ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉರುವಾಲು ಶ್ರೀ ಮಹಮ್ಮಾಯಿ ದೇವಸ್ಥಾನ ಪ್ರತಿಷ್ಠೋತ್ಸವದ ಪೂರ್ವಭಾವಿ ಸಭೆ

ಉರುವಾಲು : ಮಹಮ್ಮಾಯಿ ಮರಾಠಿ ಸೇವಾ ಸಂಘ, ಶ್ರೀ ಮಹಮ್ಮಾಯಿ ದೇವಸ್ಥಾನ ಶಿವಾಜಿ ನಗರ, ಉರುವಾಲು ಇದರ ಪ್ರತಿಷ್ಠೋತ್ಸವದ ಪೂರ್ವಭಾವಿ ಸಭೆಯು ದೇವಸ್ಥಾನದ ವಠಾರದಲ್ಲಿ ನಡೆಯಿತು.

ಸಭೆಯ ಅಧ್ಯಕ್ಷತೆಯನ್ನು ಶಾಸಕ ಹರೀಶ್ ಪೂಂಜಾ ವಹಿಸಿ ದೇವಸ್ಥಾನದ ಸಮಗ್ರ ಅಭಿವೃದ್ಧಿಗೆ ನಾನು ಶ್ರಮಿಸಿತ್ತೇನೆ. ದೇವಸ್ಥಾನದ ವಠಾರದಲ್ಲಿ ಶೌಚಾಲಯ ನಿರ್ಮಾಣಕ್ಕಾಗಿ 2 ಲಕ್ಷ ರೂ., ದೇವಸ್ಥಾನದ ಮುಂಭಾಗದಲ್ಲಿ ಇಂಟರ್ ಲಾಕ್ ಅಳವಡಿಕೆಗೆ 03 ಲಕ್ಷ ರೂ. ಅನುದಾನ ಹಾಗೂ ದೇವಸ್ಥಾನದ ಗೋಡೆಗೆ ಸುಂದರ ಚಿತ್ರ ನಿರ್ಮಾಣಕ್ಕೆ ಹಾಗೂ ಅನ್ನದಾನ ಸೇವೆಗಾಗಿ ವೈಯಕ್ತಿಕವಾಗಿ 50 ಸಾವಿರ ರೂ. ನೀಡುವುದಾಗಿ ಭರವಸೆ ನೀಡಿದರು. ಅಲ್ಲದೆ, ಪ್ರತಿಷ್ಠೋತ್ಸವ ನಡೆಸುವ ಕುರಿತಾಗಿ ಸಲಹೆ ಸೂಚನೆಗಳನ್ನಿತ್ತರು.

ಸಭೆಯಲ್ಲಿ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ಕೊರಿಂಜದ ಮೊಕ್ತೇಸರರಾದ ಯೋಗೀಶ್ ಕುಮಾರ್ ಕಡ್ತಿಲ ಮತ್ತು ನ್ಯಾಯವಾದಿ ಸುಬ್ರಹ್ಮಣ್ಯ ಅಗರ್ತ ಸೂಕ್ತ ಮಾರ್ಗದರ್ಶನವನ್ನು ನೀಡಿದರು.

ಸಭೆಯಲ್ಲಿ ಶ್ರೀ ಮಹಮ್ಮಾಯಿ ದೇವಸ್ಥಾನ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಸುರೇಶ್ ಎಚ್ಎಲ್ , ಶ್ರೀ ಮಹಮ್ಮಾಯಿ ದೇವಸ್ಥಾನ ಶಿವಾಜಿ ನಗರ, ಉರುವಾಲು ಇದರ ಸಲಹಾ ಸಮಿತಿ ಸದಸ್ಯರು ಹಾಗೂ ಮುಂಡಾಜೆ ಸಿಎ ಬ್ಯಾಂಕ್ ನಿರ್ದೇಶಕ ಚೆನ್ನಕೇಶವ, ಶ್ರೀ ಮಹಮ್ಮಾಯಿ ದೇವಸ್ಥಾನ ಅಧ್ಯಕ್ಷ ಸೀತಾರಾಂ ನಾಯ್ಕ್ ಅರ್ಬಿ, ಮಹಮ್ಮಾಯಿ ಮರಾಠಿ ಸೇವಾ ಸಂಘ ಟ್ರಸ್ಟ್ ಅಧ್ಯಕ್ಷ ವಿನೋದ್ ಜಲದುರ್ಗಾ, ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ಕೊರಿಂಜದ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷರು ಹಾಗೂ ವನಶಾಸ್ತಾರ ದೇವಸ್ಥಾನದ ಅಧ್ಯಕ್ಷ ದಾಸಪ್ಪ ಗೌಡ ಕೊರಿಂಜ, ಶ್ರೀ ಮಹಮ್ಮಾಯಿ ದೇವಸ್ಥಾನ ತಣ್ಣೀರುಪಂತ ಇದರ ಅಧ್ಯಕ್ಷ ಗಂಗಯ್ಯ ನಾಯ್ಕ, ಸಿಎ ಬ್ಯಾಂಕ್ ಅಧ್ಯಕ್ಷ ಜಯಾನಂದ ಕಲ್ಲಾಪು, ಕಣಿಯೂರು ಗ್ರಾಮ ಪಂಚಾಯತ್ ಮಾಜಿ ಉಪಾಧ್ಯಕ್ಷೆ ಶ್ರೀಮತಿ ಜಲಜಾಕ್ಷಿ, ಕಣಿಯೂರು ಗ್ರಾ.ಪಂ. ಸದಸ್ಯರಾದ ಶ್ರೀಮತಿ ಸುಮತಿ, ಶ್ರೀ ರಾಮ ಶಾಲೆ ರಾಮನಗರ ಉಪ್ಪಿನಂಗಡಿ ಅಧ್ಯಕ್ಷ ಸುನಿಲ್ ಅನವು, ಕಣಿಯೂರು ಗ್ರಾ.ಪಂ. ಸದಸ್ಯರಾದ ಶ್ರೀ ಕೃಷ್ಣಪ್ರಸಾದ್, ಗಣೇಶ್ ಭಜನಾ ಮಂದಿರ ಕುಪ್ಪೆಟ್ಟಿ ಟ್ರಸ್ಟ್ ಅಧ್ಯಕ್ಷ ರೋಹಿತ್ ಶೆಟ್ಟಿ ಪುಯಿಲ್, ಭಗವಧ್ಭಕ್ತರು ಹಾಗೂ ಊರಿನವರು ಉಪಸ್ಥಿತರಿದ್ದರು.

Related posts

ಗುರುವಾಯನಕೆರೆ ಸಮೀಪ ಬದ್ಯಾರುವಿನಲ್ಲಿ ಕಾರು- ಬೈಕ್ ನಡುವೆ ಭೀಕರ ರಸ್ತೆ ಅಪಘಾತ, ಬೈಕ್ ಸವಾರ ಗಂಭೀರ

Suddi Udaya

ವಲಯ ಮಟ್ಟದ ಥ್ರೋಬಾಲ್ ಪಂದ್ಯಾಟ : ಅಂಡೆತ್ತಡ್ಕ ಶಾಲೆಯ ಬಾಲಕ ಬಾಲಕಿಯರ ತಂಡ ಪ್ರಥಮ

Suddi Udaya

ಆ.14 ಬೆಳ್ತಂಗಡಿ ರೋಟರಿ ಕ್ಲಬ್ ನಿಂದ ಅರ್ಹ ವಿದ್ಯಾರ್ಥಿಗಳಿಗೆ ರೂ.20 ಲಕ್ಷ ಸ್ಕಾಲರ್ ಸಿಪ್ ಹಸ್ತಾಂತರ

Suddi Udaya

ಬಾರ್ಯ ಪ್ಯಾಕ್ಸ್ ಚುನಾವಣೆ: 12 ಸ್ಥಾನಗಳಿಗೆ ಅಂತಿಮ ಕಣದಲ್ಲಿ24 ಮಂದಿ ಅಭ್ಯರ್ಥಿಗಳು: ಬಿಜೆಪಿ ಬೆಂಬಲಿತ ಸಹಕಾರ ಭಾರತೀಯ ಹಾಗೂ ಕಾಂಗ್ರೆಸ್ ಅಭ್ಯರ್ಥಿಗಳ ನಡುವೆ ಪೈಪೋಟಿ

Suddi Udaya

ಇತ್ತೀಚೆಗೆ ನಿಧನರಾದ ಮಾಜಿ ಶಾಸಕ ಕೆ. ವಸಂತ ಬಂಗೇರರ ಹಳೆಕೋಟೆಯ ಮನೆಗೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಭೇಟಿ; ಕುಟುಂಬಸ್ಥರಿಗೆ ಸಾಂತ್ವಾನ

Suddi Udaya

ಉಜಿರೆ ಎಸ್.ಡಿ.ಎಂ ಕಾಲೇಜಿನಲ್ಲಿ ಎನ್.ಎಸ್.ಎಸ್ ಶೈಕ್ಷಣಿಕ ಚಟುವಟಿಕೆಗಳ ಉದ್ಘಾಟನಾ ಸಮಾರಂಭ

Suddi Udaya
error: Content is protected !!