25.8 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿ

ಉಜಿರೆ ಎಸ್.ಡಿ.ಎಂ ಸಿಬಿಎಸ್ಇ ಶಾಲೆಯಲ್ಲಿ ಪ್ರತಿಭಾ ಕಲರವ ‘ಕಲಾಬ್ದಿ – 2025’: ‘ವಿಷನ್ 25 -26’ ಬಿಡುಗಡೆಗೊಳಿಸಿದ ಡಿ.ಹರ್ಷೇಂದ್ರ ಕುಮಾ‌ರ್

ಉಜಿರೆ : ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ (CBSE, ನವದೆಹಲಿಗೆ ಸಂಯೋಜಿತ) ಶಾಲೆಯ ವತಿಯಿಂದ ವಾರ್ಷಿಕೋತ್ಸವದ ಪ್ರಯುಕ್ತ ಕಾಲೇಜಿನ ಇಂದ್ರಪ್ರಸ್ಥ ಸಭಾಂಗಣದಲ್ಲಿ ಆಯೋಜಿಸಲಾದ ಎರಡು ದಿನದ ವಿದ್ಯಾರ್ಥಿಗಳ ಪ್ರತಿಭಾ ಪ್ರದರ್ಶನ ಕಲಾಬ್ದಿ – 2025 ಎರಡನೇ ದಿನದ ಪ್ರತಿಭಾ ಕಲರವ ನಡೆಯಿತು.

ಎರಡನೇ ದಿನದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಬಣ್ಣ ಬಣ್ಣದ ಉಡುಗೆ ತೊಡುಗೆಗಳ ಜೊತೆಗೆ ವಿನೂತನವಾದ ಭರತನಾಟ್ಯ, ಯಕ್ಷಗಾನ ಸೇರಿದಂತೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳ ಪ್ರದರ್ಶನ ನೀಡಿದರು.

ಇದೇ‌ ಸಂದರ್ಭದಲ್ಲಿ ಶಾಲೆಯ ವಾರ್ಷಿಕ ಮ್ಯಾಗಝಿನ್ ‘ ವಿಷನ್ 2025-26 ಪುಸ್ತಕವನ್ನು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಿ.ಹರ್ಷೇಂದ್ರ ಕುಮಾ‌ರ್ ಬಿಡುಗಡೆಗೊಳಿಸಿದರು.

ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ, ಧರ್ಮಸ್ಥಳದ ಡಾ. ಹೇಮಾವತಿ ವಿ ಹೆಗ್ಗಡೆ ಶೈಕ್ಷಣಿಕ ವರ್ಷದಲ್ಲಿ ವಿಶೇಷ ಸಾಧನೆ ಮಾಡಿದ ಶಾಲೆಯ ವಿದ್ಯಾರ್ಥಿಗಳನ್ನು ಗೌರವಿಸಿ, ಶುಭ ಹಾರೈಸಿದರು. ಈ ವೇಳೆ ಸೋನಿಯಾ ಯಶೋವರ್ಮ, ಮುಖ್ಯ ಶಿಕ್ಷಕ ಮನಮೋಹನ್ ನಾಯ್ಕ್ ಸೇರಿದಂತೆ ಶಾಲೆಯ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಪ್ರತಿಭಾ ಸಮಾರಂಭದಲ್ಲಿ ಎಸ್.ಡಿ.ಎಂ ಶಿಕ್ಷಣ ಸಂಸ್ಥೆಯ ಶೈಕ್ಷಣಿಕ ಸಂಯೋಜಕ ಶಶಿಶೇಖರ್ ಕಾಕತ್ಕಾರ್ ಸೇರಿದಂತೆ ಸಂಸ್ಥೆಯ ವಿವಿಧ ವಿಭಾಗಗಳ ಮುಖ್ಯಸ್ಥರು, ಸಿಬ್ಬಂದಿಗಳು, ಶಿಕ್ಷರು , ವಿದ್ಯಾರ್ಥಿಗಳು ಮತ್ತು ಪೋಷಕರು ಭಾಗಿಯಾಗಿದ್ದರು. ಸಮಾರಂಭವನ್ನು ಶಾಲೆಯ ಆಂಗ್ಲ ಭಾಷಾ ಅಧ್ಯಾಪಕಿ ನೀತು ಪ್ರಸಾದ್ ಮತ್ತು ಶಾಂತಿ ಜಾರ್ಜ್ ನಿರೂಪಿಸಿ, ವಂದಿಸಿದರು.

Related posts

ಲಾಯಿಲ ಗ್ರಾಮ ಪಂಚಾಯತ್ ನಿಂದ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದುರ್ಗಾದೇವಿ ದೇವಸ್ಥಾನದ ಬ್ರಹ್ಮಕಲಶೋತ್ಸವ

Suddi Udaya

ವೇಣೂರು ಪ್ರಾ.ಕೃ.ಪ.ಸ. ಸಂಘದ ನಿವೃತ್ತ ಲೆಕ್ಕಿಗ ಲೋಕಯ್ಯ ಗೌಡ ನಿಧನ

Suddi Udaya

ಕೆದ್ದುವಿನಲ್ಲಿ ಅನಾಥವಾಗಿದ್ದ ಬಾಡಜ್ಜನಿಗೆ ಆಶ್ರಯ ಕಲ್ಪಿಸಿದ ಹಿಂದು ಯುವಶಕ್ತಿ ಆಲಡ್ಕ ಕ್ಷೇತ್ರ ಸಮಾಜ ಸೇವಾ ಸಂಘಟನೆ

Suddi Udaya

ಪರೀಕ ಆತ್ರಾಡಿ ಮಸೀದಿಯಿಂದ ಶ್ರೀನಿವಾಸ ದೇವಸ್ಥಾನದವರೆಗೆ ಅಗಲೀಕರಣದೊಂದಿಗೆ ಡಾಮರೀಕರಣಕ್ಕೆ ಚಾಲನೆ

Suddi Udaya

ನಡ: ಗೌಡರ ಯಾನೆ ಒಕ್ಕಲಿಗರ ಸಂಘದ ಅಧ್ಯಕ್ಷರಾಗಿ ಶ್ಯಾಮಸುಂದರ ಗೌಡ ಆಯ್ಕೆ

Suddi Udaya
error: Content is protected !!