಕುರಿತು ಜಾಗೃತಿ ಮೂಡಿಸುವ ಸಂದೇಶ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಸನ್ನ ಫಾರ್ಮಸಿ ಕಾಲೇಜಿನ ಪ್ರಾಂಶುಪಾಲರಾದ ಡಾ. ಎಂ. ಮಲ್ಲಿಕಾರ್ಜುನ ಗೌಡ ವಹಿಸಿ ಮಾತನಾಡಿ, ಯುವಜನರಲ್ಲಿ ಅಂಗದಾನದ ಕುರಿತು ಅರಿವು ಮೂಡಿಸುವುದು ಅತ್ಯಂತ ಅಗತ್ಯವಾಗಿದ್ದು, ಇಂತಹ ಜಾಗೃತಿ ಕಾರ್ಯಕ್ರಮಗಳು ಸಮಾಜಕ್ಕೆ ಮಹತ್ವದ ಕೊಡುಗೆ ನೀಡುತ್ತವೆ ಎಂದರು.

ಕಾರ್ಯಕ್ರಮದ ಅಂಗವಾಗಿ ಕಾಲೇಜಿನ ವಿದ್ಯಾರ್ಥಿಗಳು ಅಂಗದಾನದ ಮಹತ್ವವನ್ನು ಸಾರುವ ನಾಟಕವನ್ನು ಪ್ರದರ್ಶಿಸಿ, “Say Yes to Organ Donation” ಎಂಬ ಘೋಷವಾಕ್ಯದ ಮೂಲಕ ಜಾಗೃತಿ ಮೂಡಿಸಿದರು. ಈ ನಾಟಕಕ್ಕೆ ಸಭಿಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಯಿತು.
ಕಾರ್ಯಕ್ರಮದ ನಿರೂಪಣೆಯನ್ನು ಪ್ರಸನ್ನ ಫಾರ್ಮಸಿ ಕಾಲೇಜು, ಬೆಳ್ತಂಗಡಿಯ ಸಹಾಯಕ ಪ್ರಾಧ್ಯಾಪಕರಾದ ಪ್ರತೀಕ್ಷಾ ಅವರು ನಿರ್ವಹಿಸಿದರು. ವಿದ್ಯಾರ್ಥಿಗಳು, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.

Related posts

ಆರಂಬೋಡಿ ಒಕ್ಕೂಟದವರಿಂದ ಶ್ರದ್ಧಾ ಕೇಂದ್ರ ಸ್ವಚ್ಛತಾ ಕಾರ್ಯಕ್ರಮ

Suddi Udaya

ನಿಡ್ಲೆ ಸ.ಪ್ರೌ. ಶಾಲೆಯ ವಿದ್ಯಾರ್ಥಿಗಳಿಗೆ ಆಹಾರ ನಿರ್ವಹಣೆ ಮತ್ತು ಸಾಮಾಜಿಕ ಜವಾಬ್ದಾರಿ ಕುರಿತು ಮಾಹಿತಿ ಕಾರ್ಯಾಗಾರ

Suddi Udaya

ಪೆರ್ಲ: ಮುಂಡತ್ತೋಡಿ ಸ.ಹಿ.ಪ್ರಾ. ಶಾಲೆಯಲ್ಲಿ ಬೆಂಕಿ ರಹಿತ ಅಡುಗೆ ತಯಾರಿ ಕಾರ್ಯಕ್ರಮ

Suddi Udaya

ಉಜಿರೆ ಎಸ್.ಡಿ ಎಂ ಮಹಿಳಾ ಐ.ಟಿ.ಐ ಕಾಲೇಜಿನ ಓರಿಯಂಟೇಷನ್ ಹಾಗೂ ಕಾನ್ವಕೇಷನ್ ಕಾರ್ಯಕ್ರಮ

Suddi Udaya

ಕರ್ತವ್ಯದ ವೇಳೆ ಮೃತಪಟ್ಟ ಪವರ್ ಮ್ಯಾನ್ ಕುಟುಂಬಕ್ಕೆ ರೂ.1.20ಕೋಟಿ ವಿಮಾ ಪರಿಹಾರ ಹಸ್ತಾಂತರ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಲ್ಲಿ ” ಸಲ್ಯೂಟ್ ದಿ ಸೈಲೆಂಟ್ ಸ್ಟಾರ್ ” ಕಾರ್ಯಕ್ರಮ

Suddi Udaya
error: Content is protected !!