23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಡಿ.ಕೆ.ಆರ್.ಡಿ.ಎಸ್ ಬೆಳ್ತಂಗಡಿ ವತಿಯಿಂದ ಮಾಧ್ಯಮ ಮಿತ್ರರೊಂದಿಗೆ ಕ್ರಿಸ್ಮಸ್ ಸ್ನೇಹಕೂಟ

ಬೆಳ್ತಂಗಡಿ ಧರ್ಮಪ್ರಾಂತ್ಯದ ಸಮಾಜ ಸೇವಾ ವಿಭಾಗವಾದ ಡಿ.ಕೆ.ಆರ್.ಡಿ.ಎಸ್ ನೇತೃತ್ವದಲ್ಲಿ ಮಾಧ್ಯಮ ಮಿತ್ರರೊಂದಿಗೆ ಕ್ರಿಸ್ಮಸ್ ಸ್ನೇಹ ಕೂಟವು ಡಿ.23 ರಂದು ಸಾಂತೋಮ್ ಟವರ್ ನಲ್ಲಿ ನಡೆಯಿತು.

ಡಿ.ಕೆ.ಆರ್.ಡಿ.ಎಸ್ ಸಂಸ್ಥೆಯ ನಿರ್ದೇಶಕರಾದ ವಂದನೀಯ ಫಾ. ಬಿನೋಯಿ ಎ.ಜೆ. ರವರು ಪ್ರಾಸ್ತಾವಿಕ ಮಾತನಾಡಿ ಮಾಧ್ಯಮ ಮಿತ್ರರು ಸಂಸ್ಥೆಯ ಕಾರ್ಯಕ್ರಮಕ್ಕೆ ಸಹಕಾರಕ್ಕೆ ಧನ್ಯವಾದ ತಿಳಿಸಿ, ಕ್ರಿಸ್ಮಸ್ ಸಂದೇಶ ನೀಡಿದರು.

ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ಪ್ರಸಾದ್ ಶೆಟ್ಟಿ ಏಣಿಂಜೆ ಮುಖ್ಯ ಅಭ್ಯಾಗತರಾಗಿ ಆಗಮಿಸಿ ಕಾರ್ಯಕ್ರಮಕ್ಕೆ ಶುಭಹಾರೈಸಿದರು.

ಹಾಜರಿದ್ದ ಎಲ್ಲಾ ಪತ್ರಿಕೆ ಹಾಗೂ ಮೀಡಿಯಾ ಕ್ಲಬ್ಬಿನ ಸದಸ್ಯರಿಗೆ ಕಿರು ಕಾಣಿಕೆ ನೀಡಲಾಯಿತು. ಸಂಯೋಜಕಿ ಕು. ಶ್ರೇಯಾ ಹಾಗೂ ಜಿನಿ ಪಿ.ಜೆ ಪ್ರಾರ್ಥನೆ ಹಾಡಿದರು.
ಸಂಸ್ಥೆಯ ಕಾರ್ಯಕರ್ತರಾದ ಮಾರ್ಕ್ ಡಿ’ಸೋಜರವರು ಕಾರ್ಯಕ್ರಮ ನಿರೂಪಿಸಿದರು. ಸಂಸ್ಥೆಯ ಸಂಯೋಜಕರಾದ ಸುನಿಲ್ ಗೊನ್ಸಾಲ್ವಿಸ್ ಸ್ವಾಗತಿಸಿ, ಶ್ರೇಯ ಧನ್ಯವಾದವಿತ್ತರು.

Related posts

ಶ್ರೀ ಕುಕ್ಕೆ ಸುಬ್ರಹ್ಮಣ್ಯ ಮಠದ ಶ್ರೀವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿಯವರಿಂದ ಬೆನಕ ಆಸ್ಪತ್ರೆಯ ವಿಸ್ತೃತ ಕಟ್ಟಡದ ಧಾರ್ಮಿಕ ಕಾರ್ಯಕ್ರಮಗಳಿಗೆ ಚಾಲನೆ

Suddi Udaya

ಧರ್ಮಸ್ಥಳದ ವಿರುದ್ಧ ಬುರುಡೆ ಷಡ್ಯಂತ್ರ ಪ್ರಕರಣ: ಬೆಳ್ತಂಗಡಿ ಕೋರ್ಟ್ ಗೆ ಆಗಮಿಸಿದ ಖ್ಯಾತ ವಕೀಲ ಸಿ.ವಿ.ನಾಗೇಶ್

Suddi Udaya

ಬೆಳ್ತಂಗಡಿ ವಾಣಿ ಪ.ಪೂ. ಕಾಲೇಜಿನ ಪ್ರಾಂಶುಪಾಲರಾದ ಯದುಪತಿ ಗೌಡರಿಗೆ ಗಡಿನಾಡ ಕನ್ನಡ ಸೇವಾ ರತ್ನ ಪ್ರಶಸ್ತಿ

Suddi Udaya

ಗೇರುಕಟ್ಟೆ : ಪರಪ್ಪು ಮಸೀದಿಯಲ್ಲಿ ಎಸ್.ಎಸ್.ಎಫ್ ಸದಸ್ಯತ್ವ ಅಭಿಯಾನದ ಪೋಸ್ಟರ್ ಬಿಡುಗಡೆ

Suddi Udaya

ಧರ್ಮಸ್ಥಳ ಪೊಲೀಸ್ ಠಾಣೆಯ ನೂತನ ಕಟ್ಟಡದ ಉದ್ಘಾಟನೆ

Suddi Udaya

ಚಾಮಾ೯ಡಿ ಘಾಟಿಯಲ್ಲಿ ಬಸ್ಸು ಲಾರಿ ಮುಖಾಮುಖಿ ಡಿಕ್ಕಿ: ಗಂಟೆ ಗಟ್ಟಲೇ ಟ್ರಾಫಿಕ್ ಜಾಮ್

Suddi Udaya
error: Content is protected !!