September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗ್ರಾಮಗಳಲ್ಲಿ ಕಿರು ಉದ್ದಿಮೆಗಳ ಮೂಲಕ ಲಕ್ಷಾಂತರ ಸ್ವ ಉದ್ಯೋಗಗಳನ್ನು ಸೃಷ್ಟಿಸಿದ ಗ್ರಾಮಾಭಿವೃದ್ಧಿ ಯೋಜನೆಗೆ ‘ಬಿ.ಸಿ. ಮಾದರಿಯ ಶ್ರೇಷ್ಠ ಎಂ.ಎಸ್.ಎಂ.ಇ. ಪೋಷಕ ಸಂಸ್ಥೆ’ ಪ್ರಶಸ್ತಿ

ಬೆಳ್ತಂಗಡಿ: ಭಾರತೀಯ ರಿಸರ್ವ್ ಬ್ಯಾಂಕ್‌ನ ನಿಯಮದಂತೆ ‘ಬ್ಯಾಂಕ್‌ಗಳ ವ್ಯವಹಾರ ಪ್ರತಿನಿಧಿ’ ಆಗಿ ಸೇವೆಗೈಯುತ್ತಿರುವ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ದೇಶದ ಬ್ಯಾಂಕಿಂಗ್ ಸೇವಾ ಕ್ಷೇತ್ರದಲ್ಲಿ ಮಾಡಿದ ಸಾಧನೆಗೆ ‘ಭಾರತೀಯ ಅತೀ ಸಣ್ಣ ಮತ್ತು ಮಧ್ಯಮ ಉದ್ಯಮಗಳ ಸಂಘಟನೆ ಕೊಡಮಾಡುವ ಅತ್ಯುನ್ನತ ಪ್ರಶಸ್ತಿಯಾದ ‘ಬಿ.ಸಿ. ಮಾದರಿಯ ಶ್ರೇಷ್ಠ ಎಂ.ಎಸ್.ಎಂ.ಇ. ಪೋಷಕ ಸಂಸ್ಥೆ–2025 ಪ್ರಶಸ್ತಿ’ ಲಭಿಸಿದೆ.

ದೇಶದಲ್ಲಿ ಬಿ.ಸಿ.ಯಾಗಿ ಕಾರ್ಯನಿರ್ವಹಿಸುತ್ತಿರುವ ಸಂಸ್ಥೆಗಳ ಪೈಕಿ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ಮಾತ್ರ ಈ ಪ್ರಶಸ್ತಿಗೆ ಭಾಜನವಾಗಿದೆ.
ಇತ್ತೀಚೆಗೆ ನವದೆಹಲಿಯಲ್ಲಿ ಕೇಂದ್ರ ಸರಕಾರದ ವಾಣಿಜ್ಯ ಮತ್ತು ಕೈಗಾರಿಕಾ ಸಚಿವರಾದ ಪಿಯೂಷ್ ಗೋಯಲ್‌ರವರು ಪ್ರಶಸ್ತಿ ಪ್ರಧಾನ ಮಾಡಿದರು. ಈ ಸಂದರ್ಭದಲ್ಲಿ ಡಾ|| ಡಿ. ವೀರೇಂದ್ರ ಹೆಗ್ಗಡೆಯವರು ಪ್ರಾರಂಭಿಸಿದ ಈ ಬಿ.ಸಿ. ಕಾರ್ಯಚಟುವಟಿಕೆ ಕೊಡುಗೆಗಳನ್ನು ಮಾನ್ಯ ಸಚಿವರು ಶ್ಲಾಘಿಸಿದರು. ಗ್ರಾಮಾಭಿವೃದ್ಧಿ ಯೋಜನೆಯ ಟ್ರಸ್ಟಿಗಳಾದ ಡಿ. ಸುರೇಂದ್ರ ಕುಮಾರ್‌ರವರು ಪ್ರಶಸ್ತಿಯನ್ನು ಸ್ವೀಕರಿಸಿದರು. ಗ್ರಾಮಾಭಿವೃದ್ಧಿ ಯೋಜನೆಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಅನಿಲ್ ಕುಮಾರ್ ಎಸ್.ಎಸ್., ಯೋಜನೆಯ ಮುಖ್ಯ ಹಣಕಾಸು ಅಧಿಕಾರಿಗಳಾದ ಶಾಂತರಾಮ್ ಆರ್. ಪೈಯವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Related posts

ವೈಟ್ ಲಿಫ್ಟಿಂಗ್ ನಲ್ಲಿ ಪ್ರತ್ಯೂಷ್ ರವರ ಸಾಧನೆ: ಬರೆಂಗಾಯ ನಿಸರ್ಗ ಯುವಜನೇತರ ಮಂಡಲ ವತಿಯಿಂದ ಅಭಿನಂದನೆ

Suddi Udaya

ಮೈರೋಳ್ತಡ್ಕ: ಪ್ರಬುದ್ಧ ಜ್ಞಾನ ವಿಕಾಸ ಕೇಂದ್ರದ ಸದಸ್ಯರಿಗೆ ಅಭಿನಂದನಾ ಕಾರ್ಯಕ್ರಮ

Suddi Udaya

ವಿಶ್ವಕರ್ಮ ಸಹಕಾರ ಬ್ಯಾಂಕಿನ ಉಜಿರೆ ಶಾಖೆಯ ವತಿಯಿಂದ “ಸ್ವಚ್ಛತಾ ಹೀ ಸೇವಾ” : ದೇಶಾದ್ಯಂತ ಹೆಚ್ಚುತ್ತಿದೆ ಸ್ವಚ್ಛತೆಯ ಜಾಗೃತಿ: ಪ್ರತಾಪಸಿಂಹ ನಾಯಕ್‌

Suddi Udaya

ಉಜಿರೆ: ಅಮೃತ್ ಸಿಲ್ಕ್ಸ್ ರೆಡಿಮೇಡ್ಸ್ & ಟೆಕ್ಸ್‌ಟೈಲ್ಸ್‌ನಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ‘ವಿಜಯೋತ್ಸವ’: ರೂ.2 ಸಾವಿರ ಮೇಲ್ಪಟ್ಟ ಖರೀದಿಗೆ ಲಕ್ಕೀ ಡ್ರಾ ಕೂಪನ್

Suddi Udaya

ಮೇಲಂತಬೆಟ್ಟು ಗ್ರಾ.ಪಂ. ವ್ಯಾಪ್ತಿಯಲ್ಲಿ ಉಪವಲಯ ಅರಣ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿ ವರ್ಗಾವಣೆಗೊಂಡ ಸುರೇಶ ಗೌಡ್ರ ರವರಿಗೆ ಸನ್ಮಾನ

Suddi Udaya

ಮೇಲಂತಬೆಟ್ಟು: ಕೊಡಮಣಿತ್ತಾಯ ಮತ್ತು ಬ್ರಹ್ಮ ಬೈದರ್ಕಳ ವರ್ಷಾವಧಿ ಜಾತ್ರೆ

Suddi Udaya
error: Content is protected !!