September 6, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕನ್ಯಾಡಿ ಲಾಡ್ಜ್ ನಲ್ಲಿ ಅಕ್ರಮ ಜೂಜಾಟ: ಧರ್ಮಸ್ಥಳ ಪೊಲೀಸರಿಂದ ದಾಳಿ: 11 ಮಂದಿಯ ಬಂಧನ ; ರೂ.3 ಲಕ್ಷ ನಗದು ವಶ

ಬೆಳ್ತಂಗಡಿ : ಅಕ್ರಮವಾಗಿ ಜೂಜಾಟ(ಉಲಾಯಿ-ಪಿದಾಯಿ) ಆಡುತ್ತಿದ್ದ ಲಾಡ್ಜ್ ಮೇಲೆ ಬೆಳ್ತಂಗಡಿ ವೃತ್ತ‌ ನಿರೀಕ್ಷಕ ರವಿ.ಬಿ.ಎಸ್ ನೇತೃತ್ವದಲ್ಲಿ ಧರ್ಮಸ್ಥಳ ಪೊಲೀಸರು ದಾಳಿ ಮಾಡಿ 11 ಮಂದಿಯನ್ನು ಬಂಧಿಸಿ 13 ಜನರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಗ್ರಾಮದ ಕನ್ಯಾಡಿ ಬಳಿಯ ಖಾಸಗಿ ಲಾಡ್ಜ್ ನಲ್ಲಿ ಅಕ್ರಮವಾಗಿ ಜನ ಸೇರಿ ಜೂಜಾಟ(ಉಲಾಯಿ-ಪಿದಾಯಿ) ಆಡುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿ ಮೇರೆಗೆ ಡಿ.22 ರಂದು ರಾತ್ರಿ 7:40 ಕ್ಕೆ ಲಾಡ್ಜ್ ಮೇಲೆ ಬೆಳ್ತಂಗಡಿ ವೃತ್ತ‌ ನಿರೀಕ್ಷಕ ರವಿ.ಬಿ.ಎಸ್ ನೇತೃತ್ವದಲ್ಲಿ ಧರ್ಮಸ್ಥಳ ಪೊಲೀಸರು ದಾಳಿ ಮಾಡಿದ್ದಾರೆ.

ದಾಳಿ ವೇಳೆ ಜೂಜಾಟ(ಉಲಾಯಿ-ಪಿದಾಯಿ) ಆಡುತ್ತಿದ್ದ 11 ಮಂದಿಯನ್ನು ಬಂಧಿಸಿದ್ದು‌. ಬಂಧಿತರ ಬಳಿ 3 ಲಕ್ಷದ 7 ಸಾವಿರ ರೂಪಾಯಿ ಹಣ, ಜೂಜಾಟಕ್ಕೆ ಬಳಸಿದ ಚೇಯರ್ ,ಟೇಬಲ್, ಜೂಜಾಟದ ಎಲೆಗಳನ್ನು ವಶಕ್ಕೆ ಪಡೆಯಲಾಗಿದೆ. ಜೂಜಾಟ ಆಡುತ್ತಿದ್ದ ಒಟ್ಟು 13 ಮಂದಿ ವಿರುದ್ಧ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೆಳ್ತಂಗಡಿ ಉಪವಿಭಾಗದ ಡಿವೈಎಸ್ಪಿ ರೋಹಿನಿ.ಸಿ.ಕೆ ಮಾರ್ಗದರ್ಶನದಲ್ಲಿ ಬೆಳ್ತಂಗಡಿ ವೃತ್ತ ನಿರೀಕ್ಷಕ ರವಿ.ಬಿ.ಎಸ್ ನೇತೃತ್ವದಲ್ಲಿ ಧರ್ಮಸ್ಥಳ ಸಬ್ ಇನ್ಸ್‌ಪೆಕ್ಟರ್ ಸಮರ್ಥ ಆರ್ ಗಾಣಿಗೇರ ತಂಡದ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಭಾಗವಹಿಸಿದರು.

Related posts

ಪಡಂಗಡಿ ಸರಕಾರಿ ಪ್ರೌಢ ಶಾಲೆಗೆ ಬೋರ್‌ವೆಲ್ ಸೌಲಭ್ಯವನ್ನು ಒದಗಿಸಿದ ಶಾಸಕ ಹರೀಶ್ ಪೂಂಜ

Suddi Udaya

ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ವತಿಯಿಂದ ವೇದಾವತಿ ರವರಿಗೆ ಮಂಜೂರಾತಿ ಪತ್ರ ವಿತರಣೆ

Suddi Udaya

ಎಸ್ ಡಿ ಎಂ ಪಪೂ ಕಾಲೇಜಿನಲ್ಲಿ ಹಿರಿಯ ವಿದ್ಯಾರ್ಥಿ ಸಂವಾದ

Suddi Udaya

ಬೆಳ್ತಂಗಡಿ ವಾಣಿ ಆಂ.ಮಾ. ಶಾಲೆಯಲ್ಲಿ ನೂತನ ಮಂತ್ರಿಮಂಡಲ ಪ್ರಮಾಣವಚನ ಸಮಾರಂಭ

Suddi Udaya

ಧರ್ಮಸ್ಥಳ: ನೀರಚಿಲುಮೆ ಬಸ್ ಸ್ಟ್ಯಾಂಡಿನ ಬಳಿ ಹೆದ್ದಾರಿ ಬದಿಯಲ್ಲಿ ಕುಸಿದ ರಸ್ತೆ

Suddi Udaya

ಪಡಂಗಡಿ: ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ: ಚಪ್ಪರ ಮೂಹೂರ್ತ, ಕಾರ್ಯಾಲಯ ಉದ್ಘಾಟನೆ

Suddi Udaya
error: Content is protected !!